IPL 2024: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಂತರ ದಾಖಲೆ ಬರೆದ ಸಿಎಸ್‌ಕೆ ಆಲ್‌ರೌಂಡರ್ ರವೀಂದ್ರ ಜಡೇಜಾ!

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ನೇ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿದ ಚೆನ್ನೈ ಸೂಪರ್ ಕಿಂಗ್ಸ್ ಆಲ್ ರೌಂಡರ್ ರವೀಂದ್ರ ಜಡೇಜಾ ಹೊಸ ದಾಖಲೆ ಬರೆದಿದ್ದಾರೆ. ಐಪಿಎಲ್‌ನಲ್ಲಿ ಸ್ಟಾರ್ ಬ್ಯಾಟರ್‌ಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಂತರದ ಸ್ಥಾನವನ್ನು ಪಡೆದಿದ್ದಾರೆ.
ರವೀಂದ್ರ ಜಡೇಜಾ
ರವೀಂದ್ರ ಜಡೇಜಾ

ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ನೇ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿದ ಚೆನ್ನೈ ಸೂಪರ್ ಕಿಂಗ್ಸ್ ಆಲ್ ರೌಂಡರ್ ರವೀಂದ್ರ ಜಡೇಜಾ ಹೊಸ ದಾಖಲೆ ಬರೆದಿದ್ದಾರೆ. ಐಪಿಎಲ್‌ನಲ್ಲಿ ಸ್ಟಾರ್ ಬ್ಯಾಟರ್‌ಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಂತರದ ಸ್ಥಾನವನ್ನು ಪಡೆದಿದ್ದಾರೆ.

ಸೋಮವಾರ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ತಮ್ಮ ಅತ್ಯುತ್ತಮ ಬೌಲಿಂಗ್ ಪ್ರದರ್ಶನದಿಂದ ಕೆಕೆಆರ್‌ ತಂಡವನ್ನು ಕಾಡಿದ ಜಡೇಜಾ, ಸಿಎಸ್‌ಕೆ ಗೆಲುವಿಗೆ ಗಮನಾರ್ಹ ಕೊಡುಗೆ ನೀಡಿದರು.

ರವೀಂದ್ರ ಜಡೇಜಾ
ರವೀಂದ್ರ ಜಡೇಜಾ

ಜಡೇಜಾ ಅವರು ಎರಡು ಕ್ಯಾಚ್‌ ಹಿಡಿದರು ಮತ್ತು ಬೌಲಿಂಗ್‌ನಲ್ಲಿ ಮೂರು ವಿಕೆಟ್‌ಗಳನ್ನು ಕಬಳಿಸಿದರು. ಇದು ಕೆಕೆಆರ್ ತಂಡವನ್ನು ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 137 ರನ್‌ಗಳಿಗೆ ಕಟ್ಟಿಹಾಕಲು ನೆರವಾಯಿತು.

ಎರಡು ಕ್ಯಾಚ್‌ಗಳೊಂದಿಗೆ, ಜಡೇಜಾ ಫೀಲ್ಡರ್ ಆಗಿ 100 ಕ್ಯಾಚ್‌ಗಳನ್ನು ಪೂರ್ಣಗೊಳಿಸಿದ ನಾಲ್ಕನೇ ಆಟಗಾರ ಎನಿಸಿಕೊಂಡರು. ಕೆಕೆಆರ್‌ ಇನಿಂಗ್ಸ್‌ನ ಮೊದಲ ಎಸೆತದಲ್ಲಿಯೇ ಜಡೇಜಾ ಅವರು ಫಿಲಿಪ್ ಸಾಲ್ಟ್ ಅವರ ಕ್ಯಾಚ್ ಹಿಡಿದರು. 20 ನೇ ಓವರ್‌ನಲ್ಲಿ ಆರಾಮದಾಯಕ ಕ್ಯಾಚ್ ಹಿಡಿಯುವ ಮೂಲಕ ಕೆಕೆಆರ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಔಟ್ ಆಗಲು ಕಾರಣರಾದರು.

ರವೀಂದ್ರ ಜಡೇಜಾ
IPL 2024: ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 7 ವಿಕೆಟ್‌ಗಳ ಜಯ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟರ್ ವಿರಾಟ್ ಕೊಹ್ಲಿ ಐಪಿಎಲ್‌ನ 242 ಪಂದ್ಯಗಳಲ್ಲಿ 110 ಕ್ಯಾಚ್‌ಗಳನ್ನು ಹಿಡಿಯುವ ಮೂಲಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್‌ನ ಮಾಜಿ ಸ್ಟಾರ್ ಆಟಗಾರ ಸುರೇಶ್ ರೈನಾ ತಮ್ಮ 205 ಪಂದ್ಯಗಳಲ್ಲಿ 109 ಕ್ಯಾಚ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ಮಾಜಿ ಆಟಗಾರ ಕೀರಾನ್ ಪೊಲಾರ್ಡ್ 189 ಪಂದ್ಯಗಳಲ್ಲಿ 103 ಕ್ಯಾಚ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಕಳೆದ ವಾರ, ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಪಂದ್ಯದಲ್ಲಿ ರೋಹಿತ್ ಶರ್ಮಾ ತಮ್ಮ 100ನೇ ಕ್ಯಾಚ್‌ ಹಿಡಿದ ನಾಲ್ಕನೇ ಆಟಗಾರರಾದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com