DC vs KKR: ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಬ್ ಪಂತ್‌ಗೆ 24 ಲಕ್ಷ ರೂ. ದಂಡ!

ಇಂಡಿಯನ್ ಪ್ರೀಮಿಯರ್ ಲೀಗ್‌ (IPL) 2024ರ ಆವೃತ್ತಿಯಲ್ಲಿ ಬುಧವಾರ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾರಣದಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ತಂಡದ ನಾಯಕ ರಿಷಬ್ ಪಂತ್ ಅವರಿಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಬ್ ಪಂತ್
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಬ್ ಪಂತ್

ವಿಶಾಖಪಟ್ಟಣ: ಇಂಡಿಯನ್ ಪ್ರೀಮಿಯರ್ ಲೀಗ್‌ (IPL) 2024ರ ಆವೃತ್ತಿಯಲ್ಲಿ ಬುಧವಾರ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾರಣದಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ತಂಡದ ನಾಯಕ ರಿಷಬ್ ಪಂತ್ ಅವರಿಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡವು ಎರಡನೇ ಬಾರಿಗೆ ಸ್ಲೋ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ರಿಷಬ್ ಪಂತ್ ಅವರಿಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ. ತಂಡದ ಉಳಿದ ಆಟಗಾರರಿಗೂ ಸಹ ಪಂದ್ಯ ಶುಲ್ಕದ ಶೇ 25 ರಷ್ಟು ದಂಡ ವಿಧಿಸಲಾಗಿದೆ.

'ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ನೇ ಆವೃತ್ತಿಯ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಬ್ ಪಂತ್ ಅವರಿಗೆ ದಂಡ ವಿಧಿಸಲಾಗಿದೆ' ಎಂದು ಐಪಿಎಲ್ ಹೇಳಿಕೆಯಲ್ಲಿ ತಿಳಿಸಿದೆ.

'ಐಪಿಎಲ್‌ನ ನೀತಿ ಸಂಹಿತೆ ಅಡಿಯಲ್ಲಿ ಟೂರ್ನಿಯಲ್ಲಿ ಎರಡನೇ ಬಾರಿಗೆ ಡಿಸಿ ತಂಡವು ಸ್ಲೋ ಓವರ್‌ ರೇಟ್‌ ಪ್ರಮಾದ ಎಸೆಗಿದೆ. ಹೀಗಾಗಿ ಪಂತ್‌ ಅವರಿಗೆ ಶಿಕ್ಷೆಯಾಗಿ 24 ಲಕ್ಷ ರೂ. ದಂಡ ವಿಧಿಸಲಾಗಿದೆ. ಇಂಪ್ಯಾಕ್ಟ್ ಪ್ಲೇಯರ್ ಸೇರಿದಂತೆ ಪ್ಲೇಯಿಂಗ್ XI ನ ಉಳಿದ ಆಟಗಾರರಿಗೆ ಪ್ರತ್ಯೇಕವಾಗಿ 6 ಲಕ್ಷ ರೂ. ಅಥವಾ ಆ ಪಂದ್ಯ ಶುಲ್ಕದ ಶೇ 25 ರಷ್ಟು ದಂಡ ವಿಧಿಸಲಾಗಿದೆ' ಎಂದಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಬ್ ಪಂತ್
DC vs CSK: ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಬ್ ಪಂತ್‌ಗೆ 12 ಲಕ್ಷ ರೂ. ದಂಡ!

ವಿಶಾಖಪಟ್ಟಣದ ವೈಎಸ್‌ ರಾಜಶೇಖರ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಕೆಕೆಆರ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 272 ರನ್‌ಗಳನ್ನು ಕಲೆಹಾಕಿತು. ಇದು ಐಪಿಎಲ್ ಇತಿಹಾಸದಲ್ಲೇ ಎರಡನೇ ಅತಿದೊಡ್ಡ ಮೊತ್ತವಾಗಿದೆ.

ಬಳಿಕ ಈ ಬೃಹತ್ ಮೊತ್ತ ಬೆನ್ನತ್ತಿದ್ದ ಡೆಲ್ಲಿ ತಂಡ 106 ರನ್‌ಗಳ ಅಂತರದಿಂದ ಸೋಲು ಕಂಡಿತು. ಡೆಲ್ಲಿ ಕ್ಯಾಪಿಟಲ್ಸ್ ತಂಡವು ಈ ಆವೃತ್ತಿಯಲ್ಲಿ ಆಡಿರುವ ನಾಲ್ಕು ಪಂದ್ಯಗಳಲ್ಲಿ ಮೂರನೇ ಬಾರಿಗೆ ಸೋಲೋಪ್ಪಿಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com