ಆಸೀಸ್ ಸೋಲಿಸಿ ಅಪರೂಪದ ಸಾಧನೆ ಮಾಡಿದ ಭಾರತ, ಎಲ್ಲಾ ಮಾದರಿಯ ಕ್ರಿಕೆಟಿನಲ್ಲಿ ನಂಬರ್ 1 ಪಟ್ಟ!
ಮೊಹಾಲಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೊದಲ ಪಂದ್ಯದಲ್ಲಿ ಐದು ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದ ಭಾರತ ಅಂತಾರಾಷ್ಟ್ರೀಯ ಕ್ರಿಕೆಟ್ ರ‍್ಯಾಕಿಂಗ್ ಪಟ್ಟಿಯಲ್ಲಿ ಅಪರೂಪದ ಸಾಧನೆ ಮಾಡಿದೆ. ಏಕದಿನ, ಟೆಸ್ಟ್ ಹಾಗೂ ಟಿ-20 ಮಾದರಿಯಲ್ಲಿ ನಂಬರ್ 1 ಪಟ್ಟಕ್ಕೇರಿದೆ.
Published: 23rd September 2023 12:21 AM | Last Updated: 23rd September 2023 03:11 PM | A+A A-

ಟೀಂ ಇಂಡಿಯಾ ನಾಯಕ ರಾಹುಲ್ ಮತ್ತಿತರರು
ನವದೆಹಲಿ: ಮೊಹಾಲಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೊದಲ ಪಂದ್ಯದಲ್ಲಿ ಐದು ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದ ಭಾರತ ಅಂತಾರಾಷ್ಟ್ರೀಯ ಕ್ರಿಕೆಟ್ ರ‍್ಯಾಕಿಂಗ್ ಪಟ್ಟಿಯಲ್ಲಿ ಅಪರೂಪದ ಸಾಧನೆ ಮಾಡಿದೆ. ಏಕದಿನ, ಟೆಸ್ಟ್ ಹಾಗೂ ಟಿ-20 ಮಾದರಿಯಲ್ಲಿ ನಂಬರ್ 1 ಪಟ್ಟಕ್ಕೇರಿದೆ.
ಈ ಪಂದ್ಯಕ್ಕೂ ಮೊದಲು ಭಾರತ ಟೆಸ್ಟ್ ಹಾಗೂ ಟಿ20 ಸರಣಿಯಲ್ಲಿ ನಂ.1 ಸ್ಥಾನದಲ್ಲಿತ್ತು. ಆದರೆ ಏಕದಿನ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನದ ನಡುವೆ ನಂ.1 ಪಟ್ಟಕ್ಕಾಗಿ ಪೈಪೋಟಿ ನಡೆಯುತ್ತಿತ್ತು. ಆದರೆ ಈಗ ಆಸ್ಟ್ರೇಲಿಯಾ ಮಣಿಸಿರುವ ಭಾರತ, ಈ ಮೊದಲು ನಂಬರ್ 1 ಏಕದಿನ ತಂಡವೆನಿಸಿಕೊಂಡಿದ್ದ ಪಾಕಿಸ್ತಾನವನ್ನು ಹಿಮ್ಮೆಟ್ಟಿಸಿದೆ. ಈ ಮೂಲಕ ನಂಬರ್ 1 ಸ್ಥಾನಕ್ಕೇರಿದೆ.
ICC says, "India now reigns supreme across all formats as the No.1 team, having already occupied the top spot in Tests and T20Is." pic.twitter.com/IrCyoMIESm
— ANI (@ANI) September 22, 2023
ಸದ್ಯ ಭಾರತ ಟಿ20 ಮಾದರಿಯಲ್ಲಿ 264 ರೇಟಿಂಗ್‌ನೊಂದಿಗೆ 1 ನೇ ಸ್ಥಾನದಲ್ಲಿದ್ದರೆ, ಇಂಗ್ಲೆಂಡ್ 261 ರೇಟಿಂಗ್‌ನೊಂದಿಗೆ 2 ನೇ ಸ್ಥಾನದಲ್ಲಿದೆ. ಟೆಸ್ಟ್‌ನಲ್ಲಿ ಭಾರತ 118 ರೇಟಿಂಗ್‌ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ ಕೂಡ ಅದೇ ಅಂಕಗಳನ್ನು ಹೊಂದಿದೆ ಆದರೆ ಎರಡನೇ ಸ್ಥಾನದಲ್ಲಿದೆ.
ಇದನ್ನೂ ಓದಿ: ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯ: ಐದು ವಿಕೆಟ್ ಗಳಿಂದ ಗೆದ್ದ ಭಾರತ, ಅಗ್ರಸ್ಥಾನಕ್ಕೆ ಜಿಗಿತ!
ಇನ್ನು ಏಕದಿನ ಮಾದರಿಯಲ್ಲಿ 116 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿರುವ ಭಾರತ ನಂಬರ್ 1 ಸ್ಥಾನಕ್ಕೇರಿದರೆ, ಪಾಕಿಸ್ತಾನವು 115 ರೇಟಿಂಗ್ ಪಾಯಿಂಟ್‌ಗಳೊಂದಿಗೆ 2ನೇ ಸ್ಥಾನಕ್ಕೆ ಕುಸಿದಿದೆ. ಇದು ವಿಶ್ವಕಪ್ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಆತ್ಮಸ್ಥೈರ್ಯವನ್ನು ಹೆಚ್ಚಿಸುವಲ್ಲಿ ನೆರವಾಗಿದೆ.