IPL 2024: ಆಲ್ ರೌಂಡರ್ ಕ್ಯಾಮರೂನ್ ಗ್ರೀನ್ ಆರ್ ಸಿಬಿಗೆ ಸೇರ್ಪಡೆ!

ಈ ಬಾರಿಯ ಐಪಿಎಲ್ ನಲ್ಲಿ ಆಸ್ಟ್ರೇಲಿಯಾದ ಆಲ್ ರೌಂಡರ್  ಕ್ಯಾಮರೂನ್ ಗ್ರೀನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಆಡಲಿದ್ದಾರೆ. 
ಕ್ಯಾಮರೂನ್ ಗ್ರೀನ್
ಕ್ಯಾಮರೂನ್ ಗ್ರೀನ್

ಮುಂಬೈ: ಈ ಬಾರಿಯ ಐಪಿಎಲ್ ನಲ್ಲಿ ಆಸ್ಟ್ರೇಲಿಯಾದ ಆಲ್ ರೌಂಡರ್  ಕ್ಯಾಮರೂನ್ ಗ್ರೀನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಆಡಲಿದ್ದಾರೆ. ಕಳೆದ ಬಾರಿ  ಅವರು ಮುಂಬೈ ಇಂಡಿಯನ್ಸ್ ಪರವಾಗಿ ಆಡಿದ್ದರು.

ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ಟ್ರೇಡ್ ನಲ್ಲಿ ಖರೀದಿಸಿದ ಮುಂಬೈ ಇಂಡಿಯನ್ಸ್ ತಮ್ಮಲ್ಲಿದ್ದ ಆಲ್ ರೌಂಡರ್ ಕ್ಯಾಮರೂನ್ ಅವರನ್ನು ಬಿಟ್ಟುಕೊಟ್ಟಿದೆ. 

ಕಳೆದ ಡಿಸೆಂಬರ್ ನಲ್ಲಿ ನಡೆದ ಹರಾಜಿನಲ್ಲಿ ಬರೋಬ್ಬರಿ ರೂ. 17.50 ಕೋಟಿ ಮೊತ್ತಕ್ಕೆ ಖರೀದಿಸಲ್ಪಟ್ಟಿದ್ದ ಗ್ರೀನ್, 16 ಪಂದ್ಯಗಳಲ್ಲಿ ಮುಂಬೈ ಪರ ಕಾಣಿಸಿಕೊಂಡಿದ್ದರು. 50.22 ರ ಸರಾಸರಿಯಲ್ಲಿ 452 ರನ್ ಗಳಿಸಿದ್ದರು. ಕಳೆದ ಋತುವಿನಲ್ಲಿ ಒಂದು ಶತಕ ಮತ್ತು ಎರಡು ಅರ್ಧಶತಕಗಳನ್ನು ಗಳಿಸಿದ್ದರು.

ಆರ್ ಸಿಬಿ ಸೇರ್ಪಡೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಂದೇಶ ನೀಡಿರುವ ಕ್ಯಾಮರೂನ್, ಆಂಡಿ ಫ್ಲವರ್ ತಂಡಕ್ಕೆ ಸೇರ್ಪಡೆಯಾಗಲು ನಾನು ತುಂಬಾ ಉತ್ಸುಕನಾಗಿದ್ದೇನೆ. ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಿಮ್ಮನ್ನು ನೋಡಲು ನಾನು ಕಾತುರದಿಂದ ಕಾಯುತ್ತಿದ್ದೇನೆ. ಚಿಯರ್ಸ್!," ಎಂದು ಹೇಳಿದ್ದಾರೆ.

ಸದ್ಯ ಆರ್ ಸಿಬಿಯಲ್ಲಿ 19 ಆಟಗಾರರಿದ್ದು, ಅದರಲ್ಲಿ ಐದು ಮಂದಿ ವಿದೇಶಿ ಆಟಗಾರರಿದ್ದಾರೆ. ಇನ್ನು ಮೂವರು ವಿದೇಶಿಯರನ್ನು ಖರೀದಿಸಬಹುದಾಗಿದ್ದು, 23.25 ಕೋಟಿ ರೂ. ಬಾಕಿ ಉಳಿದಿದೆ.

ಉಳಿಸಿಕೊಂಡಿರುವ ಆಟಗಾರರು: ಫಾಫ್ ಡು ಪ್ಲೆಸಿಸ್, ರಜತ್ ಪಾಟಿದಾರ್, ವಿರಾಟ್ ಕೊಹ್ಲಿ, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ವೈಶಾಕ್ ವಿಜಯ್ ಕುಮಾರ್.

ಕೈಬಿಟ್ಟ ಆಟಗಾರರು: ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಜಲ್ ವುಡ್, ಫಿನ್ ಅಲೆನ್, ಮೈಕೆಲ್ ಬ್ರೇಸ್ ವೆಲ್  ಡೇವಿಡ್ ವಿಲ್ಲಿ, ವೇಯ್ನ್ ಪಾರ್ನೆಲ್, ಸೋನು ಯಾದವ್, ಅವಿನಾಶ್ ಸಿಂಗ್, ಸಿದ್ಧಾರ್ಥ್ ಕೌಲ್, ಕೇದಾರ್ ಜಾದವ್.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com