ಏಷ್ಯಾಕಪ್ 2023 ಹೈವೋಲ್ಟೇಜ್ ಕದನ: ಪಾಕಿಸ್ತಾನ ಎದುರು ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

ತೀವ್ರ ಕುತೂಹಲ ಕೆರಳಿಸಿರುವ ಏಷ್ಯಾಕಪ್ 2023 ಕ್ರಿಕೆಟ್ ಟೂರ್ನಿಯ ಇಂದಿನ ಹೈವೋಲ್ಟೇಜ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡದ ವಿರುದ್ಧ ಟಾಸ್ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
ಟಾಸ್ ಗೆದ್ದ ಭಾರತ
ಟಾಸ್ ಗೆದ್ದ ಭಾರತ

ಪಳ್ಳೆಕಿಲೆ: ತೀವ್ರ ಕುತೂಹಲ ಕೆರಳಿಸಿರುವ ಏಷ್ಯಾಕಪ್ 2023 ಕ್ರಿಕೆಟ್ ಟೂರ್ನಿಯ ಇಂದಿನ ಹೈವೋಲ್ಟೇಜ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡದ ವಿರುದ್ಧ ಟಾಸ್ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.

ಶ್ರೀಲಂಕಾದ ಪಳ್ಳೆಕಿಲೆ ಕ್ರಿಕೆಟ್ ಮೈದಾನದಲ್ಲಿ ಈ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಟೂರ್ನಿಯಲ್ಲಿ ಭಾರತ ತಂಡಕ್ಕೆ ಇದು ಮೊದಲ ಪಂದ್ಯವಾಗಿದ್ದು, ಪಾಕಿಸ್ತಾನ ಈಗಾಗಲೇ ನೇಪಾಳ ವಿರುದ್ಧ ಗೆದ್ದು ಇದೀಗ ಭಾರತದ ವಿರುದ್ಧ 2 ಪಂದ್ಯಕ್ಕೆ ಕಣಕ್ಕಿಳಿದಿದೆ. ಈ ಪಂದ್ಯದಲ್ಲಿ ಪಾಕಿಸ್ತಾನ ಗೆದ್ದರೆ ನೇರವಾಗಿ ಸೂಪರ್ 4 ಹಂತಕ್ಕೆ ಅರ್ಹತೆ ಗಿಟ್ಟಿಸಲಿದ್ದು, ಭಾರತ ಗೆದ್ದರೆ ಟೂರ್ನಿಯಲ್ಲಿ ಶುಭಾರಂಭ ಮಾಡಿದಂತಾಗುತ್ತದೆ.

ತಂಡದ ಸ್ಚಾರ್ ಆಟಗಾರ ಕೆಎಲ್ ರಾಹುಲ್ ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದರೂ ತಂಡದಲ್ಲಿ ಪ್ರತಿಭೆಗಳಿಗೆ ಕೊರತೆ ಇಲ್ಲ. ಆದರೆ ಅನುಭವದ ಕೊರತೆ ಇದ್ದು, ಇದನ್ನು ಹಿರಿಯ ಆಟಗಾರರು ನಿಭಾಯಿಸಬೇಕಿದೆ. 

ಉಳಿದಂತೆ ಪಾಕಿಸ್ತಾನದ ವಿರುದ್ಧ ಆಡುವ ಪ್ಲೇಯಿಂಗ್ ಇಲೆವೆನ್ ಆಟಗಾರರ ಪಟ್ಟಿ ಇಂತಿದೆ.


ಭಾರತ:
ರೋಹಿತ್ ಶರ್ಮಾ (ನಾಯಕ), ಶುಭ್ ಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಡಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ ಪ್ರೀತ್ ಬುಮ್ರಾ, ಮಹಮದ್ ಸಿರಾಜ್

ಪಾಕಿಸ್ತಾನ: 
ಫಖರ್ ಜಮಾನ್, ಇಮಾಮ್ ಉಲ್ ಹಕ್, ಬಾಬರ್ ಅಜಮ್ (ನಾಯಕ), ಎ ಸಲ್ಮಾನ್, ಐ ಅಹ್ಮದ್, ಮಹಮದ್ ರಿಜ್ವಾನ್ (ವಿಕೆಟ್ ಕೀಪರ್), ಎಸ್ ಖಾನ್, ಎಂ ನವಾಜ್, ಎನ್ ಶಾ, ಶಹೀನ್ ಅಫ್ರಿದಿ, ಹಸನ್ ರೌಫ್.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com