IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ಗೆ ಮೂರು ವಿಕೆಟ್ ಭರ್ಜರಿ ಜಯ

ಮಹಾರಾಜ ಯಾದವಿಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಶನಿವಾರ ನಡೆದ ಐಪಿಎಲ್ 2024ರ ಆವೃತ್ತಿಯ 27ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ಗೆ ಮೂರು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ರಾಜಸ್ಥಾನ ರಾಯಲ್ಸ್ ಆಟಗಾರರ ಸಂಭ್ರಮ
ರಾಜಸ್ಥಾನ ರಾಯಲ್ಸ್ ಆಟಗಾರರ ಸಂಭ್ರಮ

ಚಂಡೀಘಡ: ಮಹಾರಾಜ ಯಾದವಿಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಶನಿವಾರ ನಡೆದ ಐಪಿಎಲ್ 2024ರ ಆವೃತ್ತಿಯ 27ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ಗೆ ಮೂರು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 147 ರನ್ ಗಳಿಸಲಷ್ಟೇ ಶಕ್ತವಾಯಿತು. ಅಶುತೋಷ್ ಶರ್ಮಾ 31, ಜಿತೇಶ್ ಶರ್ಮಾ, 29, ಲಿವಿಂಗ್ ಸ್ಟೊನ್ 21 ರನ್ ಗಳಿಸದದ್ದು ಹೊರತುಪಡಿಸಿದರೆ ಉಳಿದ ಯಾವುದೇ ಆಟಗಾರರು ಹೆಚ್ಚು ಹೊತ್ತು ಕ್ರೀಸ್ ನಲ್ಲಿ ನಿಲ್ಲಲಿಲ್ಲ. ಹೀಗಾಗಿ 20 ಓವರ್ ಗಳಲ್ಲಿ 147 ರನ್ ಗಳಿಸಿ, ಪಂಜಾಬ್ ಕಿಂಗ್ಸ್ ಗೆಲ್ಲಲು 148 ರನ್ ಗಳ ಗುರಿ ನೀಡಿತು.

ರಾಜಸ್ಥಾನ ರಾಯಲ್ಸ್ ಆಟಗಾರರ ಸಂಭ್ರಮ
IPL 2024: ಗಾಯವೋ? ಕಳಪೆ ಪ್ರದರ್ಶನವೋ? ಅಂತೂ RCB ತಂಡದಿಂದ ಗ್ಲೇನ್ ಮ್ಯಾಕ್ಸ್‌ವೆಲ್ ಔಟ್?

ಈ ಗುರಿ ಬೆನ್ನಟ್ಟಿದ್ದ ರಾಜಸ್ಥಾನ ರಾಯಲ್ಸ್ ತಂಡ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 39, ತನುಶ್ ಕೊಟಿಯಾನ್ 24, ನಾಯಕ ಸಂಜು ಸ್ಯಾಮ್ಸನ್ 18, ರಿಯಾನ್ ಪರಾಗ್ 23, ಶಿಮ್ರಾನ್ ಹೆಟ್ಮಾಯರ್ ಅಜೇಯ 27 ರನ್ ಗಳಿಸುವುದರೊಂದಿಗೆ 19.5 ಓವರ್ ಗಳಲ್ಲಿ 7ವಿಕೆಟ್ ನಷ್ಟಕ್ಕೆ 152 ರನ್ ಗಳಿಸುವುದರೊಂದಿಗೆ ಗೆಲುವು ಸಾಧಿಸಿತು. ಶಿಮ್ರಾನ್ ಹೆಟ್ಮೆಯಾರ್ ಫ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿಗೆ ಭಾಜನರಾದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com