ಐಸಿಸಿ ವಿಶ್ವಕಪ್ ಟೂರ್ನಿಯಲ್ಲೇ ಚಾಂಪಿಯನ್ಸ್ ಟ್ರೋಫಿ 2025ಕ್ಕೆ ಅರ್ಹತೆ, 7ನೇ ಸ್ಥಾನಕ್ಕಾಗಿ ಇಂಗ್ಲೆಂಡ್-ಆಫ್ಘಾನಿಸ್ತಾನ ಪೈಪೋಟಿ

ಹಾಲಿ ವಿಶ್ವ ಚಾಂಪಿಯನ್ ಇಂಗ್ಲೆಂಡ್ ತಂಡವಿಲ್ಲದೇ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿ ನಡೆಯುವುದೇ..? ಇಂತಹುದೊಂದು ಪ್ರಶ್ನೆ ಇದೀಗ ಮೂಡಿದೆ.
ಚಾಂಪಿಯನ್ಸ್ ಟ್ರೋಫಿ ಸರಣಿ
ಚಾಂಪಿಯನ್ಸ್ ಟ್ರೋಫಿ ಸರಣಿ

ನವದೆಹಲಿ: ಹಾಲಿ ವಿಶ್ವ ಚಾಂಪಿಯನ್ ಇಂಗ್ಲೆಂಡ್ (England) ತಂಡವಿಲ್ಲದೇ ಚಾಂಪಿಯನ್ಸ್ ಟ್ರೋಫಿ 2025 (ICC Champions Trophy 2025)ರ ಟೂರ್ನಿ ನಡೆಯುವುದೇ..? ಇಂತಹುದೊಂದು ಪ್ರಶ್ನೆ ಇದೀಗ ಮೂಡಿದೆ.

ಹಾಲಿ ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿ (ICC Cricket World Cup 2023) ಇದೇ ಮೊದಲ ಬಾರಿಗೆ ವೆಸ್ಟ್ ಇಂಡೀಸ್ (West Indies) ತಂಡವಿಲ್ಲದೇ ನಡೆಯುತ್ತಿದ್ದು, ಇದೇ ರೀತಿ ಮುಂಬರುವ 2025ರ ಚಾಂಪಿಯನ್ಸ್ ಟ್ರೋಫಿ (Champions Trophy 2025) ಕೂಡ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವಿಲ್ಲದೇ ನಡೆಯುವ ಕುರಿತು ಹಲವು ಪ್ರಶ್ನೆಗಳು ಎದ್ದಿವೆ. ಏಕದಿನ ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯಲ್ಲಿ ಅಗ್ರ ಏಳು ಸ್ಥಾನಗಳನ್ನು ಪಡೆಯುವ ತಂಡಗಳು ಆತಿಥೇಯ ಪಾಕಿಸ್ತಾನ (Pakistan)ದ ಜತೆ 2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿ (Champions Trophy 2025)ಯಲ್ಲಿ ಆಡಲು ಅವಕಾಶ ಪಡೆಯಲಿವೆ.

ಚಾಂಪಿಯನ್ಸ್‌ ಟ್ರೋಫಿ ಟೂರ್ನಿ (Champions Trophy)ಯ ಅರ್ಹತೆಯ ಮಾನದಂಡವನ್ನು ಐಸಿಸಿ (ICC) 2021 ರಲ್ಲಿ ಬದಲಿಸಿತ್ತು. ಟೂರ್ನಿಯ ಪಂದ್ಯಗಳು ಹಳೆಯ ಮಾದರಿಯಂತೆಯೇ ನಡೆಯಲಿದೆ. ಎಂಟು ತಂಡಗಳನ್ನು ಎರಡು ಗುಂಪುಗಳನ್ನಾಗಿ ವಿಂಗಡಿಸಿ ಲೀಗ್‌ ಪಂದ್ಯಗಳನ್ನು ಆಡಿಸಲಾಗುತ್ತದೆ. ಪ್ರತಿ ಗುಂಪಿನಲ್ಲಿ ಮೊದಲ ಎರಡು ಸ್ಥಾನಗಳನ್ನು ಪಡೆಯುವ ತಂಡಗಳು ಸೆಮಿಫೈನಲ್‌ ಪ್ರವೇಶಿಸಲಿವೆ.

ಅದರಂತೆ ಹಾಲಿ ವಿಶ್ವಕಪ್‌ ಟೂರ್ನಿಯ ಪಾಯಿಂಟ್‌ ಪಟ್ಟಿಯಲ್ಲಿ 9 ಹಾಗೂ 10ನೇ ಸ್ಥಾನಗಳಲ್ಲಿರುವ ಬಾಂಗ್ಲಾದೇಶ (Bangladesh) ಮತ್ತು ಇಂಗ್ಲೆಂಡ್‌ (England) ತಂಡಗಳು ಚಾಂಪಿಯನ್ಸ್ ಟ್ರೋಫಿಗೆ ಅರ್ಹತೆ ಪಡೆಯಲು ಇನ್ನುಳಿದ ಎಲ್ಲ ಪಂದ್ಯಗಳನ್ನು ಗೆಲ್ಲಲೇಬೇಕು. ಏಳು ಮತ್ತು ಎಂಟನೇ ಸ್ಥಾನದಲ್ಲಿರುವ ಅಫ್ಗಾನಿಸ್ತಾನ ಮತ್ತು ನೆದರ್ಲೆಂಡ್ಸ್‌ (Netherlands) ತಂಡಗಳು ಇನ್ನುಳಿದ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿ ಅದೇ ಸ್ಥಾನವನ್ನು ಉಳಿಸಿಕೊಂಡರೆ, ಚಾಂಪಿಯನ್ಸ್‌ ಟ್ರೋಫಿಗೆ ಅರ್ಹತೆ ಪಡೆಯುವ ಅವಕಾಶ ಹೊಂದಿವೆ.

ಅಂದಹಾಗೆ 202ರ ಚಾಂಪಿಯನ್ಸ್ ಟ್ರೋಫಿ ಸರಣಿ ಪಾಕಿಸ್ತಾನ (Pakistan)ದಲ್ಲಿ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com