RR vs GT: ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್‌ಗೆ 12 ಲಕ್ಷ ರೂ. ದಂಡ!

ಜೈಪುರದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ 2024ನೇ ಆವೃತ್ತಿಯ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್‌ಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.
ಸಂಜು ಸ್ಯಾಮ್ಸನ್
ಸಂಜು ಸ್ಯಾಮ್ಸನ್

ಜೈಪುರ: ಇಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ 2024ನೇ ಆವೃತ್ತಿಯ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್‌ಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.

ಬುಧವಾರ ನಡೆದ ರೋಚಕ ಪಂದ್ಯದಲ್ಲಿ ಮೂರು ವಿಕೆಟ್‌ಗಳ ಅಂತರದಿಂದ ಶುಭಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆಲುವು ಸಾಧಿಸಿದೆ. ಆಡಿರುವ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆಲುವು ಸಾಧಿಸುವ ಮೂಲಕ ಜಿಟಿ ಅಂಕಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿದೆ.

'ಏಪ್ರಿಲ್ 10 ರಂದು ಜೈಪುರದ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ರ ಪಂದ್ಯದಲ್ಲಿ ತಮ್ಮ ತಂಡವು ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಅವರಿಗೆ ದಂಡ ವಿಧಿಸಲಾಗಿದೆ' ಎಂದು ಐಪಿಎಲ್ ಹೇಳಿಕೆ ತಿಳಿಸಿದೆ.

ಸಂಜು ಸ್ಯಾಮ್ಸನ್
IPL 2024: ರಾಜಸ್ಥಾನ ವಿರುದ್ಧ ಗುಜರಾತ್ ಗೆ 3 ವಿಕೆಟ್​ಗಳ ರೋಚಕ ಗೆಲುವು

'ಇದು ಐಪಿಎಲ್‌ನ ನೀತಿ ಸಂಹಿತೆಯಡಿಯಲ್ಲಿ ಕನಿಷ್ಠ ಓವರ್‌ ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ ಈ ಋತುವಿನಲ್ಲಿ ಅವರ ತಂಡದ ಮೊದಲ ಅಪರಾಧವಾಗಿರುವುದರಿಂದ, ಸ್ಯಾಮ್ಸನ್‌ಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ" ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.

ರಾಜಸ್ಥಾನ್ ರಾಯಲ್ಸ್
ರಾಜಸ್ಥಾನ್ ರಾಯಲ್ಸ್

'ಇದು ಐಪಿಎಲ್‌ನ ನೀತಿ ಸಂಹಿತೆ ಅಡಿಯಲ್ಲಿ ಈ ಆವೃತ್ತಿಯ ಮೊದಲ ಅಪರಾಧವಾಗಿದ್ದು, ಸ್ಲೋ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕೆ ಸಂಬಂಧಿಸಿದಂತೆ ಸ್ಯಾಮ್ಸನ್‌ಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ' ಎಂದಿದೆ.

ಸಂಜು ಸ್ಯಾಮ್ಸನ್
GT vs CSK: ಗುಜರಾತ್ ಟೈಟಾನ್ಸ್ ನಾಯಕ ಶುಭಮನ್ ಗಿಲ್ ಗೆ 12 ಲಕ್ಷ ರೂ. ದಂಡ!

ಸ್ಯಾಮ್ಸನ್ 38 ಎಸೆತಗಳಲ್ಲಿ ಅಜೇಯ 68 ರನ್ ಗಳಿಸಿದರು ಮತ್ತು ರಿಯಾನ್ ಪರಾಗ್ (78) ತಂಡಕ್ಕೆ ನೆರವಾದರು. ರಾಜಸ್ಥಾನ್ ರಾಯಲ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 196 ರನ್ ಗಳಿಸಿತು.

ಗುಜರಾತ್ ಟೈಟಾನ್ಸ್ ನಾಯಕ ಗಿಲ್‌ 72 ರನ್ ಗಳಿಸಿದರೆ, ಅಫ್ಘಾನಿಸ್ತಾನದ ಸ್ಪಿನ್ನರ್ ರಶೀದ್ ಖಾನ್ 11 ಎಸೆತಗಳಲ್ಲಿ 24 ರನ್ ಗಳಿಸಿದ್ದು ತಂಡವನ್ನು ಗೆಲುವಿನ ದಡ ಸೇರಿಸಲು ನೆರವಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com