ಏಕದಿನ ವಿಶ್ವಕಪ್: ಭಾರತದ ವಿರುದ್ಧ ಟಾಸ್ ಗೆದ್ದ ಆಸ್ಚ್ರೇಲಿಯಾ ಬ್ಯಾಟಿಂಗ್ ಆಯ್ಕೆ, ಮೊದಲ ವಿಕೆಟ್ ಪತನ

ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಅಭಿಯಾನ ಆರಂಭವಾಗಿದ್ದು, ಭಾರತದ ವಿರುದ್ಧ ಟಾಸ್ ಗೆದ್ದ ಆಸ್ಚ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಭಾರತ-ಆಸ್ಚ್ರೇಲಿಯಾ ಪಂದ್ಯ
ಭಾರತ-ಆಸ್ಚ್ರೇಲಿಯಾ ಪಂದ್ಯ

ಚೆನ್ನೈ: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಅಭಿಯಾನ ಆರಂಭವಾಗಿದ್ದು, ಭಾರತದ ವಿರುದ್ಧ ಟಾಸ್ ಗೆದ್ದ ಆಸ್ಚ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ ಐದನೇ ಹಾಗೂ ತಮ್ಮ ಆರಂಭಿಕ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಸೆಣಸಾಡುತ್ತಿವೆ. ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. 

ಪಂದ್ಯಕ್ಕೆ ಮಳೆ ಅಡಚಣೆ ಸಾಧ್ಯತೆ ಕಡಿಮೆ
ಇದಕ್ಕೂ ಮುನ್ನ ಎರಡೂ ಅಭ್ಯಾಸ ಪಂದ್ಯಗಳು ಮಳೆಯಿಂದಾಗಿ ರದ್ದುಗೊಂಡ ನಂತರ, ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ಮಳೆ ಮುಕ್ತ ವಿಶ್ವಕಪ್ ಅಭಿಯಾನವನ್ನು ಆರಂಭಿಸುತ್ತಿದೆ. ಅಕ್ಯುವೆದರ್ ಪ್ರಕಾರ, ಭಾನುವಾರದಂದು ಚೆನ್ನೈನಲ್ಲಿ ಮಳೆಯಾಗುವ ಸಾಧ್ಯತೆಯಿಲ್ಲ.

ಗಿಲ್ ಬದಲಿಗೆ ಇಶಾನ್ ಕಿಶನ್ ಗೆ ಸ್ಥಾನ
ಕೊನೆಯ ಘಳಿಗೆಯಲ್ಲಿ ಭಾರತ ತಂಡದಲ್ಲಿ ಒಂದು ಅಚ್ಚರಿಯ ಬದಲಾವಣೆಯಾಗಿದ್ದು, ಡೆಂಗ್ಯೂ ಜ್ವರದಿಂದ ಬಳಲುತ್ತಿರುವ ಶುಭ್ಮನ್ ಗಿಲ್ ಬದಲಿಗೆ ಎಡಗೈ ಬ್ಯಾಟರ್ ಇಶಾನ್ ಕಿಶನ್ ಭಾರತದ ಇನ್ನಿಂಗ್ಸ್ ತೆರೆಯಲಿದ್ದಾರೆ.

ಆಸ್ಟ್ರೇಲಿಯಾದ ಮೊದಲ ವಿಕೆಟ್ ಪತನ
ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿರುವ ಆಸ್ಚ್ರೇಲಿಯಾ ತಂಡ ಆರಂಭಿಕ ಆಘಾತ ಎದುರಿಸಿದ್ದು, ಆಸಿಸ್ ದೈತ್ಯ ಬ್ಯಾಟರ್ ಮಿಚೆಲ್ ಮಾರ್ಶ್ ಶೂನ್ಯಕ್ಕೆ ಔಟಾಗಿದ್ದಾರೆ. ಬುಮ್ರಾ ಬೌಲಿಂಗ್ ನಲ್ಲಿ ಮಾರ್ಷ್ ಕೊಹ್ಲಿಗೆ ಕ್ಯಾಚಿತ್ತು ಔಟಾಗಿದ್ದಾರೆ.

ತಂಡಗಳು ಇಂತಿವೆ
ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹೇಝಲ್‌ವುಡ್.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com