IPL 2023: ಕೊನೆಯ ಎಸೆತದಲ್ಲಿ ಸಿಕ್ಸರ್ ಮೂಲಕ ರಾಜಸ್ಥಾನ ರಾಯಲ್ಸ್ ವಿರುದ್ಧ ಹೈದರಾಬಾದ್ ಗೆ ರೋಚಕ ಜಯ
ಇಂಡಿಯನ್ ಪ್ರೀಮಿಯರ್ ಲೀಗ್ 2023 ರ 52ನೇ ಪಂದ್ಯದಲ್ಲಿ, ರಾಜಸ್ಥಾನ್ ರಾಯಲ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ 4 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.
Published: 08th May 2023 12:47 AM | Last Updated: 08th May 2023 12:47 AM | A+A A-

ಸನ್ ರೈಸರ್ಸ್ ಹೈದರಾಬಾದ್
ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ 2023 ರ 52ನೇ ಪಂದ್ಯದಲ್ಲಿ, ರಾಜಸ್ಥಾನ್ ರಾಯಲ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ 4 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.
ಪಂದ್ಯವನ್ನು ಗೆಲ್ಲಲು ಹೈದರಾಬಾದ್‌ಗೆ ಕೊನೆಯ ಎಸೆತದಲ್ಲಿ 5 ರನ್ ಅಗತ್ಯವಿತ್ತು. ಈ ವೇಳೆ ಬೌಲರ್ ಸಂದೀಪ್ ಶರ್ಮಾ ಅವರ ನೋಬಾಲ್ ರಾಜಸ್ಥಾನದ ಕೈಯಿಂದ ಪಂದ್ಯವನ್ನು ಕಸಿದುಕೊಂಡಿತು.
ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ ತಂಡ ನಿಗದಿತ 20 ಓವರ್‌ಗಳಲ್ಲಿ 2 ವಿಕೆಟ್‌ಗೆ 214 ರನ್ ಗಳಿಸಿತು. ತಂಡದ ಪರ ಆರಂಭಿಕ ಆಟಗಾರ ಜೋಸ್ ಬಟ್ಲರ್ 59 ಎಸೆತಗಳಲ್ಲಿ 95 ರನ್ ಗಳಿಸಿ ಇನ್ನಿಂಗ್ಸ್ ಆಡಿದರು. ಅದೇ ಸಮಯದಲ್ಲಿ ನಾಯಕ ಸಂಜು ಸ್ಯಾಮ್ಸನ್ 38 ಎಸೆತಗಳಲ್ಲಿ ಅಜೇಯ 66 ರನ್ ಗಳಿಸಿದರು.
ಇದನ್ನೂ ಓದಿ: ಐಪಿಎಲ್ 2023: ಕೆಎಲ್ ರಾಹುಲ್ ಅನುಪಸ್ಥಿತಿ ಲಖನೌಗೆ ಕಂಟಕ; ಗುಜರಾತ್ ಟೈಟಾನ್ಸ್ ವಿರುದ್ಧ 56 ರನ್‌ಗಳಿಂದ ಸೋಲು!
215 ರನ್‌ಗಳ ಗುರಿ ಬೆನ್ನತ್ತಿದ ಹೈದರಾಬಾದ್ ತಂಡ ಪಂದ್ಯದ ಕೊನೆಯ ಎಸೆತದಲ್ಲಿ 4 ವಿಕೆಟ್‌ಗಳಿಂದ ಜಯ ಸಾಧಿಸಿತು. ಹೈದರಾಬಾದ್ ಪರ ಅಭಿಷೇಕ್ ಶರ್ಮಾ 34 ಎಸೆತಗಳಲ್ಲಿ 55 ರನ್ ಗಳಿಸಿದರು. ಅದೇ ಸಮಯದಲ್ಲಿ, ರಾಹುಲ್ ತ್ರಿಪಾಠಿ 29 ಎಸೆತಗಳಲ್ಲಿ 47 ರನ್ ಗಳಿಸಿದರು.
ರಾಜಸ್ಥಾನ ಪರ ಯಜುವೇಂದ್ರ ಚಹಾಲ್ ನಾಲ್ಕು ವಿಕೆಟ್ ಪಡೆದರು. ಅದೇ ವೇಳೆ ಕುಲದೀಪ್ ಯಾದವ್ ಮತ್ತು ರವಿಚಂದ್ರನ್ ಅಶ್ವಿನ್ ತಲಾ ಒಂದು ವಿಕೆಟ್ ಪಡೆದರು. ಹೈದರಾಬಾದ್ ಪರ ಬೌಲಿಂಗ್ ನಲ್ಲಿ ಭುವನೇಶ್ವರ್ ಅಕುಮಾರ್ ಮತ್ತು ಮಾರ್ಕೊ ಜಾನ್ಸೆನ್ ತಲಾ ಒಂದು ವಿಕೆಟ್ ಪಡೆದರು.