
ಭಾರತ ತಂಡ
ಚೆನ್ನೈ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಬ್ಯಾಟಿಂಗ್ ಮಾಡುತ್ತಿದ್ದು 20 ಓವರ್ ಗಳ ಮುಕ್ತಾಯಕ್ಕೆ 3 ವಿಕೆಟ್ ನಷ್ಟಕ್ಕೆ 106 ರನ್ ಪೇರಿಸಿದೆ.
ಆಸ್ಟ್ರೇಲಿಯಾ ಪರ ಹೆಡ್ 33, ಮಿಚೆಲ್ ಮಾರ್ಷ್ 47 ಬಾರಿಸಿ ಔಟಾಗಿದ್ದರೆ, ಡೇವಿಡ್ ವಾರ್ನರ್ ಅಜೇಯ 16 ಮತ್ತು ಲ್ಯಾಬುಸ್ಚಾಗ್ನೆ ಅಜೇಯ 9 ರನ್ ಗಳಿಸಿ ಆಡುತ್ತಿದ್ದಾರೆ. ಭಾರತದ ಪರ ಹಾರ್ದಿಕ್ ಪಾಂಡ್ಯ 3 ವಿಕೆಟ್ ಪಡೆದಿದ್ದಾರೆ.
ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಉಭಯ ತಂಡಗಳು ತಲಾ ಒಂದು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು ಇಂದು ಪಂದ್ಯ ಸರಣಿ ನಿರ್ಣಾಯಕ ಪಂದ್ಯವಾಗಿದೆ.