RCB vs SRH: ಆರ್‌ಸಿಬಿ ಬೌಲಿಂಗ್ ಪಡೆಗೆ ಸವಾಲು; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಗೆಲ್ಲಲೇಬೇಕಾದ ಅನಿವಾರ್ಯ

ಐಪಿಎಲ್ 2024ರ ಆವೃತ್ತಿಯಲ್ಲಿ ಆರ್‌ಸಿಬಿ ತಂಡ ಅತ್ಯುತ್ತಮ ಪ್ರದರ್ಶನ ನೀಡುವಲ್ಲಿ ಎಡವಿದ್ದು, ಆಡಿರುವ 6 ಪಂದ್ಯಗಳಲ್ಲಿ ಒಂದು ಪಂದ್ಯ ಮಾತ್ರ ಗೆದ್ದಿದೆ ಮತ್ತು ಐದು ಪಂದ್ಯಗಳಲ್ಲಿ ಸೋಲು ಕಂಡಿದೆ. ಅಭಿಮಾನಿಗಳಲ್ಲಿ ತೀವ್ರ ನಿರಾಸೆ ಮೂಡಿಸಿರುವ ಆರ್‌ಸಿಬಿಗೆ ಮುಂದಿನ ಪಂದ್ಯವನ್ನು ಗೆಲ್ಲಲೇಬೇಕು ಎನ್ನುವ ಅನಿವಾರ್ಯ ಎದುರಾಗಿದೆ.
ಫಾಫ್ ಡು ಪ್ಲೆಸಿಸ್ - ಪ್ಯಾಟ್ ಕಮ್ಮಿನ್ಸ್
ಫಾಫ್ ಡು ಪ್ಲೆಸಿಸ್ - ಪ್ಯಾಟ್ ಕಮ್ಮಿನ್ಸ್

ಬೆಂಗಳೂರು: ಐಪಿಎಲ್ 2024ರ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಅತ್ಯುತ್ತಮ ಪ್ರದರ್ಶನ ನೀಡುವಲ್ಲಿ ಎಡವಿದ್ದು, ಆಡಿರುವ 6 ಪಂದ್ಯಗಳಲ್ಲಿ ಒಂದು ಪಂದ್ಯ ಮಾತ್ರ ಗೆದ್ದಿದೆ ಮತ್ತು ಐದು ಪಂದ್ಯಗಳಲ್ಲಿ ಸೋಲು ಕಂಡಿದೆ. ಅಭಿಮಾನಿಗಳಲ್ಲಿ ತೀವ್ರ ನಿರಾಸೆ ಮೂಡಿಸಿರುವ ಆರ್‌ಸಿಬಿಗೆ ಮುಂದಿನ ಪಂದ್ಯವನ್ನು ಗೆಲ್ಲಲೇಬೇಕು ಎನ್ನುವ ಅನಿವಾರ್ಯ ಎದುರಾಗಿದೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ (ಏ.15) ನಡೆಯಲಿರುವ ಪಂದ್ಯದಲ್ಲಿ ಆರ್‌ಸಿಬಿ ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್) ತಂಡದ ವಿರುದ್ಧ ಸೆಣಸಲಿದೆ. ಎಸ್‌ಆರ್‌ಎಚ್ ಸದ್ಯ ಐದು ಪಂದ್ಯಗಳನ್ನು ಆಡಿದ್ದು, ಮೂರರಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಆರ್‌ಸಿಬಿ ತಂಡ 10 ನೇ ಸ್ಥಾನಕ್ಕೆ ಕುಸಿದಿದೆ.

ಬೌಲಿಂಗ್ ವಿಭಾಗ ಬಲಿಷ್ಠವಾಗಬೇಕಿದೆ

ಸದ್ಯದ ಮಟ್ಟಿಗೆ ಆರ್‌ಸಿಬಿಯ ಬ್ಯಾಟಿಂಗ್ ವಿಭಾಗ ಬಲಿಷ್ಠವಾಗಿಯೇ ಇದೆ. ಆದರೆ, ಬೌಲಿಂಗ್ ವಿಭಾಗದಲ್ಲಿ ಮಾತ್ರ ಸಾಕಷ್ಟು ಸುಧಾರಣೆ ಮಾಡಬೇಕಿದೆ. ಆರ್‌ಸಿಬಿ ಬೌಲರ್‌ಗಳು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಹೊಸ ರೂಪದಲ್ಲಿಯೇ ಕಾಣಿಸಿಕೊಳ್ಳುವ ಅಗತ್ಯವಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರತಿಷ್ಠಿತ ಆಟಗಾರರು ಮತ್ತು ಉನ್ನತ ಶ್ರೇಣಿಯ ಪ್ರಮುಖ ತರಬೇತುದಾರರನ್ನು ಹೊಂದಿದೆ. ಆದರೆ, ಇದ್ಯಾವುದೂ ತಂಡಕ್ಕೆ ಆಸರೆಯಾಗಿಲ್ಲ.

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಮ್ಯಾಕ್ಸ್‌ವೆಲ್ ಬೆರಳಿಗೆ ಗಾಯವಾಗಿದ್ದು, ಸನ್‌ರೈಸಸ್‌ ಹೈದರಾಬಾದ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದಾರೆ. ಮ್ಯಾಕ್ಸ್‌ವೆಲ್ ಬದಲಿಗೆ ಲಾಕಿ ಫರ್ಗ್ಯುಸನ್ ಆಡಿದರೆ, ಬೌಲಿಂಗ್ ವಿಭಾಗಕ್ಕೆ ಬಲ ಬರಲಿದೆ. ಈ ಆವೃತ್ತಿಯಲ್ಲಿ ವಿಫಲವಾಗಿರುವ ಮೊಹಮ್ಮದ್ ಸಿರಾಜ್ ಅವರಿಗೂ ವಿಶ್ರಾಂತಿ ನೀಡಿ, ಯಶ್ ದಯಾಳ್ ಅವರನ್ನು ಆಡಿಸಿದರೆ ಚಿನ್ನಸ್ವಾಮಿ ಅಂಗಳದಲ್ಲಿ ಆರ್‌ಸಿಬಿ ಗೆಲ್ಲುವ ಸಾಧ್ಯತೆಯಿದೆ ಎನ್ನಲಾಗಿದೆ.

ಫಾಫ್ ಡು ಪ್ಲೆಸಿಸ್ - ಪ್ಯಾಟ್ ಕಮ್ಮಿನ್ಸ್
IPL 2024: ಗಾಯವೋ? ಕಳಪೆ ಪ್ರದರ್ಶನವೋ? ಅಂತೂ RCB ತಂಡದಿಂದ ಗ್ಲೇನ್ ಮ್ಯಾಕ್ಸ್‌ವೆಲ್ ಔಟ್?

ಈ ಐಪಿಎಲ್‌ ಆವೃತ್ತಿಯಲ್ಲಿ ಬಹುತೇಕ ಬೌಲರ್‌ಗಳು ಆಗಾಗ್ಗೆ ನಕಲ್ ಬಾಲ್‌ಗಳು, ಸ್ಲೋ ಬೌನ್ಸರ್‌ಗಳು ಮತ್ತು ಪೇಸ್-ಆಫ್ ಎಸೆತಗಳನ್ನು ಪ್ರಯೋಗಿಸುವ ಮೂಲಕ ಯಶಸ್ಸು ಕಾಣುತ್ತಿದ್ದಾರೆ. ಆದರೆ, ಆರ್‌ಸಿಬಿ ಬೌಲರ್‌ಗಳು ತಮ್ಮನ್ನು ಯಾವುದೇ ಬದಲಾವಣೆಗೆ ಒಡ್ಡಿಕೊಳ್ಳದಿರುವುದು ತಂಡದ ಸೋಲಿಗೆ ಪ್ರಮುಖ ಕಾರಣವಾಗಿದೆ. ಕಳೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಬೌಲಿಂಗ್ ಪಡೆ ಕಳಪೆ ಪ್ರದರ್ಶನ ನೀಡಿದೆ.

ಸನ್‌ರೈಸರ್ಸ್ ಹೈದರಾಬಾದ್ ತಂಡದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪಡೆಯೇ ಇದ್ದು, ಆರ್‌ಸಿಬಿ ಬೌಲಿಂಗ್ ಪಡೆ ಮೇಲೆ ತೀವ್ರ ಸವಾಲೊಡ್ಡಲಿದೆ. ಎಸ್‌ಆರ್‌ಎಚ್‌ನ ಬೌಲಿಂಗ್ ಪಡೆಯೂ ಉತ್ತಮವಾಗಿದ್ದು, ಆರ್‌ಸಿಬಿ ಬ್ಯಾಟರ್‌ಗಳಿಗೆ ಸವಾಲಾಗಿ ಪರಿಣಮಿಸುವ ಎಲ್ಲಾ ಸಾಧ್ಯತೆಯಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ

ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜ್ಯಾಕ್ಸ್, ಮಹಿಪಾಲ್ ಲೊಮೊರೊರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್, ವಿಜಯಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೂನ್ ಗ್ರೀನ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾನ್.

ಸನ್‌ರೈಸರ್ಸ್ ಹೈದರಾಬಾದ್ ತಂಡ

ಪ್ಯಾಟ್ ಕಮ್ಮಿನ್ಸ್ (ನಾಯಕ), ಅಬ್ದುಲ್ ಸಮದ್, ಅಭಿಷೇಕ್ ಶರ್ಮಾ, ಐಡೆನ್ ಮಾರ್ಕ್ರಾಮ್, ಮಾರ್ಕೊ ಜಾನ್ಸೆನ್, ರಾಹುಲ್ ತ್ರಿಪಾಠಿ, ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ಸನ್ವಿರ್ ಸಿಂಗ್, ಹೆನ್ರಿಚ್ ಕ್ಲಾಸೆನ್, ಭುವನೇಶ್ವರ್ ಕುಮಾರ್, ಮಯಾಂಕ್ ಅಗರ್ವಾಲ್, ಟಿ.ನಟರಾಜನ್, ಅನ್ಮೋಲ್‌ಪ್ರೀತ್ ಸಿಂಗ್, ಮಯಾಂಕ್ ಮಾರ್ಕಂಡೆ, ಉಪೇಂದ್ರ ಸಿಂಗ್ ಯಾದವ್, ಉಮ್ರಾನ್ ಮಲಿಕ್, ನಿತೀಶ್ ಕುಮಾರ್ ರೆಡ್ಡಿ, ಫಜಲ್ಹಕ್ ಫಾರೂಕಿ, ಶಹಬಾಜ್ ಅಹ್ಮದ್, ಟ್ರಾವಿಸ್ ಹೆಡ್, ಜಯದೇವ್ ಉನದ್ಕತ್, ಆಕಾಶ್ ಸಿಂಗ್, ಝಾತವೇಧ್ ಸುಬ್ರಮಣ್ಯನ್.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com