ICC Cricket World Cup 2023: ಕೇಕ್ ಇಲ್ಲ, ಮಾಸ್ಕ್ ಇಲ್ಲ; ಈಡನ್ ಗಾರ್ಡನ್ಸ್​ನಲ್ಲಿ ಕೊಹ್ಲಿ ಬರ್ತ್ ಡೇ ಸೆಲೆಬ್ರೇಷನ್ ದಿಢೀರ್ ರದ್ದು

ಇಂದು 35ನೇ ವಸಂತಕ್ಕೆ ಕಾಲಿರಿಸಿರುವ ಟೀಂ ಇಂಡಿಯಾ ರನ್ ಮೆಷಿನ್ ವಿರಾಟ್ ಕೊಹ್ಲಿ ಜನ್ಮದಿನವನ್ನು ಸ್ಮರಣೀಯವಾಗಿಸಲು ಬೆಂಗಾಲ್ ಕ್ರಿಕೆಟ್ ಅಸೋಸಿಯೇಷನ್ ಇಂದು ಈಡನ್ ಗಾರ್ಡೆನ್ ನಲ್ಲಿ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮ ದಿಢೀರ್ ರದ್ದಾಗಿದೆ.
ಈಡನ್ ಗಾರ್ಡೆನ್ ನಲ್ಲಿ ವಿರಾಟ್ ಕೊಹ್ಲಿ ಬರ್ತ್ ಡೇ
ಈಡನ್ ಗಾರ್ಡೆನ್ ನಲ್ಲಿ ವಿರಾಟ್ ಕೊಹ್ಲಿ ಬರ್ತ್ ಡೇ
Updated on

ಕೋಲ್ಕತಾ: ಇಂದು 35ನೇ ವಸಂತಕ್ಕೆ ಕಾಲಿರಿಸಿರುವ ಟೀಂ ಇಂಡಿಯಾ ರನ್ ಮೆಷಿನ್ ವಿರಾಟ್ ಕೊಹ್ಲಿ ಜನ್ಮದಿನವನ್ನು ಸ್ಮರಣೀಯವಾಗಿಸಲು ಬೆಂಗಾಲ್ ಕ್ರಿಕೆಟ್ ಅಸೋಸಿಯೇಷನ್ ಇಂದು ಈಡನ್ ಗಾರ್ಡೆನ್ ನಲ್ಲಿ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮ ದಿಢೀರ್ ರದ್ದಾಗಿದೆ.

ವಿರಾಟ್ ಕೊಹ್ಲಿ ಇಂದು (ನವೆಂಬರ್ 5) ತಮ್ಮ 35 ನೇ ಹುಟ್ಟುಹಬ್ಬವನ್ನು (Virat Kohli Birthday) ಆಚರಿಸಿಕೊಳ್ಳುತ್ತಿದ್ದಾರೆ. ಇದರ ಜೊತೆಗೆ 2023 ರ ವಿಶ್ವಕಪ್‌ನ ಎಂಟನೇ ಪಂದ್ಯದಲ್ಲಿ ಭಾರತವು ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸುತ್ತಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ ಮೈದಾನದಲ್ಲಿ ಈ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದ್ದು, ಕೊಹ್ಲಿಯ ಈ ವಿಶೇಷ ದಿನವನ್ನು ಇನ್ನಷ್ಟು ಸ್ಪೆಷಲ್ ಮಾಡಲು ಬೆಂಗಾಲ್ ಕ್ರಿಕೆಟ್​ ಅಸೋಸಿಯೇಷನ್ ವಿಶೇಷ ಕಾರ್ಯಕ್ರಮ ಆಯೋಜಿಸಿತ್ತು. ಇದರ ನಡುವೆ ಕ್ರಿಕೆಟ್ ಅಸೋಸಿಯೇಷನ್ ​​ಆಫ್ ಬೆಂಗಾಲ್ (CAB) ಕೊಹ್ಲಿ ಹುಟ್ಟುಹಬ್ಬವನ್ನು ಆಚರಿಸಲು ವಿಶೇಷ ಯೋಜನೆಗಳನ್ನು ಹಾಕಿಕೊಂಡಿತ್ತು.

ಅದರಂತೆ ಕ್ರೀಡಾಂಗಣದಲ್ಲಿ  ಪಂದ್ಯ ವೀಕ್ಷಿಸಲು ಬರುವ ಅಭಿಮಾನಿಗಳಿಗೆ 70,000 ಕೊಹ್ಲಿಯ ಮುಖವಾಡಗಳನ್ನು ನೀಡಲು ವ್ಯವಸ್ಥೆ ಮಾಡಿತ್ತು. ಅದರೊಂದಿಗೆ ಪಟಾಕಿ ಪ್ರದರ್ಶನವನ್ನೂ ಏರ್ಪಡಿಸಲಾಗಿತ್ತು. ವಿರಾಟ್ ಕೊಹ್ಲಿಗೆ ಕೇಕ್ ಕೂಡ ಇರುತ್ತಿತ್ತು. ಆದರೆ ಈ ಎಲ್ಲ ಕಾರ್ಯಕ್ರಮ ರದ್ದಾಗಿದೆ.

ಮೂಲಗಳ ಪ್ರಕಾರ, ಈ ಆಚರಣೆಯು ಐಸಿಸಿ ನಿಯಮಗಳಿಗೆ ವಿರುದ್ಧವಾಗಿದೆ. ಹೀಗಾಗಿ ಎಲ್ಲ ಕಾರ್ಯಕ್ರಮವನ್ನು ಕ್ರಿಕೆಟ್ ಅಸೋಸಿಯೇಷನ್ ​​ಆಫ್ ಬೆಂಗಾಲ್ ರದ್ದುಗೊಳಿಸಿದೆ ಎಂದು ಹೇಳಲಾಗಿದೆ. ಆದರೆ, ಅಭಿಮಾನಿಗಳು ಕ್ರೀಡಾಂಗಣದಲ್ಲಿ ಕೊಹ್ಲಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಹಾಡಲಿದ್ದು, ತಂಡದ ಡ್ರೆಸ್ಸಿಂಗ್ ರೂಮ್​ನ ಒಳಗೆ ಮಾತ್ರ ಕೇಕ್ ಕಟ್ಟಿಂಗ್ ನಡೆಯಲಿದೆಯಂತೆ.

ದಾಖಲೆಯ 49ನೇ ಶತಕದತ್ತ ಕೊಹ್ಲಿ ಚಿತ್ತ
ಇಂದಿನ ಪಂದ್ಯದಲ್ಲಿ ಕೊಹ್ಲಿ ಬ್ಯಾಟ್​ನಿಂದ 49ನೇ ಶತಕ ಬರುತ್ತಾ ಎಂಬುದು ನೋಡಬೇಕಿದೆ. ಇಂದು ವಿರಾಟ್ ಬ್ಯಾಟ್​ನಿಂದ ಶತಕ ಬಂದರೆ ಅದು ಸಚಿನ್ ಅವರ 49ನೇ ಶತಕಗಳ ದಾಖಲೆಯನ್ನು ಸರಿಗಟ್ಟಿದಂತಾಗುತ್ತದೆ. ಸದ್ಯ ಭರ್ಜರಿ ಫಾರ್ಮ್​ನಲ್ಲಿರುವ ವಿರಾಟ್ 442 ರನ್‌ಗಳೊಂದಿಗೆ 2023ರ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಆಫ್ರಿಕಾ ತಂಡದ ಕ್ವಿಂಟನ್ ಡಿ ಕಾಕ್ ಅಗ್ರ ಸ್ಥಾನದಲ್ಲಿದ್ದಾರೆ. ಇವರು ಏಳು ಪಂದ್ಯಗಳಿಂದ 545 ರನ್ ಗಳಿಸಿದ್ದಾರೆ. ಈ ಇಬ್ಬರು ಬ್ಯಾಟ್ಸ್‌ಮನ್‌ಗಳ ನಡುವೆ ಪೈಪೋಟಿ ನಡೆಯಲಿದೆ. ಟೂರ್ನಿಯಲ್ಲಿ ಕೊಹ್ಲಿ ಸರಾಸರಿ 88.40 ಆಗಿದ್ದು, ಇದರಲ್ಲಿ ಒಂದು ಶತಕ ಸೇರಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com