ಏಷ್ಯಾ ಕಪ್ 2023: ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಭಾರತಕ್ಕೆ ಪಾಕ್ ವಿರುದ್ಧ ಅತೀ ದೊಡ್ಡ ಗೆಲುವು
ಕೊಲಂಬೋ: ಏಷ್ಯಾ ಕಪ್ ಕ್ರಿಕೆಟ್ ನ ಸೂಪರ್ 4 ಹಂತದಲ್ಲಿ ಪಾಕಿಸ್ತಾನ ವಿರುದ್ಧ ಭರ್ಜರಿ ಜಯ ಸಾಧಿಸಿರುವ ಭಾರತ ತಂಡ ಕ್ರಿಕೆಟ್ ಇತಿಹಾಸದಲ್ಲೇ ಪಾಕ್ ಅತೀ ದೊಡ್ಡ ಗೆಲುವು ಸಾಧಿಸಿದೆ.
ಇಂದು ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ 228ರನ್ ಅಂತರದ ಗೆಲುವು ಸಾಧಿಸಿದೆ. ಇದು ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಪಾಕಿಸ್ತಾನ ಭಾರತಕ್ಕೆ ಸಿಕ್ಕ ಅತೀ ದೊಡ್ಡ ಗೆಲುವಾಗಿದೆ. ಈ ಹಿಂದೆ 2008ರಲ್ಲಿ ಮೀರ್ ಪುರದಲ್ಲಿ 140ರನ್ ಗಳ ಅಂತರದಲ್ಲಿ ಗೆಲುವು ಸಾಧಿಸಿತ್ತು. ಇದು ಈ ವರೆಗೂ ಭಾರತ ಪಾಕಿಸ್ತಾನ ವಿರುದ್ಧ ಗಳಿಸಿದ್ದ ಅತೀ ದೊಡ್ಡ ಗೆಲುವು ಎಂದು ಪರಿಗಣಿಸಲಾಗಿತ್ತು. ಆದರೆ ಇಂದು ಆ ದಾಖಲೆಯನ್ನು ಭಾರತ ಅಳಿಸಿ ಹಾಕಿದೆ.
Biggest win margin for India vs Pakistan in ODIs
228 runs at Colombo (RPS), today*
140 runs at Mirpur, 2008
124 runs at Birmingham, 2017
ಏಕದಿನದಲ್ಲಿ ಭಾರತಕ್ಕೆ ಸಿಕ್ಕ 4ನೇ ಅತೀ ದೊಡ್ಡ ಗೆಲುವು
ಅಂತೆಯೇ ಇಂದು ಭಾರತ ಗಳಿಸಿದ ಗೆಲುವು ರನ್ ಗಳ ಅಂತರದಲ್ಲಿ ಇದು ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಭಾರತಕ್ಕೆ ಸಿಕ್ಕ 4ನೇ ಅತೀ ದೊಡ್ಡ ಗೆಲುವಾಗಿದೆ. ಇದಕ್ಕೂ ಮೊದಲು ಇದೇ ವರ್ಷ ಶ್ರೀಲಂಕಾ ವಿರುದ್ದ ತಿರುವನಂತಪುರದಲ್ಲಿ 317ರನ್ ಗಳ ಅಂತರದ ಗೆಲುವು ಸಾಧಿಸಿತ್ತು. ಇದು ಏಕದಿನ ಕ್ರಿಕೆಟ್ ನಲ್ಲಿ ರನ್ ಗಳ ಅಂತರದಲ್ಲಿ ಭಾರತಕ್ಕೆ ಸಿಕ್ಕ ಅತೀ ದೊಡ್ಡ ಗೆಲುವಾಗಿದೆ.
ಇದಕ್ಕೂ ಮೊದಲು 2007ರಲ್ಲಿ ಪೋರ್ಟ್ ಆಫ್ ಸ್ಪೇನ್ ನಲ್ಲಿ ಬರ್ಮುಡಾ ವಿರುದ್ಧ ಭಾರತ 257ರನ್ ಗಳ ಅಂತರದ ಜಯ ಸಾಧಿಸಿತ್ತು. ಬಳಿಕ 2008ರಲ್ಲಿ ಕರಾಚಿಯಲ್ಲಿ ನಡೆದ ಪಂದ್ಯದಲ್ಲಿ ಹಾಂಕಾಂಗ್ ವಿರುದ್ಧ 256ರನ್ ಗಳ ಅಂತರದ ಗೆಲುವು ಸಾಧಿಸಿತ್ತು. ಇಂದು ಪಾಕಿಸ್ತಾನ ವಿರುದ್ಧ 228ರನ್ ಗಳ ಅಂತರ ಗೆಲುವು ಸಾಧಿಸಿದೆ.
Biggest victory for India in ODIs (in runs)
317 vs Sri Lanka, Trivandrum, 2023*
257 vs Bermuda, Port of Spain, 2007
256 vs Hongkong, Karachi, 2008
228 vs Pakistan, Colombo (RPS), 2023*
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ