IPL 2024: ಕೊಹ್ಲಿ ದಾಖಲೆಯ 8ನೇ ಶತಕ, ರಾಜಸ್ಥಾನಕ್ಕೆ 184 ರನ್ ಟಾರ್ಗೆಟ್ ನೀಡಿದ RCB

ಇಂಡಿಯನ್ ಪ್ರೀಮಿಯರ್ ಲೀಗ್ 2024ರ 19ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ವಿರಾಟ್ ಕೊಹ್ಲಿ 67 ಎಸೆತಗಳಲ್ಲಿ ತಮ್ಮ ಶತಕವನ್ನು ಪೂರ್ಣಗೊಳಿಸಿದರು. ಇದು ವಿರಾಟ್ ಕೊಹ್ಲಿ ಐಪಿಎಲ್ ವೃತ್ತಿ ಜೀವನದಲ್ಲಿ 8ನೇ ಶತಕವಾಗಿದೆ.
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ

ಇಂಡಿಯನ್ ಪ್ರೀಮಿಯರ್ ಲೀಗ್ 2024ರ 19ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ವಿರಾಟ್ ಕೊಹ್ಲಿ 67 ಎಸೆತಗಳಲ್ಲಿ ತಮ್ಮ ಶತಕವನ್ನು ಪೂರ್ಣಗೊಳಿಸಿದರು. ಇದು ವಿರಾಟ್ ಕೊಹ್ಲಿ ಐಪಿಎಲ್ ವೃತ್ತಿ ಜೀವನದಲ್ಲಿ 8ನೇ ಶತಕವಾಗಿದೆ.

ವಿರಾಟ್ ಕೊಹ್ಲಿ ಈ ಹಿಂದೆ 2019ರಲ್ಲಿ KKR ವಿರುದ್ಧ ತಮ್ಮ 7ನೇ ಶತಕವನ್ನು ಗಳಿಸಿದ್ದರು. ಇದು 17ನೇ ಋತುವಿನಲ್ಲಿ ಯಾವುದೇ ಬ್ಯಾಟ್ಸ್‌ಮನ್ ಗಳಿಸಿದ ಮೊದಲ ಶತಕವಾಗಿದೆ. ಕೊಹ್ಲಿ ಅಜೇಯ ಶತಕ ಇನ್ನಿಂಗ್ಸ್‌ನಲ್ಲಿ ವಿರಾಟ್ 9 ಬೌಂಡರಿ ಮತ್ತು 4 ಸಿಕ್ಸರ್‌ಗಳನ್ನು ಸಹ ಬಾರಿಸಿದರು. ರಾಜಸ್ಥಾನ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಸೋತ RCB ತಂಡ ಮೊದಲು ಬ್ಯಾಟಿಂಗ್ ಮಾಡಲು ಮೈದಾನಕ್ಕಿಳಿದಿತ್ತು. ಫಾಫ್ ಡುಪ್ಲೆಸಿಸ್ ಜತೆ ಇನ್ನಿಂಗ್ಸ್ ಆರಂಭಿಸಲು ಬಂದ ವಿರಾಟ್ ಕೊಹ್ಲಿ ಆರಂಭದಿಂದಲೇ ಸ್ಫೋಟಕ ಬ್ಯಾಟಿಂಗ್ ಮೂಲಕ ರಾಜಸ್ತಾನ ಬೌಲರ್ ಗಳನ್ನು ಸಂಪೂರ್ಣವಾಗಿ ತಲ್ಲಣಗೊಳಿಸಿದರು.

ವಿರಾಟ್ ಕೊಹ್ಲಿ
RR vs RCB: ಸತತ ಸೋಲಿನ ಕಹಿಯಿಂದ ಹೊರಬರಬೇಕಿದೆ ಆರ್ ಸಿಬಿ; ಈ ಪಂದ್ಯ ಸೋತರೆ ಮುಂದೇನು?

ಈ ವೇಳೆ ವಿರಾಟ್ ಕೊಹ್ಲಿ ನಾಯಕ ಫಾಫ್ ಡುಪ್ಲೆಸಿಸ್ ಜೊತೆಗೂಡಿ 100ಕ್ಕೂ ಹೆಚ್ಚು ಆರಂಭಿಕ ಜೊತೆಯಾಟ ನಡೆಸಿದರು. ಐಪಿಎಲ್‌ನ ಈ 17ನೇ ಸೀಸನ್‌ನಲ್ಲಿ ಮೊದಲ ಬಾರಿಗೆ ಯಾವುದೇ ತಂಡದ ಆರಂಭಿಕರ ನಡುವೆ 100 ಅಥವಾ ಅದಕ್ಕಿಂತ ಹೆಚ್ಚು ರನ್‌ಗಳ ಜೊತೆಯಾಟ ನಡೆದಿದೆ.

ರಾಜಸ್ಥಾನ ವಿರುದ್ಧದ ಈ ಪಂದ್ಯದಲ್ಲಿ ಆರ್‌ಸಿಬಿಯ ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ವಿರಾಟ್ ಅಜೇಯ 113 ರನ್ ಸಿಡಿಸಿದರೆ ಡುಪ್ಲೆಸಿಸ್ 44 ರನ್ ಬಾರಿಸಿದ್ದಾರೆ. ಇನ್ನುಳಿದಂತೆ ಕ್ಯಾಮರೂನ್ ಗ್ರೀನ್ ಅಜೇಯ 5 ರನ್ ಗಳಿಸಿದ್ದಾರೆ. ರಾಜಸ್ಥಾನ ಪರ ಬೌಲಿಂಗ್ ನಲ್ಲಿ ಯುಜುವೇಂದ್ರ ಚಹಾಲ್ 2 ವಿಕೆಟ್ ಹಾಗೂ ನಾಂದ್ರೆ ಬರ್ಗರ್ 1 ವಿಕೆಟ್ ಪಡೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com