ಐಪಿಎಲ್ 2023: ಗುಜರಾತ್ ವಿರುದ್ಧ ಚೆನ್ನೈಗೆ ಭರ್ಜರಿ ಗೆಲುವು, 10ನೇ ಬಾರಿ ಫೈನಲ್ ಪ್ರವೇಶಿಸಿದ ಸಿಎಸ್ ಕೆ
ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಐಪಿಎಲ್ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 15 ರನ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಇದರೊಂದಿಗೆ ಎಂಎಸ್...
Published: 24th May 2023 01:12 AM | Last Updated: 24th May 2023 02:25 PM | A+A A-

ಸಿಎಸ್ ಕೆ ಆಟಗಾರರು
ಚೆನ್ನೈ: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಐಪಿಎಲ್ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 15 ರನ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಇದರೊಂದಿಗೆ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ದಾಖಲೆಯ 10ನೇ ಬಾರಿಗೆ ಇಂಡಿಯನ್ ಪ್ರೀಮಿಯರ್ ಲೀಗ್ ಫೈನಲ್ಗೆ ಪ್ರವೇಶಿಸಿದೆ.
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಸಿಎಸ್ಕೆ ತಂಡಕ್ಕೆ ಆರಂಭಿಕರಾದ ಡೆವೊನ್ ಕಾನ್ವೆ ಹಾಗೂ ರುತುರಾಜ್ ಗಾಯಕ್ವಾಡ್ ಉತ್ತಮ ಆರಂಭದೊಂದಿಗೆ ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿತು.
ಗೆಲುವಿಗೆ 173 ರನ್ ಗಳ ಗುರಿ ಬೆನ್ನತ್ತಿದ ಗುಜರಾತ್ ಟೈಟಾನ್ಸ್, 20 ಓವರ್ಗಳಲ್ಲಿ 157 ರನ್ ಗಳಿಗೆ ಸರ್ವಪತನ ಕಂಡಿತು. ಈ ಸೋಲಿನೊಂದಿಗೆ ಗುಜರಾತ್ ಟೈಟಾನ್ಸ್ ತಂಡವು 2ನೇ ಕ್ವಾಲಿಫೈಯರ್ ಪಂದ್ಯ ಆಡಬೇಕಿದೆ.
ಬುಧವಾರ ನಡೆಯಲಿರುವ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಪಂದ್ಯದಲ್ಲಿ ಗೆಲ್ಲುವ ತಂಡದೊಡನೆ ಗುಜರಾತ್ ಟೈಟಾನ್ಸ್ ತಂಡ 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸುವ ತಂಡ ಸಿಎಸ್ಕೆ ವಿರುದ್ಧ ಫೈನಲ್ ಆಡಲಿದೆ.
ಸಿಎಸ್ ಕೆ ಪರ ಋತುರಾಜ್ ಗಾಯಕ್ವಾಡ್ ಹಾಗೂ ಎಡಗೈ ಬ್ಯಾಟ್ಸ್ಮನ್ ಡೆವೋನ್ ಕಾನ್ವೆ, ಗುಜರಾತ್ ಬೌಲರ್ಗಳ ಸಂಘಟಿತ ದಾಳಿಯನ್ನು ಸಮರ್ಥವಾಗಿ ಎದುರಿಸಿದರು. ಪರಿಣಾಮ, ಮೊದಲ ವಿಕೆಟ್ಗೆ ಬರೋಬ್ಬರಿ 87 ರನ್ ಸೇರಿಸಿದರು. ಅರ್ಧಶತಕ ಸಿಡಿಸಿ ಗಾಯಕ್ವಾಡ್ ಚೆನ್ನೈ ಗೆಲುವಿಗೆ ನೆರವಾದರು.