RCB vs RR: ಜೈಪುರದಲ್ಲಿ ಆರ್‌ಆರ್ ಎದುರಿಸಲಿರುವ ಆರ್‌ಸಿಬಿ; ಪ್ಲೇಯಿಂಗ್ 11 ನಲ್ಲಿ ಬದಲಾವಣೆ?

ಶನಿವಾರ ಇಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 2024ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ರಾಜಸ್ಥಾನ್ ರಾಯಲ್ಸ್ (ಆರ್‌ಆರ್) ತಂಡಗಳು ಸೆಣಸಲಿವೆ. ಆಡಿರುವ ನಾಲ್ಕು ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯದಲ್ಲಿ ಗೆಲುವು ಕಂಡಿರುವ ಆರ್‌ಸಿಬಿ ಸದ್ಯ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
ಆರ್‌ಸಿಬಿ vs ಆರ್‌ಆರ್
ಆರ್‌ಸಿಬಿ vs ಆರ್‌ಆರ್

ಜೈಪುರ: ಶನಿವಾರ ಇಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 2024ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ರಾಜಸ್ಥಾನ್ ರಾಯಲ್ಸ್ (ಆರ್‌ಆರ್) ತಂಡಗಳು ಸೆಣಸಲಿವೆ.

ಆಡಿರುವ ನಾಲ್ಕು ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯದಲ್ಲಿ ಗೆಲುವು ಕಂಡಿರುವ ಆರ್‌ಸಿಬಿ ಸದ್ಯ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡವು ಆಡಿರುವ ಮೂರು ಪಂದ್ಯಗಳಲ್ಲಿ ಮೂರರಲ್ಲಿ ಗೆಲುವು ಸಾಧಿಸಿದ್ದು, ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

ಈ ಆವೃತ್ತಿಯಲ್ಲಿ ತವರಿನಲ್ಲಿ ಆಡಿದ ಎಲ್ಲಾ ತಂಡಗಳು ಗೆಲುವು ಸಾಧಿಸಿದ್ದು, ಆರ್‌ಸಿಬಿ ಮಾತ್ರ ತವರಿನಲ್ಲಿ ಎರಡು ಪಂದ್ಯಗಳನ್ನು ಸೋತ ಮೊದಲ ತಂಡವಾಗಿದೆ. ಆ ಆವೃತ್ತಿಯಲ್ಲಿ ಆಲೌಟ್ ಆದ ಮೊದಲ ತಂಡ ಎನ್ನುವ ದಾಖಲೆ ಕೂಡ ಮಾಡಿದೆ. ಸದ್ಯ ಆರ್‌ಸಿಬಿ ಆಟ ನೋಡಿದ ಅಭಿಮಾನಿಗಳು ಹೊಸ ಅಧ್ಯಾಯಕ್ಕಿಂತ ಹಳೆ ಅಧ್ಯಾಯವೇ ಚನ್ನಾಗಿತ್ತು ಎಂದಿದ್ದಾರೆ.

ಆರ್‌ಸಿಬಿ vs ಆರ್‌ಆರ್
IPL 2024: RCB ವೈಫಲ್ಯಕ್ಕೆ ವಿರಾಟ್ ಕೊಹ್ಲಿ ಕಾರಣ; ಮಾಜಿ ಕ್ರಿಕೆಟಿಗನ ಗಂಭೀರ ಆರೋಪ

ಆರ್‌ಸಿಬಿ ತಂಡದ ನಾಯಕ ಫಾಫ್ ಡು ಪ್ಲೆಸಿಸ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರೂನ್ ಗ್ರೀನ್ ಮತ್ತು ರಜತ್ ಪಾಟಿದಾರ್ ಅವರನ್ನೊಳಗೊಂಡ ಆರ್‌ಸಿಬಿ ಅಗ್ರ ಬ್ಯಾಟಿಂಗ್ ಕ್ರಮಾಂಕವನ್ನು ಹೊಂದಿದ್ದು, ಈ ಪಂದ್ಯದಲ್ಲಾದರೂ ಅತ್ಯುತ್ತಮ ಪ್ರದರ್ಶನ ನೀಡುವ ತವಕದಲ್ಲಿದೆ.

ಈ ಐಪಿಎಲ್ ಆವೃತ್ತಿಯಲ್ಲಿ ಅತ್ಯಧಿಕ ರನ್ ಕಲೆಹಾಕುವ ಮೂಲಕ ಆರೆಂಜ್ ಕ್ಯಾಪ್ ತಮ್ಮದಾಗಿಸಿಕೊಂಡಿರುವ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (203) ಎರಡು ಅರ್ಧಶತಕಗಳನ್ನು ಗಳಿಸಿದ್ದು ಬಿಟ್ಟರೆ, ಆರ್‌ಸಿಬಿಯ ಬೇರೆ ಯಾವುದೇ ಬ್ಯಾಟರ್ ರನ್ ಕಲೆಹಾಕುವಲ್ಲಿ ಯಶಸ್ವಿಯಾಗಿಲ್ಲ.

ಆರ್‌ಸಿಬಿ vs ಆರ್‌ಆರ್
ಮುಂದಿನ ಪಂದ್ಯ ಗೆಲ್ಬೇಕು ಅಂದ್ರೆ RCB ಪ್ಲೇಯಿಂಗ್ XI ನಿಂದ ಇವರನ್ನು ಕೈಬಿಡಿ; ಮಾಜಿ ಆಟಗಾರನ ಸಲಹೆ

ಬಲಿಷ್ಠ ರಾಜಸ್ಥಾನ ರಾಯಲ್ಸ್ ವಿರುದ್ಧ ಗೆಲ್ಲಬೇಕೆಂದರೆ ಆರ್‌ಸಿಬಿ ತಂಡದಲ್ಲಿ ಬದಲಾವಣೆ ಮಾಡಲೇಬೇಕಿದೆ. ಇಲ್ಲದಿದ್ದರೆ ಮತ್ತೊಂದು ಸೋಲು ಶತಸಿದ್ಧ ಎಂದು ಅಭಿಮಾನಿಗಳು, ಮಾಜಿ ಕ್ರಿಕೆಟಿಗರು ಅಭಿಪ್ರಾಯಪಟ್ಟಿದ್ದಾರೆ.

ಆಡಿರುವ ಎಲ್ಲಾ ಪಂದ್ಯಗಳಲ್ಲಿ ಗೆಲುವಿನ ರುಚಿ ಕಂಡಿರುವ ರಾಜಸ್ಥಾನ್ ರಾಯಲ್ಸ್ ತಂಡವು ಈ ಪಂದ್ಯದಲ್ಲಿಯೂ ತಮ್ಮ ಗೆಲುವಿನ ಸವಾರಿಯನ್ನು ಮುಂದುವರಿಸುವ ನಿರೀಕ್ಷೆಯಲ್ಲಿದೆ. ಆರ್‌ಸಿಬಿ ತಮ್ಮ ಕಳಪೆ ಪ್ರದರ್ಶನಕ್ಕೆ ಸಾಕ್ಷಿಯಾಗಿದ್ದು, ಈಸಲ ಪಂದ್ಯ ಗೆಲ್ಲಲೇಬೇಕಾದ ಒತ್ತಡದಲ್ಲಿ ಸಿಲುಕಿದೆ. ಶನಿವಾರ ಸಂಜೆ 7.30 ಕ್ಕೆ ಪಂದ್ಯ ನಡೆಯಲಿದ್ದು, ಜೈಪುರದ ಸವಾಯ್ ಮಾನ್‌ಸಿಂಗ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ.

ಆರ್‌ಸಿಬಿ vs ಆರ್‌ಆರ್
ಐಪಿಎಲ್ 2023 CSK vs RR: ಚೆನ್ನೈ ವಿರುದ್ಧ ರಾಜಸ್ಥಾನಕ್ಕೆ 3 ರನ್ ಗಳ ಗೆಲುವು 

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ

ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜ್ಯಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್, ವಿಜಯಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮೆರೂನ್ ಗ್ರೀನ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರಣ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾನ್.

ರಾಜಸ್ಥಾನ್ ರಾಯಲ್ಸ್ ತಂಡ

ಸಂಜು ಸ್ಯಾಮ್ಸನ್ (ನಾಯಕ), ಜೋಸ್ ಬಟ್ಲರ್, ಶಿಮ್ರೋನ್ ಹೆಟ್ಮೆಯರ್, ಯಶಸ್ವಿ ಜೈಸ್ವಾಲ್, ಧ್ರುವ ಜುರೆಲ್, ರಿಯಾನ್ ಪರಾಗ್, ಡೊನೊವನ್ ಫೆರೇರಾ, ಕುನಾಲ್ ರಾಥೋಡ್, ರವಿಚಂದ್ರನ್ ಅಶ್ವಿನ್, ಕುಲದೀಪ್ ಸೇನ್, ನವದೀಪ್ ಸೈನಿ, ಕೇಶವ್ ಮಹಾರಾಜ್, ಸಂದೀಪ್ ಶರ್ಮಾ, ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಾಹಲ್ , ಅವೇಶ್ ಖಾನ್, ರೋವ್ಮನ್ ಪೊವೆಲ್, ಶುಭಂ ದುಬೆ, ಟಾಮ್ ಕೊಹ್ಲರ್-ಕ್ಯಾಡ್ಮೋರ್, ಅಬಿದ್ ಮುಷ್ತಾಕ್, ನಾಂದ್ರೆ ಬರ್ಗರ್.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com