ಪುಣೆ: ಐಸಿಸಿ ಕ್ರಿಕೆಟ್ ವಿಶ್ವಕರ್ 2023ಟೂರ್ನಿಯ ಇಂದಿನ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಭಾರತ ರನ್ ಮೆಷಿನ್ ವಿರಾಟ್ ಕೊಹ್ಲಿ ಕ್ರಿಕೆಟ್ ಲೋಕದ ಇಬ್ಬರು ದೈತ್ಯ ಆಟಗಾರರ ದಾಖಲೆಯನ್ನು ಮುರಿದಿದ್ದಾರೆ.
ಹೌದು.. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂದಿನ ಪಂದ್ಯದಲ್ಲಿ ಬಾಂಗ್ಲಾದೇಶ ನೀಡಿದ 257ರನ್ ಗಳ ಸವಾಲಿನ ಗುರಿಯನ್ನು ಬೆನ್ನು ಹತ್ತಿರುವ ಭಾರತ ತಂಡಕ್ಕೆ ವಿರಾಟ್ ಕೊಹ್ಲಿ ಆಸರೆಯಾಗಿದ್ದು, ಅರ್ಧಶತಕದ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ಯುತ್ತಿದ್ದಾರೆ. ಅಂತೆಯೇ ಇದೇ ಪಂದ್ಯದಲ್ಲಿ ಕೊಹ್ಲಿ ಜಾಗತಿಕ ಕ್ರಿಕೆಟ್ ನ ಇಬ್ಬರು ಕ್ರಿಕೆಟ್ ದಂತಕಥೆಗಳ ವಿಶ್ವಕಪ್ ದಾಖಲೆಯನ್ನು ಮುರಿದಿದ್ದಾರೆ.
ಜಯವರ್ಧನೆ ದಾಖಲೆ ಮುರಿದ ಕೊಹ್ಲಿ
ವಿಶ್ವಕಪ್ ನಲ್ಲಿ ಅತೀ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಕೊಹ್ಲಿ ಶ್ರೀಲಂಕಾದ ಮಹೇಲಾ ಜಯವರ್ಧನೆ ಅವರನ್ನು ಹಿಂದಿಕ್ಕಿ ವಿಶ್ವಕಪ್ ನಲ್ಲಿ ಅತೀ ಹೆಚ್ಚು ರನ್ ಗಳಿಸಿದ 4ನೇ ಅಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಈ ಪಟ್ಟಿಯಲ್ಲಿ 34357 ರನ್ ಗಳಿಸಿರುವ ಭಾರತದ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದು, 28016 ರನ್ ಗಳಿಸಿರುವ ಶ್ರೀಲಂಕಾದ ಕುಮಾರ ಸಂಗಕ್ಕಾರ 2ನೇ ಸ್ಥಾನದಲ್ಲಿದ್ದಾರೆ. ಅಂತೆಯೇ 27483 ರನ್ ಗಳನ್ನು ಗಳಿಸಿರುವ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ರಿಕ್ಕಿ ಪಾಂಟಿಂಗ್ 3ನೇ ಸ್ಥಾನದಲ್ಲಿದ್ದು, 25,979 ರನ್ ಗಳಿಸಿರುವ ವಿರಾಟ್ ಕೊಹ್ಲಿ 4ನೇ ಸ್ಥಾನಕ್ಕೇರಿದ್ದಾರೆ. 4ನೇ ಸ್ಥಾನದಲ್ಲಿದ್ದ ಶ್ರೀಲಂಕಾದ ಮಹೇಲಾ ಜಯವರ್ಧನೆ 5ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.
Most runs in international cricket
34357 - Sachin Tendulkar
28016 - Kumar Sangakkara
27483- Ricky Ponting
25958* - Virat Kohli
25957 - Mahela Jayawardene
ಜಾಗತಿಕ ಕ್ರಿಕೆಟ್ ನಲ್ಲಿ ಅತೀ ಹೆಚ್ಚು 50ಕ್ಕೂ ಅಧಿಕ ರನ್, ಕಾಲಿಸ್ ದಾಖಲೆ ಮುರಿದ ಕೊಹ್ಲಿ
ಇದೇ ವೇಳೆ ಬಾಂಗ್ಲಾದೇಶ ವಿರುದ್ಧ ಅರ್ಧಶತಕ ಸಿಡಿಸಿದ ಕೊಹ್ಲಿ ಜಾಗತಿಕ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ಬಾರಿ 50ಕ್ಕೂ ಅಧಿಕ ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ 264 ಬಾರಿ 50ಕ್ಕೂ ಅಧಿಕ ರನ್ ಗಳಿಸಿರುವ ಭಾರತದ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದು, 217 ಬಾರಿ ಈ ಸಾಧನೆ ಮಾಡಿರುವ ಆಸ್ಟ್ರೇಲಿಯಾದ ರಿಕ್ಕಿ ಪಾಂಟಿಂಗ್ 2ನೇ ಸ್ಥಾನದಲ್ಲಿದ್ದಾರೆ. 216 ಬಾರಿ 50ಕ್ಕೂ ಅಧಿಕ ರನ್ ಗಳಿಸಿದ ಶ್ರೀಲಂಕಾದ ಕುಮಾರ ಸಂಗಕ್ಕಾರ 3ನೇ ಸ್ಥಾನದಲ್ಲಿದ್ದು, 212 ಬಾರಿ ಈ ಸಾಧನೆ ಮಾಡಿರುವ ವಿರಾಟ್ ಕೊಹ್ಲಿ 4ನೇ ಸ್ಥಾನಕ್ಕೇರಿದ್ದಾರೆ. 211 50ಕ್ಕೂ ಅಧಿಕ ರನ್ ಗಳಿಸಿ 4ನೇ ಸ್ಥಾನದಲ್ಲಿದ್ದ ದಕ್ಷಿಣ ಆಫ್ರಿಕಾದ ಜಾಕಸ್ ಕಾಲಿಸ್ 5ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.
Most 50-plus scores in international cricket
264 - Sachin Tendulkar
217 - Ricky Ponting
216 - Kumar Sangakkara
212 - Virat Kohli
211 - Jacques Kallis
ಚೇಸಿಂಗ್ ಕಿಂಗ್ ವಿರಾಟ್ ಕೊಹ್ಲಿ
ಇಷ್ಟು ಮಾತ್ರವಲ್ಲದೇ ವಿರಾಟ್ ಕೊಹ್ಲಿ ಐಸಿಸಿಯ ಸೀಮಿತ ಓವರ್ ಗಳ ಟೂರ್ನಮೆಂಟ್ ಗಳಲ್ಲಿ ಚೇಸಿಂಗ್ ವೇಳೆ 1500 ರನ್ ಗಳನ್ನು ಗಳಿಸಿದ ಜಗತ್ತಿನ ಏಕೈಕ ಬ್ಯಾಟರ್ ಎಂಬ ಕೀರ್ತಿಗೂ ಭಾಜನರಾಗಿದ್ದಾರೆ.
Advertisement