ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾನುವಾರ ಐಪಿಎಲ್ ಪಂದ್ಯ: ಟಿಕೆಟ್ ಖರೀದಿಗೆ ಕ್ರಿಕೆಟ್ ಅಭಿಮಾನಿಗಳ ನೂಕುನುಗ್ಗಲು

ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಆವೃತ್ತಿಗೆ​ ಇಂದು ಶುಕ್ರವಾರ ಸಂಜೆ 6 ಗಂಟೆಗೆ ಚಾಲನೆ ದೊರೆಯಲಿದೆ. IPL 2023 ರ ಉದ್ಘಾಟನಾ ಸಮಾರಂಭವು ಹೊಸ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸಂಜೆ 6ಕ್ಕೆ ಆರಂಭವಾಗಲಿದೆ.
ಟಿಕೆಟ್ ಖರೀದಿಗೆ ಕ್ರಿಕೆಟ್ ಅಭಿಮಾನಿಗಳ ನೂಕುನುಗ್ಗಲು
ಟಿಕೆಟ್ ಖರೀದಿಗೆ ಕ್ರಿಕೆಟ್ ಅಭಿಮಾನಿಗಳ ನೂಕುನುಗ್ಗಲು

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಆವೃತ್ತಿಗೆ​ ಇಂದು ಶುಕ್ರವಾರ ಸಂಜೆ 6 ಗಂಟೆಗೆ ಚಾಲನೆ ದೊರೆಯಲಿದೆ. 

IPL 2023 ರ ಉದ್ಘಾಟನಾ ಸಮಾರಂಭವು ಹೊಸ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸಂಜೆ 6ಕ್ಕೆ ಆರಂಭವಾಗಲಿದೆ.

ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪ್ರೇಕ್ಷಕರನ್ನು ರಂಜಿಸಲು, ಗ್ಲಾಮರ್ ಟಚ್ ನೀಡಲು ರಶ್ಮಿಕಾ ಮಂದಣ್ಣ, ತಮನ್ನಾ ಭಾಟಿಯಾ ಸೇರಿದಂತೆ ಅನೇಕರು ಡ್ಯಾನ್ಸ್ ಗೆ ಹೆಜ್ಜೆ ಹಾಕಲಿದ್ದಾರೆ. 

ಇದೇ ಭಾನುವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್ ಕ್ರಿಕೆಟ್ ಗೆ ಭಾರೀ ಸಂಖ್ಯೆಯಲ್ಲಿ ಪ್ರೇಕ್ಷಕರು ಸೇರುವ ಸಾಧ್ಯತೆಯಿದೆ. ಪಂದ್ಯ ವೀಕ್ಷಿಸಲು ಟಿಕೆಟ್ ಖರೀದಿಗೆ ಕ್ರೀಡಾಂಗಣದ ಹೊರಗೆ ನೂಕುನುಗ್ಗಲು ಕಂಡುಬಂತು. ಕ್ರಿಕೆಟ್ ಅಭಿಮಾನಿಗಳ ಸಾಲನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.ಲಘು ಲಾಠಿಪ್ರಹಾರ ನಡೆಸಿದ್ದು ಕಂಡುಬಂತು. 

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆರಂಭಿಕ ಪಂದ್ಯ ಆಯೋಜನೆಯೊಂದಿಗೆ ದೇಶಾದ್ಯಂತ 12 ಸ್ಥಳಗಳಲ್ಲಿ ಪಂದ್ಯಗಳು ನಡೆಯಲಿದ್ದು, ಮೇ 28 ರಂದು ಅಹಮಬಾದ್ ನಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಮೊಹಾಲಿ, ಲಕ್ನೋ, ಹೈದರಾಬಾದ್, ಬೆಂಗಳೂರು, ಚೆನ್ನೈ, ದೆಹಲಿ, ಕೋಲ್ಕತ್ತಾ, ಜೈಪುರ, ಮುಂಬೈ, ಗುವಾಹಟಿ ಮತ್ತು ಧರ್ಮಶಾಲಾ ಸೇರಿದಂತೆ ಒಟ್ಟು 12 ಕಡೆಗಳಲ್ಲಿ ಐಪಿಎಲ್ ಪಂದ್ಯಾವಳಿ ಆಯೋಜಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com