
ರಾಜಸ್ತಾನ ರಾಯಲ್ಸ್
ಕೋಲ್ಕತ್ತಾ: ಇಂಡಿಯನ್ ಪ್ರೀಮಿಯರ್ ಲೀಗ್ 2023(IPL)ರ 56ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ರಾಜಸ್ಥಾನ ರಾಯಲ್ಸ್ ತಂಡ 9 ವಿಕೆಟ್ ಗಳಿಂದ ಗೆಲುವು ಸಾಧಿಸಿದ್ದಾರೆ.
ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್(KKR) ಮತ್ತು ರಾಜಸ್ಥಾನ್ ರಾಯಲ್ಸ್ (RR) ನಡುವೆ ನಡೆದಿದ್ದ ಟಾಸ್ ಗೆದ್ದ ರಾಜಸ್ಥಾನ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು.
ಕೋಲ್ಕತ್ತಾ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿತು. ಕೋಲ್ಕತ್ತಾ ಪರ ವೆಂಕಟೇಶ್ ಅಯ್ಯರ್ 42 ಎಸೆತಗಳಲ್ಲಿ 57 ರನ್ ಗಳಿಸಿದರು. ನಿತೀಶ್ ರಾಣಾ 17 ಎಸೆತಗಳಲ್ಲಿ 22 ರನ್ ಗಳಿಸಿದರು. ರಾಜಸ್ಥಾನ ಪರ ಯಜುವೇಂದ್ರ ಚಹಾಲ್ 4 ವಿಕೆಟ್ ಪಡೆದರು.
ಇದನ್ನೂ ಓದಿ: ಐಪಿಎಲ್‌ನಲ್ಲಿ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಬರೆದ ಯುಜ್ವೇಂದ್ರ ಚಹಾಲ್!
150 ರನ್ ಗಳ ಗುರಿ ಪಡೆದ ರಾಜಸ್ಥಾನ ಪರ ಯಶಸ್ವಿ ಜೈಸ್ವಾಲ್ ಮತ್ತು ನಾಯಕ ಸಂಜು ಸ್ಯಾಮ್ಸನ್ ಬಿರುಸಿನ ಇನ್ನಿಂಗ್ಸ್ ಆಡಿದರು. ಜೈಸ್ವಾಲ್ 47 ಎಸೆತಗಳಲ್ಲಿ 98 ರನ್ ಗಳಿಸಿದರೆ ಸಂಜು ಸ್ಯಾಮ್ಸನ್ 48 ರನ್ ಬಾರಿಸಿದರು. ರಾಜಸ್ಥಾನ ತಂಡ 13.1 ಓವರ್‌ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 151 ರನ್ ಪೇರಿಸಿ 9 ವಿಕೆಟ್‌ಗಳಿಂದ ಜಯ ದಾಖಲಿಸಿತು.
ಈ ಗೆಲುವಿನೊಂದಿಗೆ ರಾಜಸ್ಥಾನ ತಂಡವು 12 ಅಂಕಗಳನ್ನು ಪಡೆದಿದ್ದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ್ದರೆ ಕೆಕೆಆರ್ 10 ಅಂಕಗಳೊಂದಿಗೆ ಏಳನೇ ಸ್ಥಾನದಲ್ಲಿದೆ.