
ಆಸ್ಟ್ರೇಲಿಯಾ ತಂಡ
ವಿಶಾಖಪಟ್ಟಣಂ: ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆಲುವಿನ ನಗೆ ಬೀರಿದ್ದ ಟೀಂ ಇಂಡಿಯಾ ಇದೀಗ ಎರಡನೇ ಪಂದ್ಯದಲ್ಲಿ 117 ರನ್ ಗಳಿಗೆ ಆಲೌಟ್ ಆಗಿದೆ.
ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ಆಸ್ಟ್ರೇಲಿಯಾ ಬೌಲರ್ ಗಳ ಮಾರಕ ದಾಳಿಗೆ ತತ್ತರಿಸಿದರು.
ಇದನ್ನೂ ಓದಿ: ಕೆಎಲ್ ರಾಹುಲ್ ತಾಳ್ಮೆಯ ಆಟ: ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ 5 ವಿಕೆಟ್ ಜಯ
ಟೀಂ ಇಂಡಿಯಾ ಪರ ರೋಹಿತ್ ಶರ್ಮಾ 13, ಶುಭ್ಮನ್ ಗಿಲ್ 0, ವಿರಾಟ್ ಕೊಹ್ಲಿ 31, ಸೂರ್ಯಕುಮಾರ್ ಯಾದವ್ 0, ಕೆಎಲ್ ರಾಹುಲ್ 9, ಹಾರ್ದಿಕ್ ಪಾಂಡ್ಯ 1, ರವೀಂದ್ರ ಜಡೇಜಾ 16 ಮತ್ತು ಅಕ್ಷರ್ ಪಟೇಲ್ ಅಜೇಯ 29 ರನ್ ಬಾರಿಸಿದ್ದಾರೆ.
ಆಸ್ಟ್ರೇಲಿಯಾ ಪರ ಮಿಚೆಲ್ ಸ್ಟಾರ್ಕ್ 5 ವಿಕೆಟ್, ಸೀನ್ ಅಬಾಟ್ 3 ಮತ್ತು ನಾಥನ್ ಎಲ್ಲಿಸ್ 2 ವಿಕೆಟ್ ಪಡೆದಿದ್ದಾರೆ.
ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಮೊದಲ ಪಂದ್ಯದಲ್ಲಿ ಜಯ ಗಳಿಸಿದೆ.