ಐಪಿಎಲ್​ಗೆ ಚೆನ್ನೈ ಸ್ಟಾರ್​ ಪ್ಲೇಯರ್​ ಅಂಬಾಟಿ ರಾಯುಡು ನಿವೃತ್ತಿ ಘೋಷಣೆ!

ಚೆನ್ನೈ ತಂಡದ ಸ್ಟಾರ್ ಆಟಗಾರ ಅಂಬಟಿ ರಾಯುಡು ದೊಡ್ಡ ಘೋಷಣೆ ಮಾಡಿದ್ದು, ಅವರು ಐಪಿಎಲ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. 
ಅಂಬಾಟಿ ರಾಯುಡು
ಅಂಬಾಟಿ ರಾಯುಡು

ಚೆನ್ನೈ: ಚೆನ್ನೈ ತಂಡದ ಸ್ಟಾರ್ ಆಟಗಾರ ಅಂಬಟಿ ರಾಯುಡು ದೊಡ್ಡ ಘೋಷಣೆ ಮಾಡಿದ್ದು, ಅವರು ಐಪಿಎಲ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. 

ಇಂದು ಗುಜರಾತ್ ನ ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟನ್ಸ್ ನಡುವಿನ ಫೈನಲ್ ಪಂದ್ಯವೇ ತಮ್ಮ ಅಂತಿಮ ಪಂದ್ಯ ಎಂದು ಹೇಳಿಕೊಂಡಿದ್ದಾರೆ. 

ಇಂಡಿಯನ್ ಪ್ರೀಮಿಯರ್ ಲೀಗ್ 2023 ರ ಫೈನಲ್ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ.  ಐಪಿಎಲ್ 2023 ಫೈನಲ್ ಪಂದ್ಯವು ಗುಜರಾತ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆರಂಭವಾಗಲಿದೆ. ಪಂದ್ಯಕ್ಕೂ ಮುನ್ನ ಸ್ಟಾರ್​ಗಳಿಂದ ಮನೋರಂಜನಾ ಕಾರ್ಯಕ್ರಮ ನಡೆಯಲಿದೆ.

ಆದರೆ ಇದಕ್ಕೂ ಮೊದಲೇ ಚೆನ್ನೈ ತಂಡದ ಸ್ಟಾರ್ ಆಟಗಾರ ಅಂಬಾಟಿ ರಾಯುಡು ನಿವೃತ್ತಿ ಘೋಷಣೆ ಮಾಡಿದ್ದು, ತಾವು ಐಪಿಎಲ್‌ಗೆ ನಿವೃತ್ತಿ ಘೋಷಿಸಿ ಇದೇ ತನ್ನ ಅಂತಿಮ ಪಂದ್ಯ ಎಂದು ಹೇಳಿಕೊಂಡಿದ್ದಾರೆ. ಟ್ವಿಟರ್ ಮೂಲಕ ಈ ಕುರಿತು ಮಾಹಿತಿ ನೀಡಿರುವ ಅಂಬಾಟಿ ರಾಯುಡು, '204 ಪಂದ್ಯಗಳು, 14 ಋತುಗಳು, 11 ಪ್ಲೇಆಫ್‌ಗಳು, 8 ಫೈನಲ್‌ಗಳು, 5 ಟ್ರೋಫಿಗಳು. ಇದು ಸಾಕಷ್ಟು ದೊಡ್ಡ ಪ್ರಯಾಣವಾಗಿದೆ. ಇಂದು ರಾತ್ರಿಯ ಫೈನಲ್ ಐಪಿಎಲ್‌ನಲ್ಲಿ ನನ್ನ ಕೊನೆಯ ಪಂದ್ಯ ಎಂದು ನಾನು ನಿರ್ಧರಿಸಿದ್ದೇನೆ. ಈ ಶ್ರೇಷ್ಠ ಪಂದ್ಯಾವಳಿಯನ್ನು ಆಡುವುದನ್ನು ನಾನು ನಿಜವಾಗಿಯೂ ಆನಂದಿಸುತ್ತೇನೆ. ನಿಮಗೆಲ್ಲರಿಗೂ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.

ಅಲ್ಲದೆ ನೋ ಯು ಟರ್ನ್ ಎಂದು ಹೇಳುವ ಮೂಲಕ ಈ ಹಿಂದಿನ ಊಹಾಪೋಹಗಳಿಗೂ ರಾಯುಡು ತೆರೆ ಎಳೆದಿದ್ದಾರೆ. ಈ ಹಿಂದೆಯೂ ಕೂಡ ಅಂಬಾಟಿ ರಾಯುಡು ನಿವೃತ್ತಿ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿತ್ತು.

ರಾಯುಡು 2010 ರಲ್ಲಿ ಮುಂಬೈ ಇಂಡಿಯನ್ಸ್‌ ಪರ ಆಡುವ ಮೂಲಕ ಐಪಿಎಲ್‌ಗೆ ಪಾದಾರ್ಪಣೆ ಮಾಡಿದರು ಮತ್ತು 2017 ರ ಋತುವಿನವರೆಗೆ ಮುಂಬೈ ತಂಡಕ್ಕಾಗಿ ಆಡಿದರು. ರಾಯುಡು ಅವರು 2018ರ ಋತುವಿಗಾಗಿ ಸಿಎಸ್​ಕೆ ತಂಡ ಸೇರಿಕೊಂಡರು. ಟೀಂ ಇಂಡಿಯಾದ ಮಾಜಿ ಆಟಗಾರ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯರ್​ ಅಂಬಟಿ ರಾಯುಡು ಶೀಘ್ರದಲ್ಲೇ ಆಂಧ್ರಪ್ರದೇಶ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆಯೇ ಎಂಬ ಪ್ರಶ್ನೆ ಮೂಡುತ್ತಿದೆ. ಅವರು ಶೀಘ್ರದಲ್ಲೇ ಎಪಿ ರಾಜಕೀಯಕ್ಕೆ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಇದೇ ಕಾರಣಕ್ಕೆ ಕ್ರಿಕೆಟ್ ನಿಂದ ರಾಯುಡು ವಿಮುಖರಾಗಿದ್ದಾರೆ ಎನ್ನುವ ವದಂತಿಗಳು ಕೂಡ ಕೇಳಿಬರುತ್ತಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com