RCB vs GT: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಕ್ಕೆ ಮಳೆ ಭೀತಿ; ಪಂದ್ಯ ರದ್ದಾದರೆ ಲಾಭ ಯಾರಿಗೆ?

ಉದ್ಯಾನ ನಗರಿ ಬೆಂಗಳೂರಿನಲ್ಲಿ ಶನಿವಾರ ಮಳೆಯ ಸಿಂಚನವಾಗಿದೆ. ವರುಣನ ಆಗಮನದಿಂದ ಸಿಲಿಕಾನ್ ಸಿಟಿ ಮಂದಿ ಖುಷಿಯಾಗಿದ್ದಾರೆ. ಈ ನಡುವೆ ಕ್ರಿಕೆಟ್‌ ಅಭಿಮಾನಿಗಳಿಗೆ ಇಂದು ನಡೆಯಲಿರುವ ಪಂದ್ಯದ ಬಗ್ಗೆ ಚಿಂತೆ ಶುರುವಾಗಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಉದ್ಯಾನ ನಗರಿ ಬೆಂಗಳೂರಿನಲ್ಲಿ ಶನಿವಾರ ಮಳೆಯ ಸಿಂಚನವಾಗಿದೆ. ವರುಣನ ಆಗಮನದಿಂದ ಸಿಲಿಕಾನ್ ಸಿಟಿ ಮಂದಿ ಖುಷಿಯಾಗಿದ್ದಾರೆ. ಈ ನಡುವೆ ಕ್ರಿಕೆಟ್‌ ಅಭಿಮಾನಿಗಳಿಗೆ ಇಂದು ನಡೆಯಲಿರುವ ಪಂದ್ಯದ ಬಗ್ಗೆ ಚಿಂತೆ ಶುರುವಾಗಿದೆ.

ಮೇ 21 ರಂದು ಐಪಿಎಲ್ 2023 ನೇ ಆವೃತ್ತಿಯ 70ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಲಿವೆ. ಪಂದ್ಯವು ಭಾನುವಾರ ಸಂಜೆ 7.30ಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಆದರೆ, ಪಂದ್ಯಕ್ಕೆ ಒಂದು ದಿನ ಬಾಕಿ ಇರುವಾಗ ಶನಿವಾರ ನಗರದಲ್ಲಿ ಮಳೆ ಸುರಿದಿದೆ. ಈ ನಿರ್ಣಾಯಕ ಪಂದ್ಯದಲ್ಲಿ ಮಳೆಯು ಅಡ್ಡಿಯಾಗಲಿದೆಯೇ ಎನ್ನುವ ಚಿಂತೆ ಇದೀಗ ಮನೆಮಾಡಿದೆ.

ಇಂದು ಕೂಡ ಮಳೆಯಾಗುವ ಸಾಧ್ಯತೆಯಿದ್ದು, ಮಧ್ಯಾಹ್ನ 1 ಗಂಟೆಯಿಂದ ಆರಂಭಗೊಂಡು ದಿನವಿಡೀ ಗುಡುಗು ಸಹಿತ ಮಳೆಯಾಗಲಿದ್ದು, ಮೋಡ ಕವಿದ ವಾತಾವರಣ ಇರಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪಂದ್ಯದ ಸಮಯದಲ್ಲಿ ಹುಮಿಡಿಟಿ ಸುಮಾರು ಶೇ 78 ರಿಂದ 82 ರಷ್ಟು ಇರುವ ನಿರೀಕ್ಷೆಯಿದೆ. ಆಟದ ಆರಂಭದಲ್ಲಿ ತಾಪಮಾನವು ಸುಮಾರು 26 ಡಿಗ್ರಿ ಸೆಲ್ಸಿಯಸ್ ಇರಬಹುದೆಂದು ಊಹಿಸಲಾಗಿದೆ ಮತ್ತು ಕೊನೆಯಲ್ಲಿ 24 ಡಿಗ್ರಿ ಸೆಲ್ಸಿಯಸ್‌ಗೆ ಕಡಿಮೆಯಾಗುವ ನಿರೀಕ್ಷೆಯಿದೆ.

ಉಭಯ ತಂಡಗಳ ಆಟಗಾರರು

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ಮೈಕಲ್ ಬ್ರೇಸ್‌ವೆಲ್, ಅನುಜ್ ರಾವತ್, ಶಹಬಾಜ್ ಅಹ್ಮದ್, ವೇಯ್ನ್ ಪಾರ್ನೆಲ್, ಹರ್ಷಲ್ ಪಟೇಲ್, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ದಿನೇಶ್ ಕಾರ್ತಿಕ್, ವಿಜಯ್ ಕುಮಾರ್ ವೈಶಾಕ್, ಹಿಮಾಂಶು ಶರ್ಮಾ, ಸುಯಶ್ ಪ್ರಭುದೇಸಾಯಿ, ಕೇದಾರ್ ಜಾಧವ್, ಸಿದ್ದಾರ್ಥ್ ಕೌಲ್, ವನಿಂದು ಹಸರಂಗ, ಜೋಶ್ ಹ್ಯಾಜಲ್‌ವುಡ್, ಫಿನ್ ಅಲೆನ್, ಮನೋಜ್ ಭಾಂಡಗೆ, ಆಕಾಶ್ ದೀಪ್, ರಾಜನ್ ಕುಮಾರ್, ಅವಿನಾಶ್ ಸಿಂಗ್, ಸೋನು ಯಾದವ್

ಗುಜರಾತ್ ಟೈಟಾನ್ಸ್: ಶುಭಮನ್ ಗಿಲ್, ವೃದ್ಧಿಮಾನ್ ಸಹಾ, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ(ನಾಯಕ), ಡೇವಿಡ್ ಮಿಲ್ಲರ್, ದಾಸುನ್ ಶನಕ, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೋಹಿತ್ ಶರ್ಮಾ, ಮೊಹಮ್ಮದ್ ಶಮಿ, ನೂರ್ ಅಹ್ಮದ್, ಯಶ್ ದಯಾಳ್, ಶ್ರೀಕರ್ ಭರತ್, ವಿಜಯ್ ಶಂಕರ್ , ದರ್ಶನ್ ನಲ್ಕಂಡೆ, ರವಿಶ್ರೀನಿವಾಸನ್ ಸಾಯಿ ಕಿಶೋರ್, ಶಿವಂ ಮಾವಿ, ಮ್ಯಾಥ್ಯೂ ವೇಡ್, ಅಲ್ಜಾರಿ ಜೋಸೆಫ್, ಅಭಿನವ್ ಮನೋಹರ್, ಒಡಿಯನ್ ಸ್ಮಿತ್, ಜಯಂತ್ ಯಾದವ್, ಪ್ರದೀಪ್ ಸಾಂಗ್ವಾನ್, ಉರ್ವಿಲ್ ಪಟೇಲ್

ಪಂದ್ಯ ರದ್ದಾದರೆ ಏನಾಗಲಿದೆ?

ಇಂದು ನಡೆಯುವ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಗೆಲ್ಲಲೇ ಬೇಕಿರುವ ಅನಿವಾರ್ಯಕ್ಕೆ ಸಿಲುಕಿದ್ದು, ಪಂದ್ಯದ ವೇಳೆ ಮಳೆ ಸುರಿದರೆ, ಪಂದ್ಯದ ಓವರ್‌ಗಳನ್ನು ಕಡಿತಗೊಳಿಸುವ ಸಾಧ್ಯತೆ ಇದೆ. ಹೀಗಾಗಿ ಅಭಿಮಾನಿಗಳಿಗೆ ನಿರಾಸೆ ಉಂಟಾಗಲಿದೆ. ಒಂದು ವೇಳೆ ಸಂಪೂರ್ಣವಾಗಿ ಪಂದ್ಯ ರದ್ದಾದರೆ, ಆರ್‌ಸಿಬಿ ಪ್ಲೇ ಆಫ್ ಲೆಕ್ಕಾಚಾರಕ್ಕೆ ಕಷ್ಟವಾಗಲಿದೆ. 

ಒಂದು ವೇಳೆ ಪಂದ್ಯ ರದ್ದಾದರೆ, ಗುಜರಾತ್‌ ಮತ್ತು ಬೆಂಗಳೂರು ತಂಡಗಳಿಗೆ ತಲಾ ಒಂದು ಅಂಕಗಳನ್ನು ಹಂಚಲಾಗುತ್ತದೆ. ಆಗ, ಗುಜರಾತ್‌ ಅಗ್ರಸ್ಥಾನಿಯಾಗಿಯೇ ಉಳಿಯಲಿದೆ. ಮತ್ತೊಂದೆಡೆ ಬೆಂಗಳೂರು ತಂಡವು ನಾಲ್ಕನೇ ಸ್ಥಾನದಲ್ಲಿಯೇ ಸ್ಥಿರವಾಗಿ ಉಳಿಯುತ್ತದೆ. 

ಇಂದು ಹೈದರಾಬಾದ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ ಗೆದ್ದರೆ 16 ಅಂಕಗಳನ್ನು ಸಂಪಾದಿಸಲಿದೆ. ಒಂದು ವೇಳೆ ಆರ್​ಸಿಬಿ-ಗುಜರಾತ್ ಟೈಟಾನ್ಸ್ ಪಂದ್ಯ ಮಳೆಯಿಂದಾಗಿ ರದ್ದಾದರೆ, ಆರ್​ಸಿಬಿ 15 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ ಹಿಂದುಳಿಯಲಿದೆ. ಅತ್ತ ಮುಂಬೈ ಇಂಡಿಯನ್ಸ್ ಪ್ಲೇಆಫ್ ಪ್ರವೇಶಿಸಲಿದೆ. ಹೀಗಾಗಿ ಮ್ಯಾಚ್ ರದ್ದಾದರೆ ಆರ್​ಸಿಬಿ ತಂಡದ ಪ್ಲೇಆಫ್ ಕನಸು ಕೂಡ ಕಮರಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com