IPL 2024, SRH vs PBKS: ಪಂಜಾಬ್‌ ಕಿಂಗ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್‌‌ಗೆ 2 ರನ್‌ಗಳ ರೋಚಕ ಜಯ

ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್) 2024 ನೇ ಆವೃತ್ತಿಯ ಮಂಗಳವಾರ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್) ತಂಡವು ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ವಿರುದ್ಧ ಎರಡು ರನ್‌ಗಳ ರೋಚಕ ಜಯ ಸಾಧಿಸಿದೆ.
ಸನ್‌ರೈಸರ್ಸ್ ಹೈದರಾಬಾದ್ ತಂಡ
ಸನ್‌ರೈಸರ್ಸ್ ಹೈದರಾಬಾದ್ ತಂಡ

ಮುಲ್ಲನ್‌ಪುರ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್) 2024 ನೇ ಆವೃತ್ತಿಯ ಮಂಗಳವಾರ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್) ತಂಡವು ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ವಿರುದ್ಧ ಎರಡು ರನ್‌ಗಳ ರೋಚಕ ಜಯ ಸಾಧಿಸಿದೆ.

ಮುಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಎಸ್‌ಆರ್‌ಎಚ್ ನೀಡಿದ 183 ರನ್‌ಗಳ ಗುರಿ ಬೆನ್ನತ್ತಿದ ಪಂಜಾಬ್ ತಂಡವು ಶಶಾಂಕ್ ಸಿಂಗ್ 25 ಎಸೆತಗಳಲ್ಲಿ ಔಟಾಗದೆ 46 ರನ್ ಗಳಿಸುವುದರೊಂದಿಗೆ 6 ವಿಕೆಟ್ ನಷ್ಟಕ್ಕೆ 180 ರನ್ ಗಳಿಸಲಷ್ಟೇ ಶಕ್ತವಾಯಿತು.

ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದಾರಾಬಾದ್ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 182 ರನ್ ಕಲೆಹಾಕಿತು.

ಪಂದ್ಯ ಗೆದ್ದ ನಂತರ ಸಂಭ್ರಮಾಚರಣೆಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ
ಪಂದ್ಯ ಗೆದ್ದ ನಂತರ ಸಂಭ್ರಮಾಚರಣೆಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ

ಸನ್‌ರೈಸರ್ಸ್ ಹೈದಾರಾಬಾದ್ ಪರ ಅಶುತೋಷ್ ಶರ್ಮಾ 15 ಎಸೆತಗಳಲ್ಲಿ 33 ರನ್ ಗಳಿಸಿ ಔಟಾಗದೆ ಉಳಿದರು, ಸ್ಯಾಮ್ ಕರಣ್ ಮತ್ತು ಸಿಕಂದರ್ ರಾಜಾ ಕ್ರಮವಾಗಿ 29 ಮತ್ತು 28 ರನ್ ಗಳಿಸಿದರು. ಎಸ್‌ಆರ್‌ಎಚ್ ಪರ ಭುವನೇಶ್ವರ್ ಕುಮಾರ್ 32 ರನ್‌ ನೀಡಿ ಎರಡು ವಿಕೆಟ್ ಪಡೆದು ಯಶಸ್ವಿ ಬೌಲರ್ ಎನಿಸಿಕೊಂಡರು.

ಪಂಜಾಬ್ ಪರವಾಗಿ ಅರ್ಷದೀಪ್ ಸಿಂಗ್ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದರು. 4 ಓವರ್‌ಗಳಲ್ಲಿ 29 ರನ್ ನೀಡಿ ಪ್ರಮುಖ 4 ವಿಕೆಟ್ ಪಡೆದರು. ಸ್ಯಾಮ್ ಕರನ್ ಮತ್ತು ಹರ್ಷಲ್ ಪಟೇಲ್ ತಲಾ ಎರಡು ವಿಕೆಟ್ ಪಡೆದರು. ಕಗಿಸೊ ರಬಡ 1 ವಿಕೆಟ್ ಪಡೆದರು. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡವು ಸನ್ ರೈಸರ್ಸ್ ಹೈದರಾಬಾದ್ ಅನ್ನು 9 ವಿಕೆಟ್‌ ನಷ್ಟಕ್ಕೆ 182 ಕ್ಕೆ ನಿರ್ಬಂಧಿಸಲು ಸಹಾಯ ಮಾಡಿದರು.

ಸಂಕ್ಷಿಪ್ತ ಅಂಕಗಳು

ಸನ್‌ರೈಸರ್ಸ್ ಹೈದರಾಬಾದ್: 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 182 ರನ್ (ನಿತೀಶ್ ಕುಮಾರ್ ರೆಡ್ಡಿ 64; ಅರ್ಷದೀಪ್ ಸಿಂಗ್ 4/29, ಹರ್ಷಲ್ ಪಟೇಲ್ 2/30, ಸ್ಯಾಮ್ ಕರನ್ 2/41).

ಪಂಜಾಬ್ ಕಿಂಗ್ಸ್: 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 180 (ಶಶಾಂಕ್ ಸಿಂಗ್ ಔಟಾಗದೆ 46; ಭುವನೇಶ್ವರ್ ಕುಮಾರ್ 2/32).

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com