RCB vs MI: ಮುಂಬೈ ಇಂಡಿಯನ್ಸ್ ತಂಡಕ್ಕೆ ಆರ್‌ಸಿಬಿ ಸವಾಲು, ಬೆಂಗಳೂರು ತಂಡದಲ್ಲಿ ಬದಲಾವಣೆ?

ಗುರುವಾರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ನೇ ಆವೃತ್ತಿಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಮುಂಬೈ ಇಂಡಿಯನ್ಸ್ (ಎಂಐ) ತಂಡದೊಂದಿಗೆ ಸೆಣಸಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ

ಮುಂಬೈ: ಗುರುವಾರ ಇಲ್ಲಿನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ನೇ ಆವೃತ್ತಿಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಮುಂಬೈ ಇಂಡಿಯನ್ಸ್ (ಎಂಐ) ತಂಡದೊಂದಿಗೆ ಸೆಣಸಲಿದೆ.

ಆರ್‌ಸಿಬಿ ಸದ್ಯ ಆಡಿರುವ ಐದು ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಇತ್ತ ಮುಂಬೈ ಇಂಡಿಯನ್ಸ್ ಆಡಿರುವ ನಾಲ್ಕು ಪಂದ್ಯಗಳಲ್ಲಿ 1ರಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಆರ್‌ಸಿಬಿ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದ್ದರೆ, ಎಂಐ ತಂಡ 8ನೇ ಸ್ಥಾನ ಪಡೆದಿವೆ. ಉಭಯ ತಂಡಗಳಿಗೂ ಈ ಪಂದ್ಯವನ್ನು ಗೆಲ್ಲಲೇಬೇಕು ಎನ್ನುವ ಅನಿವಾರ್ಯತೆ ಇದೆ.

ಈ ಆವೃತ್ತಿಯಲ್ಲಿ ಆರ್‌ಸಿಬಿ ಅಷ್ಟೇನು ಉತ್ತಮ ಪ್ರದರ್ಶನ ನೀಡಿಲ್ಲ. ಐದು ಪಂದ್ಯಗಳನ್ನಾಡಿದ್ದರೂ ತಂಡದಲ್ಲಿ ಯಾವುದೇ ಬದಲಾವಣೆ ಮಾಡದಿರುವ ಆರ್‌ಸಿಬಿ ಮ್ಯಾನೇಜ್ಮೆಂಟ್ ವಿರುದ್ದ ಅಭಿಮಾನಿಗಳು ಗರಂ ಆಗಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ
ಮುಂದಿನ ಪಂದ್ಯ ಗೆಲ್ಬೇಕು ಅಂದ್ರೆ RCB ಪ್ಲೇಯಿಂಗ್ XI ನಿಂದ ಇವರನ್ನು ಕೈಬಿಡಿ; ಮಾಜಿ ಆಟಗಾರನ ಸಲಹೆ

ಆರ್‌ಸಿಬಿ ತಂಡದಲ್ಲಿ ಬದಲಾವಣೆ ಅಗತ್ಯ

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಪ್ಲೇಯಿಂಗ್ ಇಲೆವೆನ್‌ನಲ್ಲಿ ಬದಲಾವಣೆ ಮಾಡದಿದ್ದರೆ ಗೆಲ್ಲುವು ಕಷ್ಟಸಾಧ್ಯ. ಪ್ಲೇಯಿಂಗ್ ಇಲೆವೆನ್ ಆಯ್ಕೆಯಲ್ಲೇ ಆರ್‌ಸಿಬಿ ಎಡವುತ್ತಿರುವುದು ತಂಡದ ಸೋಲಿಗೆ ಪ್ರಮುಖ ಕಾರಣವಾಗಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

ಮಹಿಪಾಲ್ ಲೊಮ್ರೋರ್
ಮಹಿಪಾಲ್ ಲೊಮ್ರೋರ್

ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಮಹಿಪಾಲ್ ಲೊಮ್ರೋರ್ ಕೈಬಿಟ್ಟ ಬಳಿಕ, ಫಾರ್ಮ್‌ನಲ್ಲಿದ್ದ ದಿನೇಶ್ ಕಾರ್ತಿಕ್ ಅವರನ್ನು ಬ್ಯಾಟಿಂಗ್‌ಗೆ ಕಳಿಸದೇ ಸೋಲು ಅನುಭವಿಸಿತು. ಕೆಕೆಆರ್ ವಿರುದ್ಧ ಅತ್ಯುತ್ತಮ ಪ್ರದರ್ಶನ ನೀಡಿದರೂ ವಿಜಯ್‌ ಕುಮಾರ್ ವೈಶಾಖ್‌ಗೆ ಮತ್ತೆ ಅವಕಾಶ ಸಿಗಲೇ ಇಲ್ಲ.

ಆರ್‌ಸಿಬಿ ವಿಲ್ ಜ್ಯಾಕ್ಸ್ ಅವರನ್ನು ಕಣಕ್ಕಿಳಿಸಬೇಕು ಎಂದು ಮಾಜಿ ಆಟಗಾರರಷ್ಟೇ ಅಲ್ಲದೆ ಕ್ರಿಕೆಟ್ ಪಂಡಿತರು ಕೂಡ ಒತ್ತಾಯಿಸುತ್ತಿದ್ದಾರೆ. ಮುಂಬೈ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಸ್ಫೋಟಕ ಬ್ಯಾಟರ್ ಅವರನ್ನು ಕಣಕ್ಕಿಳಿಸಬೇಕು ಎನ್ನುವ ಒತ್ತಾಯ ಕೇಳಿಬರುತ್ತಿದೆ.

ವಿಲ್ ಜ್ಯಾಕ್ಸ್
ವಿಲ್ ಜ್ಯಾಕ್ಸ್

ಈ ಆವೃತ್ತಿಯಲ್ಲಿ ಆರ್‌ಸಿಬಿಯ ವಿರಾಟ್ ಕೊಹ್ಲಿ ಬಿಟ್ಟರೆ ಬೇರೆ ಯಾವುದೇ ಬ್ಯಾಟರ್ ಉತ್ತಮ ಪ್ರದರ್ಶನ ನೀಡಿಲ್ಲ. 146.29 ಸ್ಟ್ರೈಕ್ ರೇಟ್‌ನಲ್ಲಿ ಒಂದು ಶತಕ ಮತ್ತು ಎರಡು ಅರ್ಧಶತಕಗಳೊಂದಿಗೆ 316 ರನ್ ಗಳಿಸಿರುವ ಕೊಹ್ಲಿ ಇದೀಗ ಆರ್‌ಸಿಬಿಯ ಏಕೈಕ ಭರವಸೆಯಾಗಿದ್ದಾರೆ. ಈ ಆವೃತ್ತಿಯಲ್ಲಿ ನಾಯಕ ಫಾಫ್ ಡು ಪ್ಲೆಸಿಸ್ (109 ರನ್), ಗ್ಲೆನ್ ಮ್ಯಾಕ್ಸ್‌ವೆಲ್ (32) ಮತ್ತು ಕ್ಯಾಮರೂನ್ ಗ್ರೀನ್ (68) ಸೇರಿದಂತೆ ಆರ್‌ಸಿಬಿಯ ಸಾಗರೋತ್ತರ ಬ್ಯಾಟ್ಸ್‌ಮನ್‌ಗಳು ಈ ಪಂದ್ಯದಿಂದ ಫಾರ್ಮ್ ಕಂಡುಕೊಳ್ಳುವುದು ಅನಿವಾರ್ಯವಾಗಿದೆ.

ಗೆಲುವು ಅನಿವಾರ್ಯ

ಉಭಯ ತಂಡಗಳು ಇದುವರೆಗೆ 32 ಪಂದ್ಯಗಳನ್ನು ಆಡಿದ್ದು, ಐದು ಬಾರಿ ಚಾಂಪಿಯನ್‌ ಆಗಿರುವ ಮುಂಬೈ ಇಂಡಿಯನ್ಸ್ ತಂಡವೇ ಆರ್‌ಸಿಬಿ ವಿರುದ್ಧ ಮೇಲುಗೈ ಸಾಧಿಸಿದೆ. ಎಂಐ ತಂಡವು RCB ವಿರುದ್ಧ 18 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಆರ್‌ಸಿಬಿ 14 ಪಂದ್ಯಗಳಲ್ಲಿ ಗೆಲುವು ಕಂಡಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ
IPL 2024: RCB ವೈಫಲ್ಯಕ್ಕೆ ವಿರಾಟ್ ಕೊಹ್ಲಿ ಕಾರಣ; ಮಾಜಿ ಕ್ರಿಕೆಟಿಗನ ಗಂಭೀರ ಆರೋಪ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ

ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್, ವಿಜಯ್ ಕುಮಾರ್ ವೈಶಾಕ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೂನ್ ಗ್ರೀನ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರ್ರಾನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com