ಐಪಿಎಲ್ 2023: ಕೆಎಲ್ ರಾಹುಲ್ ಅನುಪಸ್ಥಿತಿ ಲಖನೌಗೆ ಕಂಟಕ; ಗುಜರಾತ್ ಟೈಟಾನ್ಸ್ ವಿರುದ್ಧ 56 ರನ್‌ಗಳಿಂದ ಸೋಲು!

ಇಂಡಿಯನ್ ಪ್ರೀಮಿಯರ್ ಲೀಗ್ 2023ರ 51ನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ 56 ರನ್ ಗಳ ಬೃಹತ್ ಜಯ ದಾಖಲಿದೆ.
ಗುಜರಾತ್ ಟೈಟಾನ್ಸ್
ಗುಜರಾತ್ ಟೈಟಾನ್ಸ್
Updated on: 

ಅಹಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ 2023ರ 51ನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ 56 ರನ್ ಗಳ ಬೃಹತ್ ಜಯ ದಾಖಲಿದೆ.

ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ತಂಡ 2 ವಿಕೆಟ್ ನಷ್ಟಕ್ಕೆ 227 ರನ್ ಗಳಿಸಿತ್ತು. ತಂಡದ ಪರ ಆರಂಭಿಕರಾದ ವೃದ್ಧಿಮಾನ್ ಸಹಾ ಮತ್ತು ಶುಭಮನ್ ಗಿಲ್ ಮೊದಲ ವಿಕೆಟ್‌ಗೆ 142 ರನ್ ಜೊತೆಯಾಟ ಆಡಿದರು. ವೃದ್ಧಿಮಾನ್ ಸಹಾ 43 ಎಸೆತಗಳಲ್ಲಿ 10 ಬೌಂಡರಿ ಹಾಗೂ 4 ಸಿಕ್ಸರ್‌ಗಳ ನೆರವಿನಿಂದ 81 ರನ್ ಗಳಿಸಿದರು. ಅದೇ ಸಮಯದಲ್ಲಿ, ಶುಭಮನ್ ಗಿಲ್ 51 ಎಸೆತಗಳಲ್ಲಿ 2 ಬೌಂಡರಿ ಮತ್ತು 7 ಸಿಕ್ಸರ್‌ಗಳೊಂದಿಗೆ ಅಜೇಯ 94 ರನ್ ಗಳಿಸಿದರು. 

ಟೈಟಾನ್ಸ್ ನೀಡಿದ 229 ರನ್‌ಗಳ ಗುರಿ ಬೆನ್ನಟ್ಟಿದ ಲಖನೌ ತಂಡ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 171 ರನ್ ಗಳಿಸಲಷ್ಟೇ ಶಕ್ತವಾಯಿತು. ಲಖನೌ ಪರ ಆರಂಭಿಕರಾದ ಕ್ವಿಂಟನ್ ಡಿ ಕಾಕ್ 41 ಎಸೆತಗಳಲ್ಲಿ 70 ರನ್ ಗಳಿಸಿದರು.

ಗುಜರಾತ್ ಪರ ಮೋಹಿತ್ ಶರ್ಮಾ ನಾಲ್ಕು ವಿಕೆಟ್ ಪಡೆದಿದ್ದಾರೆ. ಅದೇ ಸಮಯದಲ್ಲಿ ಮೊಹಮ್ಮದ್ ಶಮಿ, ರಶೀದ್ ಖಾನ್ ಮತ್ತು ನೂರ್ ಅಹ್ಮದ್ ತಲಾ ಒಂದು ವಿಕೆಟ್ ಪಡೆದರು. ಲಖನೌ ಪರ ಮೊಹ್ಸಿನ್ ಖಾನ್ ಮತ್ತು ಅವೇಶ್ ತಲಾ ಒಂದು ವಿಕೆಟ್ ಪಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com