IPL 2024 ಹೊತ್ತಲ್ಲೇ ಟೀಂ ಇಂಡಿಯಾ ಕ್ರಿಕೆಟಿಗ Prithvi Shawಗೆ ಸಂಕಷ್ಟ: ಲೈಂಗಿಕ ಕಿರುಕುಳ ಪ್ರಕರಣದ ತನಿಖೆಗೆ ಕೋರ್ಟ್ ಆದೇಶ!

ಇಂಡಿಯನ್ ಪ್ರೀಮಿಯರ್ ಲೀಗ್ 2024 ಕ್ರಿಕೆಟ್ ಟೂರ್ನಿ ಚಾಲ್ತಿಯಲ್ಲಿರುವಂತೆಯೇ ಟೀಂ ಇಂಡಿಯಾದ ಸ್ಟಾರ್ ಆಟಗಾರ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪೃಥ್ವಿ ಶಾಗೆ ಸಂಕಷ್ಟ ಎದುರಾಗಿದ್ದು, ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ತನಿಖೆಗೆ ಆದೇಶಿಸಿದೆ.
Prithvi Shaw-sapna gill
ಪೃಥ್ವಿ ಶಾ ಮತ್ತು ಸಪ್ನಾ ಗಿಲ್
Updated on

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ 2024 ಕ್ರಿಕೆಟ್ ಟೂರ್ನಿ ಚಾಲ್ತಿಯಲ್ಲಿರುವಂತೆಯೇ ಟೀಂ ಇಂಡಿಯಾದ ಸ್ಟಾರ್ ಆಟಗಾರ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪೃಥ್ವಿ ಶಾಗೆ ಸಂಕಷ್ಟ ಎದುರಾಗಿದ್ದು, ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ತನಿಖೆಗೆ ಆದೇಶಿಸಿದೆ.

ಪೃಥ್ವಿ ಶಾ (Prithvi Shaw) ಮತ್ತು ಸಪ್ನಾ ಗಿಲ್ (Sapna GIll) ನಡುವಿನ ಹಲ್ಲೆ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದ್ದು, ಸ್ಥಳೀಯ ಮುಂಬೈ ನ್ಯಾಯಾಲಯವು ಪೃಥ್ವಿ ಶಾ ವಿರುದ್ಧ ಸಪ್ನಾಗಿಲ್ ರ ಲೈಂಗಿಕ ಕಿರುಕುಳ ಆರೋಪದ ಕುರಿತು ತನಿಖೆ ನಡೆಸುವಂತೆ ಪೊಲೀಸರಿಗೆ ಆದೇಶ ನೀಡಿದೆ. ಸಪ್ನಾಗಿಲ್ ರ ಲೈಂಗಿಕ ಕಿರುಕುಳ ಆರೋಪದ ಕುರಿತು ತನಿಖೆ ನಡೆಸಿ ಜೂನ್ 19 ರೊಳಗೆ ವರದಿ ಸಲ್ಲಿಸುವಂತೆ ಮುಂಬೈ ಪೊಲೀಸರಿಗೆ ನಿರ್ದೇಶನ ನೀಡಿದೆ.

Prithvi Shaw-sapna gill
ಸೆಲ್ಫಿ ವಿವಾದ: IPL ನಡುವೆ ಪೃಥ್ವಿ ಶಾಗೆ ಸಂಕಷ್ಟ; ಕ್ರಿಕೆಟಿಗನ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ ಸಪ್ನಾ ಗಿಲ್

ಏನಿದು ಪ್ರಕರಣ?

ಕಳೆದ ವರ್ಷ ಫೆಬ್ರವರಿಯಲ್ಲಿ ಮುಂಬೈ ನಗರದ ಅಂಧೇರಿ ಪ್ರದೇಶದ ಪಬ್​ನಲ್ಲಿ ಸಪ್ನಾ ಗಿಲ್ ಮತ್ತು ಪೃಥ್ವಿ ಶಾ ನಡುವೆ ಜಗಳ ಏರ್ಪಟ್ಟಿತ್ತು. ಇದೇ ಜಗಳಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದ್ದು, ಬೇಸ್ ಬಾಲ್ ಬ್ಯಾಟ್ ನಿಂದ ಪೃಥ್ವಿ ಶಾ ಅವರ ಕಾರಿನ ಮೇಲೆ ದಾಳಿ ಮಾಡಿದ ಆರೋಪದ ಮೇಲೆ ಸಪ್ನಾ ಗಿಲ್ ಅವರನ್ನು ಬಂಧಿಸಲಾಗಿತ್ತು. ನಂತರ, ಆಕೆ ಪೃಥ್ವಿ ಶಾ ವಿರುದ್ಧ ಆಕೆ ಲೈಂಗಿಕ ಕಿರುಕುಳದ ಆರೋಪಗಳನ್ನು ಮಾಡಿದ್ದರು. ಇದೀಗ ಇದೇ ಪ್ರಕರಣದ ತನಿಖೆ ನಡೆಸುವಂತೆ ಕೋರ್ಟ್ ದೆಹಲಿ ಪೊಲೀಸರಿಗೆ ಆದೇಶ ನೀಡಿದೆ.

ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದ ಸಪ್ನಾ ಗಿಲ್

ಪೃಥ್ವಿ ಶಾ ಮತ್ತು ಅವರ ಸ್ನೇಹಿತ ಆಶಿಶ್ ಯಾದವ್ ವಿರುದ್ಧ ಸಪ್ನಾ ಗಿಲ್ ಲೈಂಗಿಕ ಕಿರುಕುಳದ ಆರೋಪ ಹೊರಿಸಿ ದೂರು ದಾಖಲಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 (ಮಹಿಳೆಯ ಗೌರವಕ್ಕೆ ಧಕ್ಕೆ ತರುವ ಉದ್ದೇಶದಿಂದ ಹಲ್ಲೆ ಅಥವಾ ಕ್ರಿಮಿನಲ್ ಬಲಪ್ರಯೋಗ), 509 (ಮಹಿಳೆಯ ಗೌರವವನ್ನು ಅವಮಾನಿಸುವ ಉದ್ದೇಶದ ಪದ, ಸನ್ನೆ ಅಥವಾ ಕೃತ್ಯ) ಮತ್ತು 324 (ಅಪಾಯಕಾರಿ ಆಯುಧಗಳು ಅಥವಾ ವಿಧಾನಗಳಿಂದ ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು) ಅಡಿಯಲ್ಲಿ ಅವರು ಎಫ್ಐಆರ್ ದಾಖಲಿಸಿದ್ದಾರೆ. ಇದೀಗ ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಸ್.ಸಿ.ಟೇಡೆ ಅವರು ಈ ಬಗ್ಗೆ ತನಿಖೆ ನಡೆಸಿ ಜೂನ್ 19 ರೊಳಗೆ ವರದಿ ಸಲ್ಲಿಸುವಂತೆ ಮುಂಬೈ ಪೊಲೀಸರಿಗೆ ಸೂಚಿಸಿದ್ದಾರೆ.

Prithvi Shaw-sapna gill
ಕ್ರಿಕೆಟಿಗ ಪೃಥ್ವಿ ಶಾ ಮೇಲೆ ದಾಳಿ: ಬಂಧನಕ್ಕೊಳಗಾಗಿರುವ ಭೋಜ್‌ಪುರಿ ನಟಿ ಸಪ್ನಾ ಗಿಲ್ ಹಿನ್ನಲೆ ಗೊತ್ತೆ?

ಕುತೂಹಲಕಾರಿ ಸಂಗತಿಯೆಂದರೆ, ಮುಂಬೈ ಪೊಲೀಸರು ಹಿಂದಿನ ತನಿಖೆಯಲ್ಲಿ ಶಾ ಅವರನ್ನು ಆರೋಪದಿಂದ ಮುಕ್ತಗೊಳಿಸಿದ್ದರು.

ಐಪಿಎಲ್ ನಲ್ಲಿ ತಲ್ಲೀನರಾಗಿರುವ ಪೃಥ್ವಿ ಶಾ

ಇನ್ನು ಪೃಥ್ವಿ ಶಾ ಪ್ರಸ್ತುತ ಐಪಿಎಲ್ 2024 ರಲ್ಲಿ ನಿರತರಾಗಿದ್ದು, ಡೆಲ್ಲಿ ಕ್ಯಾಪಿಟಲ್ಸ್​​​ ತಂಡದ ಸದಸ್ಯರಾಗಿದ್ದಾರೆ. ಬಲಗೈ ಬ್ಯಾಟ್ಸ್ಮನ್ ಐಪಿಎಲ್ 2024 ರಲ್ಲಿ ಡಿಸಿ ಪರ 3 ಪಂದ್ಯಗಳಲ್ಲಿ 2 ಪಂದ್ಯಗಳನ್ನು ಆಡಿದ್ದಾರೆ. ಅವರು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 42 ರನ್ ಗಳಿಸಿದ್ದರು ಮತ್ತು ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಹಿಂದಿನ ಪಂದ್ಯದಲ್ಲಿ 10 ರನ್​ಗಳಿಗೆ ಔಟಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com