ಡಬ್ಲ್ಯೂಪಿಎಲ್ 2023: ಏಳು ವಿಕೆಟ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ಮಣಿಸಿ ಚೊಚ್ಚಲ ಪ್ರಶಸ್ತಿ ಗೆದ್ದ ಮುಂಬೈ ಇಂಡಿಯನ್ಸ್!
ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯೂಪಿಎಲ್ ) ಟಿ-20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಏಳು ವಿಕೆಟ್ ಗಳಿಂದ ಮಣಿಸಿದ ಮುಂಬೈ ಇಂಡಿಯನ್ಸ್ ಚೊಚ್ಚಲ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.
Published: 26th March 2023 11:41 PM | Last Updated: 27th March 2023 12:05 AM | A+A A-

ಮುಂಬೈ ಇಂಡಿಯನ್ಸ್ ಆಟಗಾರ್ತಿಯರ ಸಂಭ್ರಮ
ಮುಂಬೈ: ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯೂಪಿಎಲ್ ) ಟಿ-20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಏಳು ವಿಕೆಟ್ ಗಳಿಂದ ಮಣಿಸಿದ ಮುಂಬೈ ಇಂಡಿಯನ್ಸ್ ಚೊಚ್ಚಲ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 16 ಓವರ್ ಗಳಿಗೆ 9 ವಿಕೆಟ್ ನಷ್ಟಕ್ಕೆ ಕೇವಲ 131 ರನ್ ಗಳಿಸಲಷ್ಟೇ ಶಕ್ತವಾಯಿತು. ಮುಂಬೈ ಪರ ಅಮೋಘ ಬೌಲಿಂಗ್ ದಾಳಿ ನಡೆಸಿದ ಹೆಲಿಯಿ ಮ್ಯಾಥ್ಯೂಸ್ 4 ಓವರ್ ಗಳಲ್ಲಿ ಕೇವಲ 5 ರನ್ ನೀಡಿ ಪ್ರಮುಖ 3 ವಿಕೆಟ್ ಕಬಳಿಸಿದರು.
ಇದನ್ನೂ ಓದಿ: WPL-2023: ಯುಪಿ ವಾರಿಯರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ 72 ರನ್ ಭರ್ಜರಿ ಜಯ, ಫೈನಲ್ ಗೆ ಲಗ್ಗೆ
ಇಸಾಬೆಲ್ ವಾಂಗ್ 3, ಅಮೇಲಿ ಕೆರ್ 2 ವಿಕೆಟ್ ಪಡೆದರು. ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 131 ರನ್ ಗಳ ಗುರಿ ಬೆನ್ನಟ್ಟಿದ್ದ ಮುಂಬೈ ಇಂಡಿಯನ್ಸ್ ತಂಡ 19.3 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 134 ರನ್ ಗಳಿಸುವ ಮೂಲಕ ವಿಜಯದ ನಗೆ ಬೀರಿತು.
ಮುಂಬೈ ಇಂಡಿಯನ್ಸ್ ಪರ ಹೆಲಿ ಮ್ಯಾಥ್ಯೂಸ್ 13, ನ್ಯಾಟ್ ಸ್ಕಿವರ್ ಬ್ರಂಟ್ ಅಜೇಯ 60, ಹರ್ಮನ್ ಪ್ರೀತ್ ಕೌರ್ 37, ಅಮೆಲಿಯಾ ಕೆರ್ 14 ರನ್ ಗಳಿಸುವ ಮೂಲಕ ಮುಂಬೈ ಇಂಡಿಯನ್ಸ್ ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಳ್ಳಲು ಕಾರಣರಾದರು. ನ್ಯಾಟ್ ಸ್ಕಿವರ್-ಬ್ರಂಟ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿಗೆ ಭಾಜನರಾದರು.