ರೋಹಿತ್ ಶರ್ಮಾ
ರೋಹಿತ್ ಶರ್ಮಾ

ಐಪಿಎಲ್ 2024: ರೋಹಿತ್ ಶರ್ಮಾ ಶತಕ ವ್ಯರ್ಥ, 20 ರನ್ ಗಳಿಂದ CSK ಗೆಲುವು

ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ನಡೆದ ಐಪಿಎಲ್ 2024ರ ಆವೃತ್ತಿಯ 29ನೇ ಪಂದ್ಯದಲ್ಲಿ ತವರಿನಲ್ಲಿಯೇ ಮುಂಬೈ ಇಂಡಿಯನ್ಸ್ ಗೆ ಮುಖಭಂಗವಾಗಿದ್ದು, ಚೆನ್ನೈ ಸೂಪರ್ ಕಿಂಗ್ಸ್ 20 ರನ್ ಗಳ ಅಂತರದಿಂದ ಗೆಲುವು ಸಾಧಿಸಿದೆ.
Published on

ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ನಡೆದ ಐಪಿಎಲ್ 2024ರ ಆವೃತ್ತಿಯ 29ನೇ ಪಂದ್ಯದಲ್ಲಿ ತವರಿನಲ್ಲಿಯೇ ಮುಂಬೈ ಇಂಡಿಯನ್ಸ್ ಗೆ ಮುಖಭಂಗವಾಗಿದ್ದು, ಚೆನ್ನೈ ಸೂಪರ್ ಕಿಂಗ್ಸ್ 20 ರನ್ ಗಳ ಅಂತರದಿಂದ ಗೆಲುವು ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 206 ರನ್ ಕಲೆಹಾಕಿತು. ಆರಂಭಿಕ ಆಟಗಾರ ರಚಿನ್ ರವೀಂದ್ರ 21, ನಾಯಕ ಋತುರಾಜ್ ಗಾಯಕ್ವಾಡ್ 69, ಶಿವಂ ದುಬೆ ಅಜೇಯ 66, ಮಿಚ್ಚೆಲ್ 17,ಎಂಎಸ್ ಧೋನಿ ಅಜೇಯ 20 ರನ್ ಗಳಿಸುವುದರೊಂದಿಗೆ ಮುಂಬೈ ಗೆಲ್ಲಲು 207 ರನ್ ಗಳ ಗುರಿ ನೀಡಿತು.

ಸಿಎಸ್ ಕೆ ನೀಡಿದ 207 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಮುಂಬೈ ಇಂಡಿಯನ್ಸ್ ಪರ ಆರಂಭಿಕ ಆಟಗಾರ ರೋಹಿತ್ ಶರ್ಮಾ 5 ಸಿಕ್ಸರ್, 11 ಬೌಂಡರಿಗಳೊಂದಿಗೆ ಅಜೇಯ 105 ರನ್ ಗಳಿಸಿದರು. ಆದರೆ ಉಳಿದ ಯಾವುದೇ ಆಟಗಾರರು ಕ್ರೀಸ್ ನಲ್ಲಿ ಹೆಚ್ಚು ಹೊತ್ತು ನಿಲ್ಲಲಿಲ್ಲ. ಇಶಾನ್ ಕಿಶಾನ್ 23, ಸೂರ್ಯ ಕುಮಾರ್ ಯಾದವ್ ಶೂನ್ಯಕ್ಕೆ ಔಟಾದರು.

ರೋಹಿತ್ ಶರ್ಮಾ
IPL 2024: ಮೊದಲ ಬಾರಿಗೆ ಲಕ್ನೋ ಮಣಿಸಿದ KKR, ಸಾಲ್ಟ್ 89 ರನ್ ಭರ್ಜರಿ ಬ್ಯಾಟಿಂಗ್!

ತಿಲಕ್ ವರ್ಮಾ 31, ಹಾರ್ದಿಕ್ ಪಾಂಡ್ಯ 2, ಥೀಮ್ ಡೇವಿಡ್ 13, ಮೊಹಮ್ಮದ್ ನಬಿ 4 ರನ್ ಗಳಿಸುವುದರೊಂದಿಗೆ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರಿಂದಾಗಿ ಚೆನ್ನೈ ಸೂಪರ್ ಕಿಂಗ್ಸ್ 20 ರನ್ ಗಳಿಂದ ಗೆಲುವಿನ ನಗೆ ಬೀರಿತು. ಸಿಎಸ್ ಕೆ ಪರ 4 ವಿಕೆಟ್ ಪಡೆದ ಮತೀಶಾ ಪತಿರಾಣ ಫ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿಗೆ ಭಾಜನರಾದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com