
ಮುಂಬೈ: ನಟಿ ತಮನ್ನಾ ಭಾಟಿಯಾ ಅವರಿಗೆ ಮಹಾರಾಷ್ಟ್ರ ಸೈಬರ್ ಇಲಾಖೆಯಿಂದ ಗುರುವಾರ ನೊಟೀಸ್ ಜಾರಿ ಮಾಡಲಾಗಿದೆ. ಐಪಿಎಲ್ 2023ನ್ನು ಫೈರ್ ಪ್ಲೇ ಆಪ್ ನಲ್ಲಿ ಅಕ್ರಮವಾಗಿ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ನಡೆಸಲು ಈ ನೊಟೀಸ್ ಜಾರಿ ಮಾಡಲಾಗಿದೆ.
ಅಕ್ರಮವಾಗಿ ಐಪಿಎಲ್ನ ಪ್ರಸಾರ ಮಾಡಿದ ಆರೋಪ ಹೊಂದಿರುವ ‘ಫೇರ್ಪ್ಲೇ’ ಆ್ಯಪ್ನ ಪ್ರಚಾರದಲ್ಲಿ ನಟಿ ತಮನ್ನಾ ಭಾಟಿಯಾ ಕೂಡ ಭಾಗಿ ಆಗಿದ್ದರು ಎನ್ನಲಾಗಿದೆ. ಈ ಆ್ಯಪ್ ಮಹದೇವ್ ಆನ್ಲೈನ್ ಗೇಮಿಂಗ್ ಆ್ಯಪ್ನ ಅಂಗಸಂಸ್ಥೆ ಆಗಿದೆ.
ಸೆಲೆಬ್ರಿಟಿಗಳು ಹಲವು ಪ್ರಾಡಕ್ಟ್ಗಳ ಪ್ರಚಾರ ಮಾಡುತ್ತಾರೆ. ಅನೇಕ ಬಾರಿ ತಾವು ಪ್ರಮೋಷನ್ ಮಾಡುತ್ತಿರುವ ಸಂಸ್ಥೆ ಎಂಥದ್ದು, ಅದರ ಹಿನ್ನೆಲೆ ಏನು ಎಂಬುದನ್ನು ತಿಳಿಯದೇ ದುಡ್ಡಿದಾಗಿ ಜಾಹೀರಾತು ಮಾಡಿಕೊಡುತ್ತಾರೆ. ಸಂಸ್ಥೆಗಳು ಈ ರೀತಿ ತೊಂದರೆಗೆ ಸಿಲುಕಿದಾಗ ಅದರ ಪ್ರಚಾರ ಮಾಡಿದವರೂ ವಿಚಾರಣೆ ಎದುರಿಸಬೇಕಾಗುತ್ತದೆ. ಇದೇ ರೀತಿ ನಟಿ ತಮನ್ನಾಗೆ ನೊಟೀಸ್ ಜಾರಿ ಮಾಡಲಾಗಿದೆ.
ಆಪ್ ನ ಈ ಪ್ರಸಾರದಿಂದ ವಯಾಕಾಮ್‌ಗೆ ಸಾಕಷ್ಟು ಆರ್ಥಿಕ ನಷ್ಟವಾಗಿದೆ. ನೊಟೀಸ್ ಜಾರಿಯಾದ ಹಿನ್ನೆಲೆಯಲ್ಲಿ ನಟಿ ತಮನ್ನಾ ಏಪ್ರಿಲ್ 29 ರಂದು ಮಹಾರಾಷ್ಟ್ರದ ಸೈಬರ್ ಭದ್ರತೆ ಮತ್ತು ಸೈಬರ್ ಅಪರಾಧ ತನಿಖೆಗೆ ನೋಡಲ್ ಏಜೆನ್ಸಿಯ ಮುಂದೆ ಹಾಜರಾಗಬೇಕಾಗಿದೆ.
ಮಹಾರಾಷ್ಟ್ರ ಸೈಬರ್ ವಿಭಾಗವು ಬಾಲಿವುಡ್ ನಟ ಸಂಜಯ್ ದತ್ ಅವರನ್ನು ಏಪ್ರಿಲ್ 23 ರಂದು ಹಾಜರಾಗುವಂತೆ ಕೇಳಿದೆ. ಆದರೆ ಅವರು ಹಾಜರಾಗಲಿಲ್ಲ. ಬದಲಾಗಿ, ಅವರು ತಮ್ಮ ಹೇಳಿಕೆ ನೀಡಲು ಬೇರೆ ಸಮಯ ನಿಗದಿಪಡಿಸುವಂತೆ ಕೇಳಿಕೊಂಡರು, ಆ ದಿನಾಂಕದಂದು ಅವರು ಭಾರತದಲ್ಲಿ ಇರಲಿಲ್ಲ ಎಂದು ತಿಳಿದುಬಂದಿದೆ.
2023ರ ಐಪಿಎಲ್ ಒಟಿಟಿ ಹಕ್ಕು ಜಿಯೋ ಸಿನಿಮಾ ಬಳಿ ಇತ್ತು. ಯಾವುದೇ ಬ್ರಾಡಕಾಸ್ಟಿಂಗ್ ಹಕ್ಕು ಪಡೆಯದೇ ಆ ವರ್ಷ ಐಪಿಎಲ್ನ ಫೇರ್ಪ್ಲೇ ಆ್ಯಫ್ನಲ್ಲಿ ಪ್ರಸಾರ ಮಾಡಲಾಗಿತ್ತು. ಇದರಿಂದ ಅಧಿಕೃತವಾಗಿ ಪ್ರಸಾರ ಹಕ್ಕು ಪಡೆದ ಜಿಯೋ ಸಿನಿಮಾಗೆ ಸಾಕಷ್ಟು ನಷ್ಟ ಆಗಿತ್ತು. ಹೀಗಾಗಿ, ಫೇರ್ಪ್ಲೇ ಆ್ಯಪ್ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ.
Advertisement