ಮುಂಬೈ: ಐಸಿಸಿ ವಿಶ್ವಕಪ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೀಲಂಕಾ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಭಾರತ ತಂಡಕ್ಕೆ ಮೊದಲ ಆಘಾತ ನೀಡಿದೆ.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಶ್ರೀಲಂಕಾ ನಾಯಕ ಕುಸಾಲ್ ಮೆಂಡಿಸ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಆದರಂತೆ ಬ್ಯಾಟಿಂಗ್ ಆರಂಭಿಸಿರುವ ಭಾರತ ಮೊದಲ ಆಘಾತ ಎದುರಿಸಿದ್ದು, ಇನ್ನಿಂಗ್ಸ್ ನ 2ನೇ ಎಸೆತದಲ್ಲೇ ನಾಯಕ ರೋಹಿತ್ ಶರ್ಮಾ ಔಟ್ ಆಗಿದ್ದಾರೆ. ಶುಭ್ ಮನ್ ಗಿಲ್ ಮತ್ತು ವಿರಾಟ್ ಕೊಹ್ಲಿ ಇದೀಗ ಬ್ಯಾಟಿಂಗ್ ಮುಂದುವರೆಸಿದ್ದಾರೆ.
ಇನ್ನು ಹಾಲಿ ವಿಶ್ವಕಪ್ ಟೂರ್ನಿಯಲ್ಲಿ ಆತಿಥೇಯ ಭಾರತ ತಂಡ ಟೂರ್ನಿಯಲ್ಲಿ ಆಡಿರುವ ಎಲ್ಲ (6) ಪಂದ್ಯಗಳಲ್ಲೂ ಜಯ ಸಾಧಿಸಿ ಅಜೇಯ ಓಟ ಮುಂದುವರಿಸಿದೆ. ಇನ್ನೊಂದೆಡೆ, ಶ್ರೀಲಂಕಾ ಗೆದ್ದಿರುವುದಕ್ಕಿಂತ ಸೋತಿದ್ದೇ ಜಾಸ್ತಿ. ಆಲ್ರೌಂಡ್ ಪ್ರದರ್ಶನ ನೀಡುತ್ತಿರುವ ಭಾರತಕ್ಕೆ ಈವರೆಗೆ ಸಮರ್ಥ ಸವಾಲು ಎದುರಾಗಿಲ್ಲ. ಆಸ್ಟ್ರೇಲಿಯಾ ವಿರುದ್ಧ 2 ರನ್ನಿಗೆ ಮೂರು ವಿಕೆಟ್ ಕಳೆದುಕೊಂಡಾಗ ಪುಟಿದೆದ್ದ ರೀತಿ ಅಮೋಘವಾಗಿತ್ತು. ಇಂಗ್ಲೆಂಡ್ ವಿರುದ್ಧ ಲಖನೌದಲ್ಲಿ 229 ರನ್ ಗಳಿಸಿದ್ದಾಗ ಹೋರಾಟ ಎದುರಾಗಬಹುದು ಎನ್ನುವ ಸ್ಥಿತಿಯಲ್ಲಿ ಜಯ ಸಲೀಸಾಗಿಯೇ ದಾಖಲಾಗಿತ್ತು. ಹೀಗಾಗಿ ಮತ್ತೊಂದು ಜಯದ ವಿಶ್ವಾಸದಲ್ಲಿದೆ.
ತಂಡಗಳು ಇಂತಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಐಯರ್, ಕೆ. ಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್‌ಪ್ರೀತ್ ಬೂಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್
Advertisement