DC vs CSK: ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಬ್ ಪಂತ್‌ಗೆ 12 ಲಕ್ಷ ರೂ. ದಂಡ!

ವಿಶಾಖಪಟ್ಟಣದ ವೈಎಸ್​ ರಾಜಶೇಖರ ರೆಡ್ಡಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾರಣದಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ತಂಡದ ನಾಯಕ ರಿಷಬ್ ಪಂತ್ ಸೋಮವಾರ 12 ಲಕ್ಷ ರೂ. ದಂಡ ವಿಧಿಸಲಾಗಿದೆ.
ರಿಷಬ್ ಪಂತ್‌
ರಿಷಬ್ ಪಂತ್‌R Senthilkumar

ವಿಶಾಖಪಟ್ಟಣ: ಇಲ್ಲಿನ ವೈಎಸ್​ ರಾಜಶೇಖರ ರೆಡ್ಡಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾರಣದಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ತಂಡದ ನಾಯಕ ರಿಷಬ್ ಪಂತ್ ಸೋಮವಾರ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ಭಾನುವಾರ (ಮಾರ್ಚ್ 31) ಇಲ್ಲಿ ನಡೆದ ಹಾಲಿ ಚಾಂಪಿಯನ್ ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ರನ್‌ಗಳ ಜಯ ಸಾಧಿಸಿತು. ಈ ಮೂಲಕ ಪಂದ್ಯಾವಳಿಯಲ್ಲಿ ತನ್ನ ಮೊದಲನೇ ಗೆಲುವನ್ನು ದಾಖಲಿಸಿತು. ಪಂದ್ಯಾವಳಿಯಲ್ಲಿ ಗೆಲುವಿನ ಕುದುರೆಯಂತಿದ್ದ ಸಿಎಸ್‌ಕೆ ತಂಡ ಇದೇ ಮೊದಲ ಬಾರಿಗೆ ಸೋಲು ಕಂಡಿದೆ.

'ಐಪಿಎಲ್ 2024ರ ಆವೃತ್ತಿಯ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಸ್ಲೋ ಓವರ್‌ ರೇಟ್‌ ಕಾಯ್ದುಕೊಂಡಿದ್ದಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಬ್ ಪಂತ್ ಅವರಿಗೆ ದಂಡ ವಿಧಿಸಲಾಗಿದೆ' ಎಂದು ಐಪಿಎಲ್ ಹೇಳಿಕೆಯಲ್ಲಿ ತಿಳಿಸಲಾಗಿದೆ.

ರಿಷಬ್ ಪಂತ್‌
ಐಪಿಎಲ್ 2024: ಕೊನೆಗೂ ಗೆಲುವು ದಾಖಲಿಸಿದ ಡೆಲ್ಲಿ, ಚೆನ್ನೈ ವಿರುದ್ಧ 20ರನ್ ಗಳ ಜಯ!

'ಐಪಿಎಲ್‌ನ ನೀತಿ ಸಂಹಿತೆ ಅಡಿಯಲ್ಲಿ ಟೂರ್ನಿಯಲ್ಲಿ ಮೊದಲ ಬಾರಿಗೆ ರಿಷಬ್ ಪಂತ್ ನಾಯಕತ್ವದ ತಂಡ ಸ್ಲೋ ಓವರ್‌ ರೇಟ್‌ ಪ್ರಮಾದ ಎಸೆಗಿದೆ. ಹೀಗಾಗಿ ಪ್ರಾಥಮಿಕ ಶಿಕ್ಷೆಯಾಗಿ ಕೇವಲ 12 ಲಕ್ಷ ರೂ. ದಂಡ ವಿಧಿಸಲಾಗಿದೆ' ಎಂದಿದೆ.

ಟಾಸ್​ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 191 ರನ್ ಗಳಿಸಿತು. ಡೆಲ್ಲಿ ತಂಡ ನೀಡಿದ ರನ್ ಗುರಿ ಬೆನ್ನತ್ತಿದ ಚೆನ್ನೈ ತಂಡ, 6 ವಿಕೆಟ್​ ಕಳೆದುಕೊಂಡು 131 ರನ್​ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಸಿಎಸ್‌ಕೆ ತಂಡ ಸೋಲೊಪ್ಪಿಕೊಂಡಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com