WPL 2023: ಯುಪಿ ವಾರಿಯರ್ಸ್ ವಿರುದ್ಧ 127 ರನ್‌ಗಳಿಗೆ ಮುಂಬೈ ಇಂಡಿಯನ್ಸ್ ಆಲೌಟ್
ಶನಿವಾರ ಇಲ್ಲಿ ನಡೆದ ಯುಪಿ ವಾರಿಯರ್ಸ್ ವಿರುದ್ಧದ ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ 127 ರನ್‌ಗಳಿಗೆ ಆಲೌಟ್ ಆಯಿತು.
Published: 18th March 2023 05:24 PM | Last Updated: 18th March 2023 05:30 PM | A+A A-

ಯುಪಿ ವಾರಿಯರ್ಸ್ ವಿರುದ್ಧ 127 ರನ್‌ಗಳಿಗೆ ಮುಂಬೈ ಇಂಡಿಯನ್ಸ್ ಆಲೌಟ್
ನವಿ ಮುಂಬೈ: ಶನಿವಾರ ಇಲ್ಲಿ ನಡೆದ ಯುಪಿ ವಾರಿಯರ್ಸ್ ವಿರುದ್ಧದ ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ 127 ರನ್‌ಗಳಿಗೆ ಆಲೌಟ್ ಆಯಿತು.
ಮುಂಬೈ ಇಂಡಿಯನ್ಸ್ ಪರ ಆರಂಭಿಕ ಆಟಗಾರ್ತಿ ಹೇಲಿ ಮ್ಯಾಥ್ಯೂಸ್ 30 ಎಸೆತಗಳಲ್ಲಿ 35 ರನ್ ಗಳಿಸಿದರೆ, ನಾಯಕಿ ಹರ್ಮನ್‌ಪ್ರೀತ್ ಕೌರ್ ಮತ್ತು ಇಸ್ಸಿ ವಾಂಗ್ ಕ್ರಮವಾಗಿ 25 ಮತ್ತು 32 ರನ್ ಗಳಿಸಿದರು.
ಆಡಿರುವ ಐದು ಪಂದ್ಯಗಳಲ್ಲಿ ಐದರಲ್ಲಿಯೂ ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿರುವ ಮುಂಬೈ ಇಂಡಿಯನ್ಸ್ ತಂಡ, ಟೂರ್ನಿಯಲ್ಲಿ ಅಜೇಯವಾಗಿ ಮುಂದುವರಿಯುವ ವಿಶ್ವಾಸದಲ್ಲಿದೆ. ಆದರೆ, 127 ರನ್‌ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.
#WPL2023: Mumbai Indians allout at 127 (Matthews 35; Ecclestone 3/15) in 20 overs against UP Warriorz in Mumbai.#MIvUPW #MumbaiIndians #UPWarriorz https://t.co/FF5SPSTmrs pic.twitter.com/GFNwQyb0tl
— IANS (@ians_india) March 18, 2023
ಇತ್ತ ಯುಪಿ ವಾರಿಯರ್ಸ್ ಮೂರನೇ ಗೆಲುವಿಗಾಗಿ ಮುಂಬೈ ಇಂಡಿಯನ್ಸ್ ತಂಡವನ್ನು ಆಲೌಟ್ ಮಾಡುವಲ್ಲಿ ಯಶಸ್ವಿಯಾಗಿದೆ.
ಯುಪಿ ವಾರಿಯರ್ಸ್ ಪರ ಸೋಫಿ ಎಕ್ಲೆಸ್ಟೋನ್ 15 ರನ್ ನೀಡಿ ಮೂರು ವಿಕೆಟ್ ಪಡೆದರೆ, ರಾಜೇಶ್ವರಿ ಗಾಯಕ್ವಾಡ್ ಮತ್ತು ದೀಪ್ತಿ ಶರ್ಮಾ ತಲಾ ಎರಡು ವಿಕೆಟ್ ಪಡೆದರು.
ಹರ್ಮನ್‌ಪ್ರೀಯತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ ಆಡಿರುವ ಐದು ಪಂದ್ಯಗಳಲ್ಲಿ ಐದರಲ್ಲಿಯೂ ಗೆದ್ದಿದ್ದು 10 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಯುಪಿ ವಾರಿಯರ್ಸ್ ಆಡಿರುವ 5 ಪಂದ್ಯಗಳಲ್ಲಿ 2ರಲ್ಲಿ ಗೆಲುವು ಸಾಧಿಸಿದ್ದು 3 ಪಂದ್ಯಗಳ ಸೋಲಿನೊಂದಿಗೆ 4 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ.