IPL 2024: ಐಪಿಎಲ್‌ನಲ್ಲಿ ಈ ದಾಖಲೆ ಬರೆದ ಮೊದಲ ಭಾರತೀಯ ರೋಹಿತ್ ಶರ್ಮಾ!

ಟೀಂ ಇಂಡಿಯಾ ಮತ್ತು ಮುಂಬೈ ಇಂಡಿಯನ್ಸ್ (ಎಂಐ) ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ ಟಿ20 ಕ್ರಿಕೆಟ್‌ನಲ್ಲಿ ಅತಿಹೆಚ್ಚು ಸಿಕ್ಸರ್‌ಗಳನ್ನು ಸಿಡಿಸಿದ ಮೊದಲ ಭಾರತೀಯ ಎನಿಸಿಕೊಂಡಿದ್ದಾರೆ.
ರೋಹಿತ್ ಶರ್ಮಾ
ರೋಹಿತ್ ಶರ್ಮಾ

ಮುಂಬೈ: ಟೀಂ ಇಂಡಿಯಾ ಮತ್ತು ಮುಂಬೈ ಇಂಡಿಯನ್ಸ್ (ಎಂಐ) ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ ಟಿ20 ಕ್ರಿಕೆಟ್‌ನಲ್ಲಿ ಅತಿಹೆಚ್ಚು ಸಿಕ್ಸರ್‌ಗಳನ್ನು ಸಿಡಿಸಿದ ಮೊದಲ ಭಾರತೀಯ ಎನಿಸಿಕೊಂಡಿದ್ದಾರೆ.

ವಾಂಖೆಡೆ ಸ್ಟೇಡಿಯಂನಲ್ಲಿ ಭಾನುವಾರ (ಏ.14) ನಡೆದ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ರ ಪಂದ್ಯದಲ್ಲಿ 'ಹಿಟ್‌ಮ್ಯಾನ್' ಈ ಮೈಲಿಗಲ್ಲು ಸಾಧಿಸಿದ್ದಾರೆ.

63 ಎಸೆತಗಳಲ್ಲಿ 11 ಬೌಂಡರಿ ಮತ್ತು ಐದು ಸಿಕ್ಸರ್‌ ಸಿಡಿಸಿದ ರೋಹಿತ್ ಶರ್ಮಾ, 105* ರನ್ ಗಳಿಸುವ ಮೂಲಕ ಪಂದ್ಯದಲ್ಲಿ ಏಕಾಂಗಿ ಹೋರಾಟ ನೀಡಿದರು. ಒಂದರ ಹಿಂದೆ ಒಂದು ವಿಕೆಟ್ ಪತವಾಗುತ್ತಿದ್ದರೂ ಮಾಜಿ ಮುಂಬೈ ಇಂಡಿಯನ್ಸ್ ನಾಯಕ 166.67 ಸ್ಟ್ರೈಕ್ ರೇಟ್‌ನಲ್ಲಿ ಶತಕ ಸಿಡಿಸಿ ಮಿಂಚಿದರು.

ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ವೆಸ್ಟ್ ಇಂಡೀಸ್ ದಂತಕಥೆ ಕ್ರಿಸ್ ಗೇಲ್ (1,056 ಸಿಕ್ಸರ್), ನಂತರದ ಸ್ಥಾನದಲ್ಲಿ ವೆಸ್ಟ್ ಇಂಡೀಸ್ ಆಲ್ ರೌಂಡರ್ ಕೀರಾನ್ ಪೊಲಾರ್ಡ್ (860 ಸಿಕ್ಸರ್), ಆಂಡ್ರೆ ರಸೆಲ್ (678 ಸಿಕ್ಸರ್) ಮತ್ತು ಕಾಲಿನ್ ಮುನ್ರೊ (548 ಸಿಕ್ಸರ್) ಇದ್ದಾರೆ.

ಈ ಸಿಕ್ಸರ್‌ಗಳೊಂದಿಗೆ ರೋಹಿತ್ ಶರ್ಮಾ ಅವರ ಬ್ಯಾಟ್‌ನಿಂದ ಈವರೆಗೆ ಬಂದಿರುವ ಸಿಕ್ಸರ್‌ಗಳ ಸಂಖ್ಯೆ 502ಕ್ಕೆ ಏರಿದೆ. ಈ ಮೂಲಕ ಅತಿಹೆಚ್ಚು ಸಿಕ್ಸರ್ ಸಿಡಿಸಿದ ಮೊದಲ ಭಾರತೀಯ ಎಂಬ ಖ್ಯಾತಿಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ.

ಬ್ಯಾಟಿಂಗ್ ವೇಳೆ ರೋಹಿತ್ ಶರ್ಮಾ
ಬ್ಯಾಟಿಂಗ್ ವೇಳೆ ರೋಹಿತ್ ಶರ್ಮಾ

ಈ ಐಪಿಎಲ್ ಆವೃತ್ತಿಯಲ್ಲಿ ಆರು ಪಂದ್ಯಗಳಲ್ಲಿ, ರೋಹಿತ್ ಶರ್ಮಾ 52.20ರ ಸರಾಸರಿಯಲ್ಲಿ 261 ರನ್ ಸಿಡಿಸಿದ್ದು, 167 ಸ್ಟ್ರೈಕ್ ರೇಟ್‌ನೊಂದಿಗೆ ಶತಕ ಗಳಿಸಿದ್ದಾರೆ.

ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡವು ಬೌಲಿಂಗ್ ಮಾಡಲು ನಿರ್ಧರಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್‌ಕೆ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 206 ರನ್ ಕಲೆಹಾಕಿತು.

ರೋಹಿತ್ ಶರ್ಮಾ
ಐಪಿಎಲ್ 2024: ರೋಹಿತ್ ಶರ್ಮಾ ಶತಕ ವ್ಯರ್ಥ, 20 ರನ್ ಗಳಿಂದ CSK ಗೆಲುವು

207 ರನ್‌ಗಳ ಸವಾಲಿನ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡ ಉತ್ತಮ ಆರಂಭ ಪಡೆದರೂ, ಗೆಲುವು ಸಾಧ್ಯವಾಗಲಿಲ್ಲ. ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮುಂಬೈ ವಿರುದ್ಧ 20 ರನ್‌ಗಳ ಗೆಲುವು ಸಾಧಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com