IPL 2024: ಹೊಸ ಆತ್ಮವಿಶ್ವಾಸದಲ್ಲಿ RCB; ಗುಜರಾತ್ ಟೈಟಾನ್ಸ್ ವಿರುದ್ಧ ಗೆಲುವಿನ ಓಟ ಮುಂದುವರಿಸಲು ತವಕ

ಭಾನುವಾರ ಇಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನ 2024ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಗುಜರಾತ್ ಟೈಟಾನ್ಸ್ (ಜಿಟಿ) ತಂಡದೊಂದಿಗೆ ಸೆಣಸಲಿದೆ. ಸನ್‌ರೈಸರ್ಸ್ ಹೈದರಾಬಾದ್‌ ತಂಡದ ಎದುರು ಗೆಲುವು ಸಾಧಿಸುವ ಮೂಲಕ ಹೊಸ ಹುಮ್ಮಸ್ಸಿನಲ್ಲಿರುವ ಆರ್‌ಸಿಬಿ ಇದೀಗ ಮತ್ತೊಂದು ಪಂದ್ಯ ಗೆಲ್ಲುವ ವಿಶ್ವಾಸದಲ್ಲಿದೆ.
ಶುಭಮನ್ ಗಿಲ್ - ಫಾಫ್ ಡು ಪ್ಲೆಸಿಸ್
ಶುಭಮನ್ ಗಿಲ್ - ಫಾಫ್ ಡು ಪ್ಲೆಸಿಸ್

ಅಹಮದಾಬಾದ್: ಭಾನುವಾರ ಇಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನ 2024ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಗುಜರಾತ್ ಟೈಟಾನ್ಸ್ (ಜಿಟಿ) ತಂಡದೊಂದಿಗೆ ಸೆಣಸಲಿದೆ. ಸನ್‌ರೈಸರ್ಸ್ ಹೈದರಾಬಾದ್‌ ತಂಡದ ಎದುರು ಗೆಲುವು ಸಾಧಿಸುವ ಮೂಲಕ ಹೊಸ ಹುಮ್ಮಸ್ಸಿನಲ್ಲಿರುವ ಆರ್‌ಸಿಬಿ ಇದೀಗ ಮತ್ತೊಂದು ಪಂದ್ಯ ಗೆಲ್ಲುವ ವಿಶ್ವಾಸದಲ್ಲಿದೆ.

ಗುಜರಾತ್ ಟೈಟಾನ್ಸ್ ತಂಡ ಆಡಿರುವ 9 ಪಂದ್ಯಗಳಲ್ಲಿ 4ರಲ್ಲಿ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಸದ್ಯ ಏಳನೇ ಸ್ಥಾನದಲ್ಲಿದೆ. ಇತ್ತ ಆರ್‌ಸಿಬಿ 9 ಪಂದ್ಯಗಳನ್ನು ಆಡಿದ್ದು, ಕೇವಲ 2ರಲ್ಲಿ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಕೊನೇ ಸ್ಥಾನದಲ್ಲಿದೆ.

ರಜತ್ ಪಾಟಿದಾರ್ ಅವರ ಆಕರ್ಷಕ ಬ್ಯಾಟಿಂಗ್ ಮತ್ತು ಮಧ್ಯಮ ಕ್ರಮಾಂಕದಲ್ಲಿ ಬರುವ ಕ್ಯಾಮರೂನ್ ಗ್ರೀನ್ ಮೇಲೆ ಆರ್‌ಸಿಬಿ ಸದ್ಯ ಭರವಸೆಯನ್ನಿಟ್ಟಿದೆ. ಕಳೆದ ಪಂದ್ಯದಲ್ಲಿ 20 ಎಸೆತಗಳಲ್ಲಿ ವೇಗದ ಅರ್ಧಶತಕ ಗಳಿಸಿದ ರಜತ್ ಪಾಟೀದಾರ್ ಅವರು ಹೈದರಾಬಾದ್ ವಿರುದ್ಧ ತಂಡದ ಗೆಲುವಿಗೆ ನೆರವಾಗಿದ್ದರು. ಗ್ರೀನ್ ಬ್ಯಾಟಿಂಗ್ ಸೇರಿದಂತೆ ಬೌಲಿಂಗ್‌ನಲ್ಲೂ ಅತ್ಯುತ್ತಮ ಪ್ರದರ್ಶನ ನೀಡಿದ್ದರು.

ಶುಭಮನ್ ಗಿಲ್ - ಫಾಫ್ ಡು ಪ್ಲೆಸಿಸ್
IPL 2024: ಮರುಭೂಮಿಯಲ್ಲಿ ಮಳೆಯ ಸಿಂಚನದಂತೆ, ಸತತ ಸೋಲಿನ ಬಳಿಕನ SRH ವಿರುದ್ಧ RCB ಗೆ ಗೆಲುವು!

ಈ ಆವೃತ್ತಿಯಲ್ಲಿ ಸಾಧಾರಣ ಆರಂಭ ಪಡೆದುಕೊಂಡಿದ್ದ ಪಾಟಿದಾರ್, ತಮ್ಮ ಬ್ಯಾಟಿಂಗ್ ಕೌಶಲ್ಯಗಳನ್ನು ಪಂದ್ಯದಿಂದ ಪಂದ್ಯಕ್ಕೆ ಉತ್ತಮ ಪ್ರದರ್ಶನ ತೋರುತ್ತಿದ್ದು, ವಿಶೇಷವಾಗಿ ಸ್ಪಿನ್ನರ್‌ಗಳ ವಿರುದ್ಧ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ಮಾಡುತ್ತಿದ್ದಾರೆ.

ಗ್ರೀನ್ ಕೂಡ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 20 ಎಸೆತಗಳಲ್ಲಿ 37 ರನ್ ಗಳಿಸಿ RCB ಯನ್ನು 200 ರನ್ ಗಳ ಗಡಿ ದಾಟಿಸಿದರು. ಇದು ಆರ್‌ಸಿಬಿಗೆ ದಿನೇಶ್ ಕಾರ್ತಿಕ್ ಮತ್ತು ಮಹಿಪಾಲ್ ಲೊಮ್ರೋರ್ ಅವರ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಸಹಾಯ ಮಾಡಿದೆ. ಜೊತೆಗೆ ಆರಂಭಿಕರಾದ ವಿರಾಟ್ ಕೊಹ್ಲಿ ಮತ್ತು ಫಾಫ್ ಡು ಪ್ಲೆಸಿಸ್ ಅವರ ಮೇಲಿನ ಒತ್ತಡವನ್ನು ಸಹ ಕಡಿಮೆ ಮಾಡಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ

ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್, ವಿಜಯ್ ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೂನ್ ಗ್ರೀನ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರಣ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

ಗುಜರಾತ್ ಟೈಟಾನ್ಸ್

ಶುಭಮನ್ ಗಿಲ್ (ನಾಯಕ), ಡೇವಿಡ್ ಮಿಲ್ಲರ್, ಮ್ಯಾಥ್ಯೂ ವೇಡ್, ವೃದ್ಧಿಮಾನ್ ಸಾಹಾ, ಕೇನ್ ವಿಲಿಯಮ್ಸನ್, ಅಭಿನವ್ ಮನೋಹರ್, ಬಿ ಸಾಯಿ ಸುದರ್ಶನ್, ದರ್ಶನ್ ನಲ್ಕಂಡೆ, ವಿಜಯ್ ಶಂಕರ್, ಜಯಂತ್ ಯಾದವ್, ರಾಹುಲ್ ತೆವಾಟಿಯಾ, ನೂರ್ ಅಹ್ಮದ್, ಸಾಯಿ ಕಿಶೋರ್, ರಶೀದ್ ಖಾನ್, ಜೋಶುವಾ ಲಿಟಲ್, ಮೋಹಿತ್ ಶರ್ಮಾ, ಅಜ್ಮತುಲ್ಲಾ ಒಮರ್ಜಾಯ್, ಉಮೇಶ್ ಯಾದವ್, ಶಾರುಖ್ ಖಾನ್, ಸುಶಾಂತ್ ಮಿಶ್ರಾ, ಕಾರ್ತಿಕ್ ತ್ಯಾಗಿ, ಮಾನವ್ ಸುತಾರ್, ಸ್ಪೆನ್ಸರ್ ಜಾನ್ಸನ್, ಸಂದೀಪ್ ವಾರಿಯರ್, ಬಿಆರ್ ಶರತ್.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com