IPL 2024: ನೀತಿ ಸಂಹಿತೆ ಉಲ್ಲಂಘನೆ; ಮುಂಬೈ ಇಂಡಿಯನ್ಸ್ ವಿಕೆಟ್ ಕೀಪರ್ ಇಶಾನ್ ಕಿಶನ್‌ಗೆ ದಂಡ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ನೇ ಆವೃತ್ತಿಯ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಮುಂಬೈ ಇಂಡಿಯನ್ಸ್‌ನ ವಿಕೆಟ್‌ಕೀಪರ್-ಬ್ಯಾಟರ್ ಇಶಾನ್ ಕಿಶನ್ ಅವರಿಗೆ ವಾಗ್ದಂಡನೆ ವಿಧಿಸಲಾಗಿದೆ ಮತ್ತು ಅವರ ಪಂದ್ಯ ಶುಲ್ಕದ ಶೇ 10ರಷ್ಟು ದಂಡ ವಿಧಿಸಲಾಗಿದೆ.
ಇಶಾನ್ ಕಿಶನ್‌
ಇಶಾನ್ ಕಿಶನ್‌

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ನೇ ಆವೃತ್ತಿಯ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಮುಂಬೈ ಇಂಡಿಯನ್ಸ್‌ನ ವಿಕೆಟ್‌ಕೀಪರ್-ಬ್ಯಾಟರ್ ಇಶಾನ್ ಕಿಶನ್ ಅವರಿಗೆ ವಾಗ್ದಂಡನೆ ವಿಧಿಸಲಾಗಿದೆ ಮತ್ತು ಅವರ ಪಂದ್ಯ ಶುಲ್ಕದ ಶೇ 10ರಷ್ಟು ದಂಡ ವಿಧಿಸಲಾಗಿದೆ.

ಶನಿವಾರ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಐಪಿಎಲ್‌ನ ನೀತಿ ಸಂಹಿತೆಯ ಆರ್ಟಿಕಲ್ 2.2 ರ ಅಡಿಯಲ್ಲಿ ಇಶಾನ್ ಕಿಶನ್ ಲೆವೆಲ್ 1 ಅಪರಾಧ ಎಸಗಿದ್ದಾರೆ. ಐಪಿಎಲ್ ನೀತಿ ಸಂಹಿತೆಯ ಹಂತ 1 ಉಲ್ಲಂಘನೆಗಳಿಗೆ ಅವರಿಗೆ ದಂಡ ವಿಧಿಸಲಾಗಿದೆ.

ಜೇಕ್ ಫ್ರೇಸರ್-ಮೆಕ್‌ಗುರ್ಕ್ ಅವರ ಶಕ್ತಿಯುತ ನಾಕ್, ರಸಿಖ್ ದಾರ್ ಸಲಾಮ್, ಮುಖೇಶ್ ಕುಮಾರ್ ಮತ್ತು ಖಲೀಲ್ ಅಹ್ಮದ್ ಅವರ ವೇಗದ ದಾಳಿಗೆ ದೆಹಲಿ ಕ್ಯಾಪಿಟಲ್ಸ್ (ಡಿಸಿ) ಮುಂಬೈ ಇಂಡಿಯನ್ಸ್ ಅನ್ನು 10 ರನ್‌ಗಳಿಂದ ಸೋಲಿಸಲು ನೆರವಾಯಿತು.

ಇಶಾನ್ ಕಿಶನ್‌
ಐಪಿಎಲ್ 2024: ಮುಂಬೈ ತಂಡವನ್ನು 10 ರನ್ ಗಳಿಂದ ಮಣಿಸಿದ ದೆಹಲಿ ತಂಡ!

ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಪರ ತಿಲಕ್ ವರ್ಮಾ 63 ರನ್ ಗಳಿಸಿದರೆ, ನಾಯಕ ಹಾರ್ದಿಕ್ ಪಾಂಡ್ಯ 46 ರನ್ ಗಳಿಸಿದರು. ಟಿಮ್ ಡೇವಿಡ್ 17 ಎಸೆತಗಳಲ್ಲಿ 37 ರನ್ ಗಳಿಸಿದರು. ಆರಂಭಿಕ ಆಘಾತ ಎದರಿಸಿದ ಮುಂಬೈ ತಂಡ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 247 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು 10 ರನ್‌ಗಳ ಜಯ ದಾಖಲಿಸಿತು.

ಟಾಸ್ ಗೆದ್ದ ಮುಂಬೈ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 257 ರನ್ ಕಲೆಹಾಕಿತು.

ಇಶಾನ್ ಕಿಶನ್‌
IPL 2024: ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್, ಪಂಜಾಬ್ ಕಿಂಗ್ಸ್ ನಾಯಕ ಸ್ಯಾಮ್ ಕರಣ್‌ಗೆ ದಂಡ

ಮುಂಬೈ ಇಂಡಿಯನ್ಸ್ ತಂಡ ಈ ಆವೃತ್ತಿಯಲ್ಲಿ ಇದುವರೆಗೂ 9 ಪಂದ್ಯಗಳಲ್ಲಿ ಆಡಿದ್ದು, ಮೂರರಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ 6 ಪಾಯಿಂಟ್ಸ್‌ಗಳೊಂದಿಗೆ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆಡಿರುವ 10 ಪಂದ್ಯಗಳಲ್ಲಿ 5ರಲ್ಲಿ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com