IPL 2024: ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ; ತಂಡಕ್ಕೆ ಗ್ಲೆನ್ ಮ್ಯಾಕ್ಸ್‌ವೆಲ್ ವಾಪಸ್!

ಭಾನುವಾರ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ನೇ ಆವೃತ್ತಿಯ 45ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಶುಭಮನ್ ಗಿಲ್ - ಫಾಫ್ ಡು ಪ್ಲೆಸಿಸ್
ಶುಭಮನ್ ಗಿಲ್ - ಫಾಫ್ ಡು ಪ್ಲೆಸಿಸ್

ಅಹಮದಾಬಾದ್: ಭಾನುವಾರ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ನೇ ಆವೃತ್ತಿಯ 45ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (ಜಿಟಿ) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಕಳೆದ ಕೆಲ ಪಂದ್ಯಗಳಿಂದ ಬ್ರೇಕ್ ತೆಗೆದುಕೊಂಡಿದ್ದ ಆರ್‌ಸಿಬಿಯ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಮರಳಿ ತಂಡದ ಪ್ಲೇಯಿಂಗ್ ಇಲೆವೆನ್ ಭಾಗವಾಗಿದ್ದಾರೆ.

ಈ ಆವೃತ್ತಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವಲ್ಲಿ ಎಡವಿದ್ದ ಆಸ್ಟ್ರೇಲಿಯಾದ ಆಲ್‌ರೌಂಡರ್ ಮ್ಯಾಕ್ಸ್‌ವೆಲ್ ಎರಡು ವಾರಗಳ ಹಿಂದಷ್ಟೇ ಪಂದ್ಯಾವಳಿಯಿಂದ ಐಪಿಎಲ್‌ನಿಂದ ಮಾನಸಿಕ ಮತ್ತು ದೈಹಿಕ ವಿರಾಮವನ್ನು ತೆಗೆದುಕೊಳ್ಳಲು ನಿರ್ಧರಿಸಿದ್ದರು. ಇದೀಗ ತಂಡಕ್ಕೆ ಮರಳಿದ್ದು, ತಂಡದ ಗೆಲುವಿಗೆ ಬಲ ತುಂಬುವ ವಿಶ್ವಾಸ ಅಭಿಮಾನಿಗಳಲ್ಲಿ ವ್ಯಕ್ತವಾಗಿದೆ.

ಶುಭಮನ್ ಗಿಲ್ - ಫಾಫ್ ಡು ಪ್ಲೆಸಿಸ್
ಪಂದ್ಯದಿಂದ ನನ್ನನ್ನು ಹೊರಗಿಡಿ; RCB ನಾಯಕ ಫಾಫ್ ಡುಪ್ಲೆಸಿ ಬಳಿ ಮನವಿ ಮಾಡಿದ್ದ ಗ್ಲೆನ್ ಮ್ಯಾಕ್ಸ್‌ವೆಲ್

ಗುಜರಾತ್ ಟೈಟಾನ್ಸ್ ತಂಡವು ಕಳೆದ ಪಂದ್ಯದ ಪ್ಲೇಯಿಂಗ್ ಇಲೆವೆನ್‌ ಅನ್ನು ಹಾಗೆಯೇ ಉಳಿಸಿಕೊಂಡಿದೆ.

ಆರ್‌ಸಿಬಿ ಪ್ಲೇಯಿಂಗ್ ಇಲೆವೆನ್

ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಯಶ್ ದಯಾಲ್, ಸ್ವಪ್ನಿಲ್ ಸಿಂಗ್.

ಶುಭಮನ್ ಗಿಲ್ - ಫಾಫ್ ಡು ಪ್ಲೆಸಿಸ್
IPL 2024: ಹೊಸ ಆತ್ಮವಿಶ್ವಾಸದಲ್ಲಿ RCB; ಗುಜರಾತ್ ಟೈಟಾನ್ಸ್ ವಿರುದ್ಧ ಗೆಲುವಿನ ಓಟ ಮುಂದುವರಿಸಲು ತವಕ

ಗುಜರಾತ್ ಟೈಟಾನ್ಸ್: ಶುಭಮನ್ ಗಿಲ್ (ನಾಯಕ), ವೃದ್ಧಿಮಾನ್ ಸಾಹಾ (ವಿಕೆಟ್ ಕೀಪರ್), ಸಾಯಿ ಸುದರ್ಶನ್, ಡೇವಿಡ್ ಮಿಲ್ಲರ್, ಅಜ್ಮತುಲ್ಲಾ ಒಮರ್ಜಾಯ್, ರಾಹುಲ್ ತೆವಾಟಿಯಾ, ಶಾರುಖ್ ಖಾನ್, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ನೂರ್ ಅಹ್ಮದ್, ಮೋಹಿತ್ ಶರ್ಮಾ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com