ಐಪಿಎಲ್ 2023 ಫೈನಲ್: ಟಾಸ್ ಗೆದ್ದ ಚೆನ್ನೈ ಬೌಲಿಂಗ್ ಆಯ್ಕೆ, ಗುಜರಾತ್ ಗೆ ಉತ್ತಮ ಆರಂಭ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್‌) ಕ್ರಿಕೆಟ್ ಟೂರ್ನಿಯ ಹದಿನಾರನೇ ಆವೃತ್ತಿಯ ಫೈನಲ್ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಚೆನ್ನೈಸೂಪರ್ ಕಿಂಗ್ಸ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಐಪಿಎಲ್ ಫೈನಲ್
ಐಪಿಎಲ್ ಫೈನಲ್

ಅಹ್ಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್‌) ಕ್ರಿಕೆಟ್ ಟೂರ್ನಿಯ ಹದಿನಾರನೇ ಆವೃತ್ತಿಯ ಫೈನಲ್ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಚೆನ್ನೈಸೂಪರ್ ಕಿಂಗ್ಸ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್‌) ಕ್ರಿಕೆಟ್ ಟೂರ್ನಿಯ ಹದಿನಾರನೇ ಆವೃತ್ತಿ ಈಗ ಕೊನೆಯ ಹಂತ ತಲುಪಿದ್ದು, ಗುಜರಾತ್ ನ ಅಹ್ಮದಾಬಾದ್ ನಗರದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಫೈನಲ್‌ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್‌ ತಂಡಗಳು ಪ್ರಶಸ್ತಿಗಾಗಿ ಹೋರಾಟ ನಡೆಸುತ್ತಿವೆ. ನಿನ್ನೆ ಮಳೆಯಿಂದಾಗಿ ಇಂದಿಗ ಮುಂದೂಡಿಕೆಯಾಗಿದ್ದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಉಭಯ ತಂಡಗಳಲ್ಲೂ ಯಾವುದೇ ಬದಲಾವಣೆ ಇಲ್ಲ. ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್ ತಂಡವು ಸತತ ಎರಡನೇ ಬಾರಿ ಪ್ರಶಸ್ತಿ ಜಯಿಸುವ ಛಲದಲ್ಲಿದೆ. ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ತಂಡವು ಐದನೇ ಬಾರಿ ಟ್ರೋಫಿಯನ್ನು ತನ್ನದಾಗಿಸಿಕೊಳ್ಳುವತ್ತ ಚಿತ್ತ ನೆಟ್ಟಿದೆ.

ಭಾನುವಾರ ರಾತ್ರಿ ನಡೆಯಬೇಕಿದ್ದ ಐಪಿಎಲ್‌ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾಯಿತು. ಇದರಿಂದ ಪಂದ್ಯವನ್ನು ಮೀಸಲು ದಿನವಾದ ಇಂದಿಗೆ (ಸೋಮವಾರ) ಮುಂದೂಡಲಾಯಿತ್ತು. ಐಪಿಎಲ್‌ ಟೂರ್ನಿಯ 16 ವರ್ಷಗಳ ಇತಿಹಾಸದಲ್ಲಿ ಫೈನಲ್‌ ಪಂದ್ಯ ಮೀಸಲು ದಿನಕ್ಕೆ ಮುಂದೂಡಿದ್ದು ಇದೇ ಮೊದಲು.

ಮಳೆ ಬಂದರೂ ಪಂದ್ಯ ಮುಕ್ತಾಯ ವಿಶ್ವಾಸ
ಇನ್ನು ಅಹಮದಾಬಾದ್ ನಲ್ಲಿ ಬೆಳಗ್ಗಿನಿಂದಲೇ ಬಿಸಿಲ ಝಳ ಹೆಚ್ಚಾಗಿದ್ದು, ಸಂಜೆಯ ವೇಳೆಯೂ ವಾತಾವರಣ ತಿಳಿಯಾಗಿತ್ತು. ಪಂದ್ಯದ ವೇಳೆ ಮಳೆಯಾಗುವ ಸಾಧ್ಯತೆಯಿದ್ದರೂ ಪಂದ್ಯ ಪೂರ್ಣಗೊಳ್ಳುವ ನಿರೀಕ್ಷೆಯಿದೆ.

ಗುಜರಾತ್ ಗೆ ಉತ್ತಮ ಆರಂಭ
ಟಾಸ್ ಸೋತರೂ ಅತಿಥೇಯ ಗುಜರಾತ್ ತಂಡ ಉತ್ತಮ ಆರಂಭ ಪಡೆದಿದ್ದು, 8 ಓವರ್ ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 72 ರನ್ ಗಳನ್ನು ಸಿಡಿಸಿದೆ. ಗಿಲ್ 39 ರನ್ ಗಳಿಸಿ ಔಟಾಗಿದ್ದರೆ, ವೃದ್ದಿಮಾನ್ ಸಾಹಾ 31 ಮತ್ತು ಸಾಯಿ ಸುದರ್ಶನ್ 2 ರನ್ ಗಳಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com