ಅತಿರೇಕದ ಸಂಭ್ರಮಾಚರಣೆ: ಕೈಯಲ್ಲಿ ಬಿಯರ್ ಬಾಟಲ್ ಹಿಡಿದು, ಟ್ರೋಫಿ ಮೇಲೆ ಕಾಲಿಟ್ಟ ಆಸ್ಟ್ರೇಲಿಯಾ ಆಟಗಾರ!
ವಿಶ್ವಕಪ್ 2023 ಗೆದ್ದಿರುವ ಆಸ್ಟ್ರೇಲಿಯಾಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿಕೊಂಡಿದ್ದು ಟೀಂ ಇಂಡಿಯಾ, ಫೈನಲ್ ಪಂದ್ಯದಲ್ಲಿ ಎಡವಿದೆ. ಆದರೆ ಟ್ರೋಫಿ ಗೆದ್ದ ಬಳಿಕ ಕೆಲ ಆಸ್ಟ್ರೇಲಿಯಾ ಆಟಗಾರರ ಸಂಭ್ರಮಾಚರಣೆ ಅತಿರೇಕಕ್ಕೇರಿದೆ
Published: 20th November 2023 12:58 PM | Last Updated: 20th November 2023 03:29 PM | A+A A-

ಕಪ್ ಮೇಲೆ ಕಾಲಿಟ್ಟಿರುವ ಆಸ್ಟ್ರೇಲಿಯಾ ಆಟಗಾರ
ನವದೆಹಲಿ: ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಯಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಫೈನಲ್ನಲ್ಲಿ ಭಾರತ ವಿರುದ್ಧ ಬ್ಯಾಟಿಂಗ್-ಬೌಲಿಂಗ್-ಫೀಲ್ಡಿಂಗ್ ಮೂರೂ ವಿಭಾಗಗಳಲ್ಲಿ ಅದ್ಭುತ ಪ್ರದರ್ಶನ ತೋರಿದ ಕಾಂಗರೂ ಪಡೆ ಆರನೇ ಬಾರಿ ಟ್ರೋಫಿ ಗೆದ್ದ ಸಾಧನೆ ಮಾಡಿತು.
ವಿಶ್ವಕಪ್ 2023 ಗೆದ್ದಿರುವ ಆಸ್ಟ್ರೇಲಿಯಾಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿಕೊಂಡಿದ್ದು ಟೀಂ ಇಂಡಿಯಾ, ಫೈನಲ್ ಪಂದ್ಯದಲ್ಲಿ ಎಡವಿದೆ. ಆದರೆ ಟ್ರೋಫಿ ಗೆದ್ದ ಬಳಿಕ ಕೆಲ ಆಸ್ಟ್ರೇಲಿಯಾ ಆಟಗಾರರ ಸಂಭ್ರಮಾಚರಣೆ ಅತಿರೇಕಕ್ಕೇರಿದೆ. ಕೆಲ ಪ್ಲೇಯರ್ಸ್ ಟ್ರೋಫಿ ಜೊತೆ ಫೋಟೋಕ್ಕೆ ಪೋಸ್ ಕೊಟ್ಟಿದ್ದಾರೆ. ಆದರೆ, ಆಸೀಸ್ ಆಟಗಾರ ಮಿಚೆಲ್ ಮಾರ್ಷ್ ಕೈಯಲ್ಲಿ ಬಿಯರ್ ಬಾಟಲ್ ಹಿಡಿದು ಟ್ರೋಫಿಯ ಮೇಲೆ ಪಾದವನ್ನಿಟ್ಟು ಫೋಟೋ ತೆಗೆಸಿಕೊಂಡಿದ್ದಾರೆ.
ಇದನ್ನೂ ಓದಿ: ಅನುಷ್ಕಾ ಶರ್ಮಾ, ಅಥಿಯಾ ಶೆಟ್ಟಿ ಕುರಿತು ಹೇಳಿಕೆ: ಹರ್ಭಜನ್ ಸಿಂಗ್ ವಿರುದ್ಧ ತೀವ್ರ ಆಕ್ರೋಶ
ಮಿಚೆಲ್ ಮಾರ್ಷ್ ಅವರು ಕೈಯಲ್ಲಿ ಬಿಯರ್ ಬಾಟಲ್ ಹಿಡಿದುಕೊಂಡು, ವಿಶ್ವಕಪ್ ಟ್ರೋಫಿಯ ಮೇಲೆ ಎರಡೂ ಕಾಲುಗಳನ್ನು ಇಟ್ಟು ಸೋಫಾ ಮೇಲೆ ವಿಶ್ರಾಂತಿ ಮಾಡುವುದನ್ನು ಕಾಣಬಹುದು. ಈ ಫೋಟೋವನ್ನು ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮ್ಮಿನ್ಸ್ ಅವರು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.
ಆಸ್ಟ್ರೇಲಿಯಾ ತಂಡದ ಆಟವಾರ ಮಿಚೆಲ್ ಮಾರ್ಷ್ ವಿಶ್ವಕಪ್ ಮೇಲೆ ಕಾಲಿಟ್ಟು ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ.
ಮಾರ್ಷ್ ಅವರ ಈ ನಡೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಸಾಮಾಜಿಕ ಮಾಧ್ಯಮದಲ್ಲಿ ಅನೇಕ ಮಂದಿ ಮಾರ್ಷ್ ನಡೆಗೆ ಕಿಡಿ ಕಾರಿದ್ದು, ಟ್ರೋಫಿಗೆ ಈರೀತಿ ‘ಅಗೌರವ’ ತೋರುವುದು ಸರಿಯಲ್ಲ ಎಂದಿದ್ದಾರೆ.