IPL 2024: ಕೊಹ್ಲಿ ಶತಕ ವ್ಯರ್ಥ, ರಾಜಸ್ಥಾನ ವಿರುದ್ಧ RCB ಗೆ ಹೀನಾಯ ಸೋಲು
ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ 2024ರ 19ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ ಜೋಸ್ ಬಟ್ಲರ್ ಅವರ ಭರ್ಜರಿ ಶತಕದ ನೆರವಿನಿಂದ ಗೆಲುವು ಸಾಧಿಸಿತು.
ಇಂದು ಜೈಪುರದ ಸವಾಯ್ ಮಾನ್ ಸಿಂಗ್ ಸ್ಟೇಡಿಯಮ್ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ನಿಗದಿತ 20 ಓವರ್ಗಳಲ್ಲಿ 3 ವಿಕೆಟ್ ನಷ್ಟ ಮಾಡಿಕೊಂಡರು 183 ರನ್ ಬಾರಿಸಿತು.
ವಿರಾಟ್ ಕೊಹ್ಲಿ 67 ಎಸೆತಗಳಲ್ಲಿ ತಮ್ಮ ಶತಕವನ್ನು ಪೂರ್ಣಗೊಳಿಸಿದರು. ಇದು ವಿರಾಟ್ ಕೊಹ್ಲಿ ಐಪಿಎಲ್ ವೃತ್ತಿ ಜೀವನದಲ್ಲಿ 8ನೇ ಶತಕವಾಗಿದೆ.
ಗೆಲುವಿಗೆ 184 ರನ್ ಗಳ ಗುರಿ ಬೆನ್ನತ್ತಿದ ರಾಜಸ್ಥಾನ್ ತಂಡ 19.1 ಓವರ್ಗಳಲ್ಲಿ 4 ವಿಕೆಟ್ ಗೆ 189 ರನ್ ಬಾರಿಸಿ ಸುಲಭವಾಗಿ 6 ವಿಕೆಟ್ ಗಳ ಜಯ ತನ್ನದಾಗಿಸಿಕೊಂಡಿತು. 58 ಎಸೆತಗಳಲ್ಲಿ ಶತಕ ಬಾರಿಸಿದ ಜೋಸ್ ಬಟ್ಲರ್ ಗೆಲುವಿನ ರೂವಾರಿ ಎನಿಸಿಕೊಂಡರು. ಅವರದ್ದು ಕೂಡ ಐಪಿಎಲ್ನಲ್ಲಿ 6ನೇ ಶತಕವಾಗಿದೆ. ಈ ಮೂಲಕ ಕ್ರಿಸ್ಗೇಲ್ ಅವರ ಸಾಧನೆಯನ್ನು ಸರಿಗಟ್ಟಿದ್ದಾರೆ.
ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಇದು ಸತತ ನಾಲ್ಕನೇ ಗೆಲುವಾಗಿದೆ. ಅಲ್ಲದೆ ನಾಲ್ಕು ಗೆಲುವುಗಳ ಸಮೇತ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.
ರಾಜಸ್ಥಾನ ವಿರುದ್ಧದ ಈ ಪಂದ್ಯದಲ್ಲಿ ಆರ್‌ಸಿಬಿಯ ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ವಿರಾಟ್ ಕೊಹ್ಲಿ ಅಜೇಯ 113 ರನ್ ಸಿಡಿಸಿದರೆ, ಡುಪ್ಲೆಸಿಸ್ 44 ರನ್ ಬಾರಿಸಿದ್ದಾರೆ. ಇನ್ನುಳಿದಂತೆ ಕ್ಯಾಮರೂನ್ ಗ್ರೀನ್ ಅಜೇಯ 5 ರನ್ ಗಳಿಸಿದ್ದಾರೆ. ರಾಜಸ್ಥಾನ ಪರ ಬೌಲಿಂಗ್ ನಲ್ಲಿ ಯುಜುವೇಂದ್ರ ಚಹಾಲ್ 2 ವಿಕೆಟ್ ಹಾಗೂ ನಾಂದ್ರೆ ಬರ್ಗರ್ 1 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ