ವಿಶ್ವಕಪ್ ಸೋಲು: ಮೊಹಮ್ಮದ್ ಶಮಿಯನ್ನು ತಬ್ಬಿ ಸಂತೈಸಿದ ಪ್ರಧಾನಿ ಮೋದಿ, ಫೋಟೋ ವೈರಲ್!
2023ರ ವಿಶ್ವಕಪ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನದ ಹೊರತಾಗಿಯೂ ಟೀಂ ಇಂಡಿಯಾ ವಿಶ್ವ ಕಪ್ 2023 ಟ್ರೋಫಿಯನ್ನು ಗೆಲ್ಲಲು ಸಾಧ್ಯವಾಗಲಿಲ್ಲ.
Published: 20th November 2023 06:52 PM | Last Updated: 20th November 2023 08:46 PM | A+A A-

ಪ್ರಧಾನಿ ಮೋದಿ-ಮೊಹಮ್ಮದ್ ಶಮಿ
ಅಹಮದಾಬಾದ್: 2023ರ ವಿಶ್ವಕಪ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನದ ಹೊರತಾಗಿಯೂ ಟೀಂ ಇಂಡಿಯಾ ವಿಶ್ವ ಕಪ್ 2023 ಟ್ರೋಫಿಯನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಫೈನಲ್ ಪಂದ್ಯದಲ್ಲಿ ಭಾರತ ತಂಡಕ್ಕೆ ಹೀನಾಯವಾಗಿ ಸೋಲಿಸುವ ಮೂಲಕ ಆಸ್ಟ್ರೇಲಿಯಾ 2015ರ ಬಳಿಕ ಮತ್ತೊಮ್ಮೆ ವಿಶ್ವಕಪ್ ಟ್ರೋಫಿಯನ್ನು ಗೆದ್ದು ಬೀಗಿತು.
ಪಂದ್ಯದ ಬಳಿಕ ಟೀಂ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿ ಪ್ರಧಾನಿ ಮೋದಿ ಜೊತೆಗಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ. ಈ ಚಿತ್ರದಲ್ಲಿ, ಪ್ರಧಾನಿ ಮೋದಿ ಅವರನ್ನು ತಬ್ಬಿಕೊಂಡು ಸಮಾಧಾನ ಮಾಡುತ್ತಿರುವುದನ್ನು ಕಾಣಬಹುದು.
Unfortunately yesterday was not our day. I would like to thank all Indians for supporting our team and me throughout the tournament. Thankful to PM @narendramodi for specially coming to the dressing room and raising our spirits. We will bounce back! pic.twitter.com/Aev27mzni5
— (@MdShami11) November 20, 2023
ಆರನೇ ಬಾರಿಗೆ ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ
ಫೈನಲ್‌ನಲ್ಲಿ ಟೀಂ ಇಂಡಿಯಾವನ್ನು 6 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಆಸ್ಟ್ರೇಲಿಯಾ ಪ್ರಶಸ್ತಿ ಗೆದ್ದಿದೆ. ಆಸ್ಟ್ರೇಲಿಯಾ ಗೆಲುವಿಗೆ 241 ರನ್‌ಗಳ ಗುರಿ ಇತ್ತು. ಆಸ್ಟ್ರೇಲಿಯಾ 43 ಓವರ್‌ಗಳಲ್ಲಿ 4 ವಿಕೆಟ್‌ಗೆ 241 ರನ್ ಗಳಿಸುವ ಮೂಲಕ ಆರನೇ ಬಾರಿಗೆ ವಿಶ್ವಕಪ್ ಟ್ರೋಫಿಯನ್ನು ಗೆದ್ದುಕೊಂಡಿತು. ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಆಸ್ಟ್ರೇಲಿಯದ ಗೆಲುವಿನ ಹೀರೋ ಆಗಿದ್ದರು. ಟ್ರಾವಿಸ್ ಹೆಡ್ 120 ಎಸೆತಗಳಲ್ಲಿ 137 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಅವರು ತಮ್ಮ ಇನ್ನಿಂಗ್ಸ್‌ನಲ್ಲಿ 15 ಬೌಂಡರಿ ಮತ್ತು 4 ಸಿಕ್ಸರ್‌ಗಳನ್ನು ಹೊಡೆದರು. ಈ ಅದ್ಭುತ ಇನ್ನಿಂಗ್ಸ್‌ಗಾಗಿ ಟ್ರಾವಿಸ್ ಹೆಡ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.