ವಿಶ್ವಕಪ್ 2023: ಭಾರತದ ವಿರುದ್ಧ ಹೀನಾಯ ಸೋಲು; ಸಂಪೂರ್ಣ ಶ್ರೀಲಂಕಾ ಕ್ರಿಕೆಟ್ ಮಂಡಳಿ ವಜಾ

ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಶ್ರೀಲಂಕಾ ತಂಡವು ಹೀನಾಯ ಸೋಲು ಅನುಭವಿಸಿದ ನಂತರ ರಾಷ್ಟ್ರೀಯ ಕ್ರಿಕೆಟ್‌ ಮಂಡಳಿಯನ್ನು ವಜಾಗೊಳಿಸಿ ಶ್ರೀಲಂಕಾದ ಕ್ರೀಡಾ ಸಚಿವ ರೋಷನ್‌ ರಣಸಿಂಘೆ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.
ಶ್ರೀಲಂಕಾ ಕ್ರಿಕೆಟ್ ತಂಡ
ಶ್ರೀಲಂಕಾ ಕ್ರಿಕೆಟ್ ತಂಡ

ಕೊಲಂಬೊ: ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಶ್ರೀಲಂಕಾ ತಂಡವು ಹೀನಾಯ ಸೋಲು ಅನುಭವಿಸಿದ ನಂತರ ರಾಷ್ಟ್ರೀಯ ಕ್ರಿಕೆಟ್‌ ಮಂಡಳಿಯನ್ನು ವಜಾಗೊಳಿಸಿ ಶ್ರೀಲಂಕಾದ ಕ್ರೀಡಾ ಸಚಿವ ರೋಷನ್‌ ರಣಸಿಂಘೆ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.

ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಶ್ರೀಲಂಕಾ ತಂಡವು ಅವಮಾನಕಾರಿ ಸೋಲನುಭವಿಸಿದ ಕೆಲ ದಿನಗಳ ಬಳಿಕ ಈ ಬೆಳವಣಿಗೆ ನಡೆದಿದೆ. 1996ರ ಏಕದಿನ ವಿಶ್ವಕಪ್‌ ವಿಜೇತ ತಂಡದ ನಾಯಕ ಅರ್ಜುನ ರಣತುಂಗ ಅವರನ್ನು ಮಂಡಳಿಯ ಮಧ್ಯಂತರ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ನೆವೆಂಬರ್ 2 ರಂದು ಮುಂಬೈನಲ್ಲಿ ಭಾರತದ ವಿರುದ್ಧ ನಡೆದ ಪಂದ್ಯದಲ್ಲಿ 358 ರನ್‌ಗಳ ಗುರಿ ಪಡೆದಿದ್ದ ಶ್ರೀಲಂಕಾ ತಂಡವು ಕೇವಲ 55 ರನ್‌ಗಳಿಗೆ ಸರ್ವಪತನ ಕಂಡು, 302ರನ್‌ಗಳ ಹೀನಾಯ ಸೋಲು ಅನುಭವಿಸಿತ್ತು.

ಈ ಸೋಲಿನಿಂದ ಕೆರಳಿದ್ದ ರಣಸಿಂಘೆ ಅವರು ಕ್ರಿಕೆಟ್​ ಮಂಡಳಿಯ ಪದಾಧಿಕಾರಿಗಳ ವಿರುದ್ಧ ಕಿಡಿ ಕಾರಿದ್ದರು. ನಿಮಗೆ ಅಧಿಕಾರದಲ್ಲಿ ಉಳಿಯಲು ಯಾವುದೇ ನೈತಿಕ ಹಕ್ಕಿಲ್ಲ ಎಂದು ನುಡಿದಿದ್ದರು. ಅಲ್ಲದೆ ತಮ್ಮ ಹುದ್ದಗೆ ತಕ್ಷಣ ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದರು. ಇದೀಗ ಮಂಡಳಿಯನ್ನು ವಜಾಗೊಳಿಸಿ ಮಧ್ಯಂತರ ಅಧ್ಯಕ್ಷರನ್ನಾಗಿ ಅರ್ಜುನ ರಣತುಂಗ ಅವರಿಗೆ ಅಧಿಕಾರ ನೀಡಲಾಗಿದೆ.

ಏಷ್ಯಾಕಪ್​ ಟೂರ್ನಿಯ ಫೈನಲ್​ ಪಂದ್ಯದಲ್ಲಿಯೂ ಲಂಕಾ ತಂಡ ಭಾರತ ಎದುರು ಕೇವಲ 50 ರನ್​ಗೆ ಆಲೌಟ್​ ಆಗಿ ಹೀನಾಯ ಸೋಲು ಕಂಡಿತ್ತು. ಈ ವೇಳೆಯೂ ರಣಸಿಂಘೆ ಅವರು ಕ್ರಿಕೆಟ್​ ಮಂಡಳಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೆ ಎಚ್ಚರಿಕೆಯನ್ನೂ ನೀಡಿದ್ದರು. ವಿಶ್ವಕಪ್​ನಲ್ಲಿಯೂ ಇದೇ ಪ್ರದರ್ಶನ ಮುಂದುವರಿದ ಕಾರಣ ಮಂಡಳಿಯನ್ನೇ ವಜಾಗೊಳಿಸಲಾಗಿದೆ.

ಇದರ ಬೆನಲ್ಲೇ ಮಂಡಳಿಯ ಪದಾಧಿಕಾರಿಗಳ ವಿರುದ್ಧ ರಣಸಿಂಘೆ ಅವರು ಕಿಡಿ ಕಾರಿದ್ದರು. ಅಧಿಕಾರದಲ್ಲಿ ಉಳಿಯಲು ಅವರಿಗೆ ನೈತಿಕ ಹಕ್ಕಿಲ್ಲ ಎಂದು ನುಡಿದಿದ್ದ ಅವರು, ಕೂಡಲೇ ಅವರು ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದರು.

ಸದ್ಯ ಶ್ರೀಲಂಕಾ ತಂಡ ಹಾಲಿ ವಿಶ್ವಕಪ್​ನಲ್ಲಿ 7 ಪಂದ್ಯಗಳನ್ನು ಆಡಿದ್ದು 2ರಲ್ಲಿ ಮಾತ್ರ ಗೆಲುವು ಸಾಧಿಸಿದೆ. ಇಂದು ನಡೆಯುವ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಕಣಕ್ಕಿಳಿಯಲಿದೆ. ಒಂದೊಮ್ಮೆ ಈ ಪಂದ್ಯದಲ್ಲೂ ಸೋತರೆ ಲಂಕಾ ಟೂರ್ನಿಯಿಂದ ಅಧಿಕೃತವಾಗಿ ಹೊರಬೀಳಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com