IPL 2024: ಅತ್ಯಂತ ವೇಗದ ಎಸೆತದ ಮೂಲಕ ತಮ್ಮದೇ ದಾಖಲೆ ಮುರಿದ ಮಯಾಂಕ್ ಯಾದವ್

ಮೂರು ವಿಕೆಟ್‌ಗಳನ್ನು ಕಬಳಿಸುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್‌ಗೆ ಮಂಗಳವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಜಯ ಸಾಧಿಸಲು ನೆರವಾದ ಮಯಾಂಕ್ ಯಾದವ್ ತಮ್ಮ ಅದ್ಭುತ ಫಾರ್ಮ್ ಅನ್ನು ಮುಂದುವರೆಸಿದ್ದಾರೆ. ಈ ಐಪಿಎಲ್ ಆವೃತ್ತಿಯಲ್ಲಿ ಅತ್ಯಂತ ವೇಗದ ಎಸೆತದ ಮೂಲಕ ತಮ್ಮ ದಾಖಲೆಯನ್ನು ತಾವೇ ಮುರಿದಿದ್ದಾರೆ.
ಮಯಾಂಕ್ ಯಾದವ್
ಮಯಾಂಕ್ ಯಾದವ್
Updated on

ಮೂರು ವಿಕೆಟ್‌ಗಳನ್ನು ಕಬಳಿಸುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್‌ಗೆ ಮಂಗಳವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಜಯ ಸಾಧಿಸಲು ನೆರವಾದ ಮಯಾಂಕ್ ಯಾದವ್ ತಮ್ಮ ಅದ್ಭುತ ಫಾರ್ಮ್ ಅನ್ನು ಮುಂದುವರೆಸಿದ್ದಾರೆ. ಈ ಐಪಿಎಲ್ ಆವೃತ್ತಿಯಲ್ಲಿ ಅತ್ಯಂತ ವೇಗದ ಎಸೆತದ ಮೂಲಕ ತಮ್ಮ ದಾಖಲೆಯನ್ನು ತಾವೇ ಮುರಿದಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಗಂಟೆಗೆ 155.8 ಕಿಮೀ ವೇಗದಲ್ಲಿ ಬೌಲ್ ಮಾಡಿದ್ದ ಮಯಾಂಕ್, ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಗಂಟೆಗೆ 156.7 ಕಿಮೀ ವೇಗದಲ್ಲಿ ಬೌಲ್ ಮಾಡುವ ಮೂಲಕ ಈ ಆವೃತ್ತಿಯ ಅತ್ಯಂತ ವೇಗದ ಬೌಲರ್ ಎನಿಸಿಕೊಂಡರು. ಆರ್‌ಸಿಬಿ ಬ್ಯಾಟಿಂಗ್ ಕ್ರಮಾಂಕವನ್ನು ಕೆಡವಲು ಮಯಾಂಕ್ ಅವರು ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರೂನ್ ಗ್ರೀನ್ ಮತ್ತು ರಜತ್ ಪಾಟಿದಾರ್ ವಿಕೆಟ್‌ ಕಬಳಿಸುವ ಮೂಲಕ ತಂಡಕ್ಕೆ ನೆರವಾದರು.

ಮಯಾಂಕ್ ಸದ್ಯ ಐಪಿಎಲ್ 2024ರ ಆವೃತ್ತಿಯಲ್ಲಿ ಅತ್ಯಂತ ವೇಗದ ಎಸೆತವನ್ನು ಬೌಲಿಂಗ್ ಮಾಡಿದ ದಾಖಲೆ ಹೊಂದಿದ್ದಾರೆ. ಅವರ ನಂತರ ನಾಂದ್ರೆ ಬರ್ಗರ್ (153), ಜೆರಾಲ್ಡ್ ಕೋಟ್ಜಿ (152.3), ಅಲ್ಜಾರಿ ಜೋಸೆಫ್ (151.2) ಮತ್ತು ಮಥೀಶ ಪತಿರಾನ (150.9) ಇದ್ದಾರೆ.

ಮಯಾಂಕ್ ಯಾದವ್
ಮಯಾಂಕ್ ಯಾದವ್

ಮಂಗಳವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಮಾಡಲು ನಿರ್ಧರಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಕ್ವಿಂಟನ್ ಡಿ ಕಾಕ್ ಅವರ ಅಬ್ಬರದ ಅರ್ಧಶತಕ ಮತ್ತು ವೇಗಿ ಮಯಾಂಕ್ ಯಾದವ್ ಅವರ ಮಿಂಚಿನ ಬೌಲಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 28 ರನ್‌ಗಳ ಭರ್ಜರಿ ಜಯ ಸಾಧಿಸಿತು. ಈ ಮೂಲಕ ಎಲ್‌ಎಸ್‌ಜಿ ತಂಡವು ಆಡಿರುವ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಜಯ ಸಾಧಿಸಿದ್ದು, ಆರ್‌ಸಿಬಿ ಆಡಿರುವ ನಾಲ್ಕು ಪಂದ್ಯಗಳಲ್ಲಿ ಮೂರರಲ್ಲಿ ಸೋಲು ಕಂಡಿದೆ.

ಮಯಾಂಕ್ ಯಾದವ್
IPL 2024: RCBಗೆ ಮತ್ತೊಂದು ಸೋಲು, ಲಖನೌ ಗೆ 28 ರನ್ ಜಯ

ಲಕ್ನೋ ಸೂಪರ್ ಜೈಂಟ್ಸ್ ತಂಡವು ಕ್ವಿಂಟನ್ ಡಿ ಕಾಕ್ ಅವರ 81 (56 ಎಸೆತಗಳಲ್ಲಿ) ಮತ್ತು ನಿಕೋಲಸ್ ಪೂರನ್ ಅವರ ಅಜೇಯ 40 (21 ಎಸೆತಗಳಲ್ಲಿ) ರನ್‌ಗಳ ನೆರವಿನಿಂದ ಐದು ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿತು.

ಈ ಸವಾಲಿನ ಮೊತ್ತವನ್ನು ಬೆನ್ನತ್ತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 19.4 ಓವರ್‌ಗಳಲ್ಲಿ 153 ರನ್ ಗಳಿಸಿ ಆಲೌಟ್ ಆಗುವ ಮೂಲಕ ತನ್ನ ಸೋಲೊಪ್ಪಿಕೊಂಡಿತು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com