ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು 34 ರನ್ ಗಳಿಂದ ಮಣಿಸಿದ ಗುಜರಾತ್ ರೈಟನ್ಸ್ ಪ್ಲೇ ಆಫ್ ಗೆ
ಅಹ್ಮದಾಬಾದ್ ನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಹೈದರಾಬಾದ್ ತಂಡದ ವಿರುದ್ಧ 34 ರನ್ ಗಳ ಜಯ ಗಳಿಸುವ ಮೂಲಕ ಗುಜರಾತ್ ಟೈಟನ್ಸ್ ಪ್ಲೇ ಆಫ್ ಗೆ ಪ್ರವೇಶಿಸಿದೆ.
Published: 16th May 2023 12:19 AM | Last Updated: 16th May 2023 12:19 AM | A+A A-

ಗುಜರಾತ್ ರೈಟನ್ಸ್
ಅಹ್ಮದಾಬಾದ್: ಅಹ್ಮದಾಬಾದ್ ನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಹೈದರಾಬಾದ್ ತಂಡದ ವಿರುದ್ಧ 34 ರನ್ ಗಳ ಜಯ ಗಳಿಸುವ ಮೂಲಕ ಗುಜರಾತ್ ಟೈಟನ್ಸ್ ಪ್ಲೇ ಆಫ್ ಗೆ ಪ್ರವೇಶಿಸಿದೆ.
ಪ್ಲೇ ಆಫ್ ಪ್ರವೇಶಿಸಿದ ಮೊದಲ ತಂಡ ಗುಜರಾತ್ ಆಗಿದ್ದು, ಶುಭ್ಮನ್ ಗಿಲ್ ಭರ್ಜರಿ ಶತಕ, ಮೊಹಮ್ಮದ್ ಶಮಿ, ಮೋಹಿತ್ ಶರ್ಮಾ ಬೌಲಿಂಗ್ ದಾಳಿಯ ಪರಿಣಾಮವಾಗಿ ತಂಡಕ್ಕೆ ಗೆಲುವು ದಕ್ಕಿದೆ. 13 ಪಂದ್ಯಗಳ ಪೈಕಿ ಗುಜರಾತ್ ತಂಡ 9 ಪಂದ್ಯಗಳನ್ನು ಗೆದ್ದಿದ್ದರೆ, ಹೈದರಾಬಾದ್ ತಂಡ 12 ಪಂದ್ಯಗಳಲ್ಲಿ 4 ಪಂದ್ಯಗಳನ್ನು ಗೆದ್ದು ಪ್ಲೇ ಆಫ್ ನಿಂದ ಹೊರಬಿದ್ದಿದೆ.
ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿತ್ತು. 189 ರನ್ ಗಳ ಗುರಿ ಬೆನ್ನಟ್ಟಿದ ಹೈದರಾಬಾದ್ ತಂಡವನ್ನು ಮೊಹಮ್ಮದ್ ಶಮಿ, ಮೋಹಿತ್ ಶರ್ಮಾ ಬೌಲಿಂಗ್ ದಾಳಿ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 154 ರನ್ ಗಳಿಗೆ ಕಟ್ಟಿ ಹಾಕಿತು.
ಹೈದರಾಬಾದ್ ತಂಡ ಆರಂಭದಿಂದಲೂ ಬ್ಯಾಟಿಂಗ್ ವೈಫಲ್ಯ ಎದುರಿಸಿತು 45 ರನ್ ಗಳನ್ನು ಕಲೆಹಾಕುವುದಕ್ಕೂ ಮೊದಲೇ 4 ಪ್ರಮುಖ ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.9 ನೇ ಓವರ್ ವೇಳೆಗೆ 7 ವಿಕೆಟ್ ಕಳೆದುಕೊಂಡು ಸಂಪೂರ್ಣ ಕುಸಿಯಿತು.
ಮೊಹಮ್ಮದ್ ಶಮಿ 4 ಓವರ್‌ಗಳಲ್ಲಿ 21 ರನ್ ನೀಡಿ 4 ವಿಕೆಟ್ ಪಡೆದರೆ, ಮೋಹಿತ್ ಶರ್ಮಾ 4 ಓವರ್‌ಗಳಲ್ಲಿ 28 ರನ್ ನೀಡಿ 4 ವಿಕೆಟ್ ಉರುಳಿಸಿದರು. ಶುಭಮನ್ ಗಿಲ್ ಐಪಿಎಲ್ ಟೂರ್ನಿಯ ಈ ಪಂದ್ಯದಲ್ಲಿ 58 ಎಸೆತಗಳಲ್ಲಿ 101 ರನ್ ಗಳಿಸುವ ಮೂಲಕ ಮೊದಲ ಶತಕ ದಾಖಲಿಸಿದರು.