ಐಪಿಎಲ್ 2024: ಡೆಲ್ಲಿ ವಿರುದ್ಧ KKR ಗೆ 106 ರನ್ ಭರ್ಜರಿ ಜಯ

ಐಪಿಎಲ್ 2024 ಕ್ರಿಕೆಟ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ ತಂಡ 106 ರನ್ ಗಳ ಭರ್ಜರಿ ಜಯ ಸಾಧಿಸಿದೆ.
ಡೆಲ್ಲಿ ವಿರುದ್ಧ ಕೆಕೆಆರ್ ಗೆ 106 ರನ್ ಗಳ ಭರ್ಜರಿ ಜಯ
ಡೆಲ್ಲಿ ವಿರುದ್ಧ ಕೆಕೆಆರ್ ಗೆ 106 ರನ್ ಗಳ ಭರ್ಜರಿ ಜಯ

ವಿಶಾಖಪಟ್ಟಣಂ: ಐಪಿಎಲ್ 2024 ಕ್ರಿಕೆಟ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ ತಂಡ 106 ರನ್ ಗಳ ಭರ್ಜರಿ ಜಯ ಸಾಧಿಸಿದೆ.

ವಿಶಾಖಪಟ್ಟಣಂನ ವೈಎಸ್ ರಾಜಶೇಖರ್ ರೆಡ್ಡಿ ಕ್ರೀಡಾಂಗಣದಲ್ಲಿ ಇಂದು ನಡೆದ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡ ನೀಡಿದ್ದ 273 ರನ್ ಗಳ ಬೃಹತ್ ಗುರಿ ಬೆನ್ನು ಹತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ 166 ರನ್ ಗಳಿಗೆ ಸರ್ವಪತನ ಕಾಣುವ ಮೂಲಕ ಕೋಲ್ಕತಾ ವಿರುದ್ಧ 106 ರನ್ ಗಳ ಹೀನಾಯ ಸೋಲಿಗೆ ಶರಣಾಯಿತು. ಇದು ಟೂರ್ನಿಯಲ್ಲಿ ಕೋಲ್ಕತಾ ಸತತ ಮೂರನೇ ಗೆಲುವಾಗಿದ್ದು, ಅಂಕಪಟ್ಟಿಯಲ್ಲಿ 6 ಅಂಕ ಸಂಪಾದಿಸಿ ಅಗ್ರ ಸ್ಥಾನಕ್ಕೇರಿದೆ.

ಡೆಲ್ಲಿ ವಿರುದ್ಧ ಕೆಕೆಆರ್ ಗೆ 106 ರನ್ ಗಳ ಭರ್ಜರಿ ಜಯ
ಐಪಿಎಲ್ 2024: ಪಂಜಾಬ್ ವಿರುದ್ಧ 21 ರನ್ ಗಳ ಭರ್ಜರಿ ಜಯ ದಾಖಲಿಸಿದ ಲಖನೌ

ಕೋಲ್ಕತಾ ಭರ್ಜರಿ ಬ್ಯಾಟಿಂಗ್

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕೆ ಸುನೀಲ್​ ನರೈನ್​ ಮತ್ತು ಆಂಗ್‌ಕ್ರಿಶ್ ರಘುವಂಶಿ ಅಮೋಘ ಆರಂಭ ಒದಗಿಸಿದರು. 2ನೇ ವಿಕೆಟ್ ಗೆ ಈ ಜೋಡಿ ಶತಕದ ಜೊತೆಯಾಟವಾಡಿತು. ಸುನೀಲ್ ನರೈನ್ 39 ಎಸೆತದಲ್ಲಿ 7 ಸಿಕ್ಸರ್ ಮತ್ತು 7 ಬೌಂಡರಿಗಳ ನೆರವಿನಿಂದ 85 ರನ್ ಗಳನ್ನು ಚಚ್ಚಿದರು. ಆಂಗ್‌ಕ್ರಿಶ್ ರಘುವಂಶಿ 27 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 5 ಬೌಂಡರಿಗಳ ನೆರವಿನಿಂದ 54 ರನ್ ಗಳಿಸಿದರು. ಬಳಿಕ ಕ್ರೀಸ್ ಗೆ ಬಂದ 41 ರನ್ ಸಿಡಿಸಿದರು. ಅಂತಿಮ ಹಂತದಲ್ಲಿ ಬಂದ ರಿಂಕು ಸಿಂಗ್ ಕೇವಲ 8 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 1 ಬೌಂಡರಿ ನೆರವಿನಿಂದ 26 ರನ್ ಚಚ್ಚಿದರು. ಆ ಮೂಲಕ ಕೋಲ್ಕತಾ ನೈಟ್ ರೈಡರ್ಸ್ ತಂಡ ನಿಗಧಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 272 ರನ್ ಕಲೆಹಾಕಿತು.

ದೆಹಲಿ ಪರ ನಾರ್ಟ್ಜೆ 3 ವಿಕೆಟ್ ಕಬಳಿಸಿದರೆ, ಇಶಾಂತ್ ಶರ್ಮಾ 2, ಖಲೀಲ್ ಅಹ್ಮದ್ ಮತ್ತು ಮಿಚೆಲ್ ಮಾರ್ಶ್ ತಲಾ 1 ವಿಕೆಟ್ ಪಡೆದರು.

ಕೋಲ್ಕತಾ ಮಾರಕ ಬೌಲಿಂಗ್, ಡೆಲ್ಲಿ ಆಲೌಟ್

ಈ ಬೃಹತ್ ಮೊತ್ತವನ್ನು ಬೆನ್ನು ಹತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆರಂಭಿಕ ಆಘಾತ ಎದುರಿಸಿತು. ಡೇವಿಡ್ ವಾರ್ನರ್ 18ರನ್, ಪೃಥ್ವಿ ಶಾ 10 ರನ್, ಮಿಚೆಲ್ ಮಾರ್ಶ್ ಮತ್ತು ಅಭಿಷೇಕ್ ಪೊರೆಲ್ ಶೂನ್ಯ ಸುತ್ತಿ ತಂಡಕ್ಕೆ ಆಘಾತ ನೀಡಿದರು. ಈ ಹಂತದಲ್ಲಿ ಜೊತೆಗೂಡಿದ ನಾಯಕ ರಿಷಬ್ ಪಂತ್ (55 ರನ್) ಮತ್ತು ಟ್ರಿಸ್ಟಾನ್ ಸ್ಟಬ್ಸ್ (54 ರನ್) ಪ್ರತಿರೋದ ತೋರಿದರಾದರೂ, ಉಳಿದಾವ ಆಟಗಾರರು ಕ್ರೀಸ್ ನಲ್ಲಿ ಗಟ್ಟಿಯಾಗಿ ನೆಲೆಯೂರುವ ಪ್ರಯತ್ನ ಮಾಡಲಿಲ್ಲ. ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 17.2 ಓವರ್ ನಲ್ಲಿ 166 ರನ್ ಗಳಿ ಸರ್ವಪತನ ಕಂಡಿತು. ಕೋಲ್ಕತಾ ಪರ ವೈಭವ್ ಆರೋರ ಮತ್ತು ವರುಣ್ ಚಕ್ರವರ್ತಿ ತಲಾ 3 ವಿಕೆಟ್ ಕಬಳಿಸಿದರೆ, ಮಿಚೆಲ್ ಸ್ಟಾರ್ಕ್ 2 ವಿಕೆಟ್ ಪಡೆದರು. ಆಂಡ್ರೆ ರಸೆಲ್ ಮತ್ತು ಸುನಿಲ್ ನರೈನ್ ತಲಾ 1 ವಿಕೆಟ್ ಪಡೆದರು.

ತಮ್ಮ ಬ್ಯಾಟಿಂಗ್ ಮೂಲಕ ಕೋಲ್ಕತಾದ ಬೃಹತ್ ಮೊತ್ತಕ್ಕೆ ಕಾರಣರಾದ ಸುನೀಲ್ ನರೈನ್ ಅರ್ಹವಾಗಿಯೇ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com