IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಮುಂಬೈಗೆ 9 ರನ್ ಗೆಲುವು

ಮುಲ್ಲಾನ್ ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಗುರುವಾರ ರಾತ್ರಿ ನಡೆದ ಐಪಿಎಲ್ ಟೂರ್ನಿಯ 33ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 9 ರನ್ ಗಳಿಂದ ಪಂಜಾಬ್ ಕಿಂಗ್ಸ್ ನ್ನು ಮಣಿಸಿದೆ.
ಮುಂಬೈಇಂಡಿಯನ್ಸ್
ಮುಂಬೈಇಂಡಿಯನ್ಸ್

ಚಂಡೀಘಡ: ಮುಲ್ಲಾನ್ ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಗುರುವಾರ ರಾತ್ರಿ ನಡೆದ ಐಪಿಎಲ್ ಟೂರ್ನಿಯ 33ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 9 ರನ್ ಗಳಿಂದ ಪಂಜಾಬ್ ಕಿಂಗ್ಸ್ ನ್ನು ಮಣಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿತು. ಇಶಾನ್ ಕಿಶಾನ್ 8 ರನ್ ಗಳಿಸಿ ಬೇಗ ಔಟಾದರೆ, ರೋಹಿತ್ ಶರ್ಮಾ 36, ಸೂರ್ಯಕುಮಾರ್ ಯಾದವ್ 78, ತಿಲಕ್ ವರ್ಮಾ ಅಜೇಯ 34 ಹಾಗೂ ನಾಯಕ ಹಾರ್ದಿಕ್ ಪಾಂಡ್ಯ 10, ಥೀಮ್ ಡೇವಿಡ್ 14 ರನ್ ಗಳಿಸಿದರು.

ಮುಂಬೈಇಂಡಿಯನ್ಸ್
IPL 2024: ಆರು ವಿಕೆಟ್ ಗಳಿಂದ ಗುಜರಾತ್ ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್

ಮುಂಬೈ ಇಂಡಿಯನ್ಸ್ ನೀಡಿದ 193 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಪಂಜಾಬ್ ಕಿಂಗ್ಸ್ 19.1 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 183 ರನ್ ಗಳಿಸಲಷ್ಟೇ ಶಕ್ತವಾಯಿತು. ಪಂಜಾಬ್ ಪರ ಶಶಾಂಕ್ ಸಿಂಗ್ 41, ಅಶುತೋಷ್ ಶರ್ಮಾ, 61 ರನ್ ಗಳಿಸಿದ್ದು ಹೊರತುಪಡಿಸಿದರೆ ಬೇರೆ ಯಾವುದೇ ಆಟಗಾರರು ರನ್ ಕದಿಯುವಲ್ಲಿ ವಿಫಲರಾದರು. ಇದರಿಂದ ಮುಂಬೈ ಇಂಡಿಯನ್ಸ್ 9 ರನ್ ಗಳಿಂದ ಗೆಲುವಿನ ನಗೆ ಬೀರಿತು. ಮೂರು ವಿಕೆಟ್ ಪಡೆದು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಜಸ್ಪ್ರೀತ್ ಬೂಮ್ರಾ ಫ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿಗೆ ಭಾಜನರಾದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com