W.0.W.W.4.W... ಒಂದೇ ಓವರ್ ನಲ್ಲಿ 4 ವಿಕೆಟ್ ಪಡೆದು ಲಂಕಾಕ್ಕೆ ಮಾರಕವಾದ ಸಿರಾಜ್, ವಿಡಿಯೋ!
ಭಾರತದ ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಒಂದೇ ಓವರ್ ನಲ್ಲಿ 4 ವಿಕೆಟ್ ಪಡೆಯುವ ಮೂಲಕ ಶ್ರೀಲಂಕಾ ತಂಡಕ್ಕೆ ಮಾರಕವಾಗಿದ್ದಾರೆ. ಶ್ರೀಲಂಕಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು.
Published: 17th September 2023 05:04 PM | Last Updated: 17th September 2023 05:04 PM | A+A A-

ಮೊಹಮ್ಮದ್ ಸಿರಾಜ್
ಕೊಲಂಬೊ: ಭಾರತದ ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಒಂದೇ ಓವರ್ ನಲ್ಲಿ 4 ವಿಕೆಟ್ ಪಡೆಯುವ ಮೂಲಕ ಶ್ರೀಲಂಕಾ ತಂಡಕ್ಕೆ ಮಾರಕವಾಗಿದ್ದಾರೆ. ಶ್ರೀಲಂಕಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಆದರೆ ಶ್ರೀಲಂಕಾ ನಾಯಕ ದಸುನ್ ಶನಕ ಅವರ ನಿರ್ಧಾರ ತಪ್ಪು ಎಂದು ಭಾರತದ ವೇಗದ ಬೌಲರ್‌ಗಳು ಸಾಬೀತು ಮಾಡಿದ್ದಾರೆ.
ಮೊದಲ ಓವರ್‌ನ ಮೂರನೇ ಎಸೆತದಲ್ಲಿ ಕುಸಲ್ ಪೆರೆರಾ ಅವರನ್ನು ಔಟ್ ಮಾಡುವ ಮೂಲಕ ಜಸ್ಪ್ರೀತ್ ಬುಮ್ರಾ ಶ್ರೀಲಂಕಾಕ್ಕೆ ದೊಡ್ಡ ಹೊಡೆತ ನೀಡಿದರು. ಇದರ ನಂತರ, ಸಿರಾಜ್ ಅವರು ತಮ್ಮ ಮೊದಲ ಓವರ್‌ನಲ್ಲಿ ಮೇಡನ್ ಪಡೆದರು. ನಂತರದ ಓವರ್‌ನಲ್ಲಿ ಅವರು ನಾಲ್ಕು ವಿಕೆಟ್‌ಗಳನ್ನು ಪಡೆಯುವ ಮೂಲಕ ಶ್ರೀಲಂಕಾ ಅಲ್ಪಮೊತ್ತಕ್ಕೆ ಕುಸಿಯುವಂತೆ ಮಾಡಿದ್ದಾರೆ.
W . W W 4 W!
Is there any stopping @mdsirajofficial?!
The #TeamIndia bowlers are breathing
wickets in the over! A comeback on the cards for #SriLanka?
Tune-in to #AsiaCupOnStar, LIVE NOW on Star Sports Network#INDvSL #Cricket pic.twitter.com/Lr7jWYzUnR— Star Sports (@StarSportsIndia) September 17, 2023
ಮೊಹಮ್ಮದ್ ಸಿರಾಜ್ ಅವರು ತಮ್ಮ ಎರಡನೇ ಓವರ್‌ನ ಮೊದಲ ಎಸೆತದಲ್ಲಿ ರವೀಂದ್ರ ಜಡೇಜಾಗೆ ಪಾಥುಮ್ ನಿಸ್ಸಾಂಕ ಕ್ಯಾಚ್ ನೀಡಿದರು. ಇದಾದ ಬಳಿಕ ಮೂರನೇ ಎಸೆತದಲ್ಲಿ ಸದಿರಾ ಔಟಾದರು. ಅಸಲಂಕಾ ನಾಲ್ಕನೇ ಎಸೆತದಲ್ಲಿ ಪೆವಿಲಿಯನ್‌ಗೆ ಮರಳಿದರು. ಸಿರಾಜ್ ಹ್ಯಾಟ್ರಿಕ್ ಮಿಸ್ ಆದರೆ ಕೊನೆಯ ಎಸೆತದಲ್ಲಿ ಧನಂಜಯ್ ಗೆ ಪೆವಿಲಿಯನ್ ಹಾದಿ ತೋರಿಸಿ ನಾಲ್ಕನೇ ವಿಕೆಟ್ ಪಡೆದರು.
ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಫೈನಲ್‌ನಲ್ಲಿ ಮೊಹಮ್ಮದ್ ಸಿರಾಜ್ ಇತಿಹಾಸ ನಿರ್ಮಿಸಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಂದೇ ಓವರ್‌ನಲ್ಲಿ 4 ವಿಕೆಟ್ ಪಡೆದ ಭಾರತದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಏಷ್ಯಾಕಪ್ 2023 ರ ಶ್ರೀಲಂಕಾ ವಿರುದ್ಧದ ಫೈನಲ್‌ನಲ್ಲಿ, ಮೊಹಮ್ಮದ್ ಸಿರಾಜ್ ಕೇವಲ 15 ಎಸೆತಗಳಲ್ಲಿ 5 ವಿಕೆಟ್‌ಗಳನ್ನು ಕಬಳಿಸಿದ್ದು ಇದು ದಾಖಲೆಯಾಗಿದೆ.
ಈ ಮೂಲಕ ಮೊಹಮ್ಮದ್ ಸಿರಾಜ್ ವೇಗವಾಗಿ 50 ವಿಕೆಟ್ ಪಡೆದ ನಾಲ್ಕನೇ ಭಾರತೀಯ ಆಟಗಾರನಾಗಿ ಹೊರಹೊಮ್ಮಿದ್ದಾರೆ.