ಐಪಿಎಲ್ 2023: ಉದ್ಘಾಟನಾ ಸಮಾರಂಭದಲ್ಲಿ ತಮನ್ನಾ, ರಶ್ಮಿಕಾ ಡ್ಯಾನ್ಸ್!
ಐಪಿಎಲ್ 2023 ರ ಉದ್ಘಾಟನಾ ಸಮಾರಂಭದಲ್ಲಿ ನಟಿ ತಮನ್ನಾ ಭಾಟಿಯಾ ನೃತ್ಯ ಪ್ರದರ್ಶನ ಮಾಡಲಿದ್ದಾರೆ. ಟ್ವೀಟರ್ ನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಈ ಸುದ್ದಿಯನ್ನು ಪ್ರಕಟಿಸಿದೆ.
Published: 30th March 2023 12:00 AM | Last Updated: 30th March 2023 02:27 PM | A+A A-

ತಮ್ಮನಾ ಭಾಟಿಯಾ
ಮುಂಬೈ: ಐಪಿಎಲ್ 2023 ರ ಉದ್ಘಾಟನಾ ಸಮಾರಂಭದಲ್ಲಿ ನಟಿ ತಮನ್ನಾ ಭಾಟಿಯಾ ನೃತ್ಯ ಪ್ರದರ್ಶನ ಮಾಡಲಿದ್ದಾರೆ. ಟ್ವೀಟರ್ ನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಈ ಸುದ್ದಿಯನ್ನು ಪ್ರಕಟಿಸಿದೆ.
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಾರ್ಚ್ 31 ರಂದು ನಡೆಯಲಿರುವ ಐಪಿಎಲ್ ಉದ್ಘಾಟನಾ ಸಮಾರಂಭದಲ್ಲಿ ತಮನ್ನಾ ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ. ಗುಜರಾತ್‌ನ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ.
ಈ ವರ್ಷದ ಉದ್ಘಾಟನಾ ಸಮಾರಂಭದಲ್ಲಿ ನಟರಾದ ಟೈಗರ್ ಶ್ರಾಫ್, ಕತ್ರಿನಾ ಕೈಫ್, ರಶ್ಮಿಕಾ ಮಂದಣ್ಣ ಮತ್ತು ಗಾಯಕ ಅರಿಜಿತ್ ಸಿಂಗ್ ಕೂಡ ಪ್ರದರ್ಶನ ನೀಡಲಿದ್ದಾರೆ ಎಂದು ವರದಿಯಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ನಡುವಿನ ಪಂದ್ಯದೊಂದಿಗೆ ಐಪಿಎಲ್ ಆರಂಭವಾಗಲಿದೆ.
Join @tamannaahspeaks in the incredible #TATAIPL Opening Ceremony as we celebrate the biggest cricket festival at the biggest cricket stadium in the world - Narendra Modi Stadium!
— IndianPremierLeague (@IPL) March 29, 2023
31st March, 2023 - 6 PM IST on @StarSportsIndia & @JioCinema
Make sure to tune in & join! pic.twitter.com/u9HtOcD9tm
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆರಂಭಿಕ ಪಂದ್ಯ ಆಯೋಜನೆಯೊಂದಿಗೆ ದೇಶಾದ್ಯಂತ 12 ಸ್ಥಳಗಳಲ್ಲಿ ಪಂದ್ಯಗಳು ನಡೆಯಲಿದ್ದು, ಮೇ 28 ರಂದು ಅಹಮಬಾದ್ ನಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಮೊಹಾಲಿ, ಲಕ್ನೋ, ಹೈದರಾಬಾದ್, ಬೆಂಗಳೂರು, ಚೆನ್ನೈ, ದೆಹಲಿ, ಕೋಲ್ಕತ್ತಾ, ಜೈಪುರ, ಮುಂಬೈ, ಗುವಾಹಟಿ ಮತ್ತು ಧರ್ಮಶಾಲಾ ಸೇರಿದಂತೆ ಒಟ್ಟು 12 ಕಡೆಗಳಲ್ಲಿ ಐಪಿಎಲ್ ಪಂದ್ಯಾವಳಿ ಆಯೋಜಿಸಲಾಗಿದೆ.