IPL 2024: ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್, ಪಂಜಾಬ್ ಕಿಂಗ್ಸ್ ನಾಯಕ ಸ್ಯಾಮ್ ಕರಣ್‌ಗೆ ದಂಡ

ಕೆಕೆಆರ್‌ ವಿರುದ್ಧ ನೆನ್ನೆ ನಡೆದ ಪಂದ್ಯದಲ್ಲಿ ಸೋಲು ಕಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದ್ದು, ಪಂಜಾಬ್ ಕಿಂಗ್ಸ್ ತಂಡದ ನಾಯಕ ಸ್ಯಾಮ್ ಕರಣ್ ಅವರಿಗೂ ಪಂದ್ಯ ಶುಲ್ಕದ ಶೇ 50ರಷ್ಟು ದಂಡ ವಿಧಿಸಲಾಗಿದೆ ಎಂದು ಐಪಿಎಲ್ ಸೋಮವಾರ ಪ್ರಕಟಿಸಿದೆ.
ಫಾಫ್ ಡು ಪ್ಲೆಸಿಸ್ - ಸ್ಯಾಮ್ ಕರಣ್‌
ಫಾಫ್ ಡು ಪ್ಲೆಸಿಸ್ - ಸ್ಯಾಮ್ ಕರಣ್‌

ನವದೆಹಲಿ: ಪ್ಲೇಆಫ್‌ನಿಂದ ಹೊರಬಿದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದ್ದು, ಪಂಜಾಬ್ ಕಿಂಗ್ಸ್ ತಂಡದ ನಾಯಕ ಸ್ಯಾಮ್ ಕರಣ್ ಅವರಿಗೂ ಪಂದ್ಯ ಶುಲ್ಕದ ಶೇ 50ರಷ್ಟು ದಂಡ ವಿಧಿಸಲಾಗಿದೆ ಎಂದು ಐಪಿಎಲ್ ಸೋಮವಾರ ಪ್ರಕಟಿಸಿದೆ.

ಭಾನುವಾರ ಈಡನ್ ಗಾರ್ಡನ್ಸ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಫಾಫ್ ಡು ಪ್ಲೆಸಿಸ್ ಅವರಿಗೆ ದಂಡ ವಿಧಿಸಲಾಗಿದೆ.

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಅಂಗಳದಲ್ಲಿ ಟಾಸ್ ಗೆದ್ದ ಆರ್‌ಸಿಬಿ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 222 ರನ್ ಕಲೆಹಾಕಿತು. 223 ರನ್‌ಗಳ ಬೃಹತ್ ಮೊತ್ತವನ್ನು ಬೆನ್ನತ್ತಿದ ಆರ್ ಸಿಬಿ ತಂಡದ ಆರಂಭ ಉತ್ತಮವಾಗಿರಲಿಲ್ಲ.

ಫಾಫ್ ಡು ಪ್ಲೆಸಿಸ್ - ಸ್ಯಾಮ್ ಕರಣ್‌
IPL 2024: KKR ವಿರುದ್ಧ RCBಗೆ 1 ರನ್ ನಿಂದ ರೋಚಕ ಸೋಲು, ಪ್ಲೇ ಆಫ್ ನಿಂದ ಹೊರಬಿದ್ದ ಆರ್ ಸಿಬಿ!

18 ರನ್ ಗಳಿಸಿ ವಿರಾಟ್ ಕೊಹ್ಲಿ ಔಟಾದರೆ, ನಾಯಕ ಫಾಫ್ ಡುಪ್ಲೆಸಿಸ್ 7 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಬಳಿಕ ಜೊತೆಯಾದ ವಿಲ್ ಜ್ಯಾಕ್ಸ್ ಮತ್ತು ರಜತ್ ಪಟಿದಾರ್ ಅದ್ಭುತ ಜೊತೆಯಾಟ ಆಡಿದರು. ವಿಲ್ ಜ್ಯಾಕ್ಸ್ 32 ಎಸೆತಗಳಲ್ಲಿ 55 ರನ್ ಗಳಿಸುವ ಮೂಲಕ ಐಪಿಎಲ್‌ನಲ್ಲಿ ತಮ್ಮ ಮೊದಲ ಅರ್ಧಶತಕ ಬಾರಿಸಿದರು. ರಜತ್ ಪಟಿದಾರ್ 23 ಎಸೆತಗಳಲ್ಲಿ 52 ರನ್ ಗಳಿಸಿದರು.

ಕೊನೆಯ ಓವರ್‌ನಲ್ಲಿ ಆರ್‌ಸಿಬಿ ಗೆಲುವಿಗೆ 21 ರನ್ ಬೇಕಿದ್ದಾಗ ಕರ್ಣ್ ಶರ್ಮಾ 3 ಸಿಕ್ಸರ್ ಸಿಡಿಸಿದರೂ, ತಂಡಕ್ಕೆ ಗೆಲುವು ಸಾಧ್ಯವಾಗಲಿಲ್ಲ. 20 ಓವರ್‌ಗಳಲ್ಲಿ 221 ರನ್‌ ಗಳಿಸಿದ ಆರ್‌ಸಿಬಿ ಆಲೌಟ್ ಆಗುವ ಮೂಲಕ ಒಂದು ರನ್‌ ಅಂತರದ ಸೋಲು ಕಂಡಿತು.

ಏಪ್ರಿಲ್ 21 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಕೆಕೆಆರ್ ವಿರುದ್ಧ ಐಪಿಎಲ್ 2024ನೇ ಆವೃತ್ತಿಯ 36ನೇ ಪಂದ್ಯದಲ್ಲಿ ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ತಂಡವು ನಿಧಾನಗತಿಯ ಓವರ್ ರೇಟ್ ಅನ್ನು ಕಾಯ್ದುಕೊಂಡಿದ್ದಕ್ಕಾಗಿ ದಂಡ ವಿಧಿಸಲಾಗಿದೆ' ಎಂದು ಸೋಮವಾರ ಐಪಿಎಲ್ ಹೇಳಿಕೆ ತಿಳಿಸಿದೆ.

ಇದು ಈ ಆವೃತ್ತಿಯಲ್ಲಿ ಆರ್‌ಸಿಬಿಯ ಮೊದಲ ಸ್ಲೋ ಓವರ್-ರೇಟ್ ಅಪರಾಧವಾಗಿತ್ತು.

ಸ್ಯಾಮ್ ಕರಣ್‌ಗೆ ದಂಡ

ಮತ್ತೊಂದೆಡೆ, ಭಾನುವಾರ ಮುಲ್ಲನಪುರದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಮೂರು ವಿಕೆಟ್‌ಗಳ ಸೋಲು ಕಂಡಿದ್ದು, ಪಂದ್ಯದ ಸಂದರ್ಭದಲ್ಲಿ 'ಅಂಪೈರ್ ನಿರ್ಧಾರಕ್ಕೆ ಅಸಮ್ಮತಿ ತೋರಿಸಿದ್ದರಿಂದ' ಪಂಜಾಬ್ ಕಿಂಗ್ಸ್ ತಂಡದ ನಾಯಕ ಸ್ಯಾಮ್ ಕರಣ್‌ಗೆ ಪಂದ್ಯ ಶುಲ್ಕದ ಅರ್ಧದಷ್ಟು ದಂಡ ವಿಧಿಸಲಾಗಿದೆ.

ಫಾಫ್ ಡು ಪ್ಲೆಸಿಸ್ - ಸ್ಯಾಮ್ ಕರಣ್‌
IPL 2024: ಪಂಜಾಬ್ ವಿರುದ್ಧ ಗೆದ್ದು ಬೀಗಿದ ಗುಜರಾತ್; ಸತತ ನಾಲ್ಕನೇ ಗೆಲುವು ಕಂಡ GT

ಕರಣ್ ಅವರು ಐಪಿಎಲ್‌ನ ನೀತಿ ಸಂಹಿತೆಯ ಆರ್ಟಿಕಲ್ 2.8 ರ ಅಡಿಯಲ್ಲಿ ಲೆವೆಲ್ 1 ಅಪರಾಧವನ್ನು ಮಾಡಿದ್ದಾರೆ. ಅವರು ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ನೀತಿ ಸಂಹಿತೆಯ ಹಂತ 1ರ ಉಲ್ಲಂಘನೆಗಾಗಿ ದಂಡ ವಿಧಿಸಲಾಗಿದೆ ಎಂದು ಐಪಿಎಲ್ ಮಾಧ್ಯಮ ಪ್ರಕಟಣೆ ತಿಳಿಸಿದೆ.

ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ತಂಡ ನಿಗದಿತ 20 ಓವರ್‌ಗಳಲ್ಲಿ 142 ರನ್‌ಗಳಿಗೆ ಆಲೌಟ್ ಆಯಿತು. ಈ ಸುಲಭ ಸವಾಲನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡ 19.1 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 146 ರನ್ ಗಳಿಸಿ 3 ವಿಕೆಟ್‌ಗಳ ಗೆಲುವು ಸಾಧಿಸಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com