IPL 2024: ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ 'ಚೇಸ್ ಮಾಸ್ಟರ್' ವಿರಾಟ್ ಕೊಹ್ಲಿ!

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ರನ್ ಮೆಷಿನ್ ಎಂದೇ ಖ್ಯಾತಿ ಪಡೆದಿದ್ದಾರೆ. ಐಪಿಎಲ್ ಇತಿಹಾಸದಲ್ಲಿಯೇ ಅತಿಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. ಸದ್ಯ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ನಾಯಕ ಶಿಖರ್ ಧವನ್ ಅವರನ್ನು ಹಿಂದಿಕ್ಕಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲಿ ರನ್ ಚೇಸ್‌ನಲ್ಲಿ ಹೆಚ್ಚು ಅರ್ಧ ಶತಕ ಬಾರಿಸಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
IPL 2024: ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ 'ಚೇಸ್ ಮಾಸ್ಟರ್' ವಿರಾಟ್ ಕೊಹ್ಲಿ!

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ರನ್ ಮೆಷಿನ್ ಎಂದೇ ಖ್ಯಾತಿ ಪಡೆದಿದ್ದಾರೆ. ಐಪಿಎಲ್ ಇತಿಹಾಸದಲ್ಲಿಯೇ ಅತಿಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. ಸದ್ಯ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ನಾಯಕ ಶಿಖರ್ ಧವನ್ ಅವರನ್ನು ಹಿಂದಿಕ್ಕಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲಿ ರನ್ ಚೇಸ್‌ನಲ್ಲಿ ಹೆಚ್ಚು ಅರ್ಧ ಶತಕ ಬಾರಿಸಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 35 ವರ್ಷದ ಚೇಸ್ ಮಾಸ್ಟರ್ ಐಪಿಎಲ್ 2024ನೇ ಆವೃತ್ತಿಯಲ್ಲಿ ಭಾನುವಾರ ಗುಜರಾತ್ ಟೈಟಾನ್ಸ್ (ಜಿಟಿ) ವಿರುದ್ಧದ ಪಂದ್ಯದಲ್ಲಿ ಈ ದಾಖಲೆ ಬರೆದಿದ್ದಾರೆ.

ವಿರಾಟ್ ಕೊಹ್ಲಿ 44 ಎಸೆತಗಳಲ್ಲಿ 159.09 ಸ್ಟ್ರೈಕ್ ರೇಟ್‌ನಲ್ಲಿ 70 ರನ್ ಗಳಿಸಿ ಅಜೇಯರಾಗಿ ಉಳಿದರು. ಈ ವೇಳೆ ಅವರು 6 ಬೌಂಡರಿಗಳು ಮತ್ತು 3 ಸಿಕ್ಸರ್ ಸಿಡಿಸಿದರು. ಚೇಸಿಂಗ್ ಮಾಡುವಾಗ 24 ಅರ್ಧಶತಕ ಗಳಿಸಿರುವ ಕೊಹ್ಲಿ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಶಿಖರ್ ಧವನ್ 23 ಅರ್ಧಶತಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಈಮಧ್ಯೆ, ಚೇಸಿಂಗ್ ವೇಳೆ 35 ಅರ್ಧ ಶತಕ ಗಳಿಸಿರುವ ಡೇವಿಡ್ ವಾರ್ನರ್ ಅಗ್ರಸ್ಥಾನದಲ್ಲಿದ್ದಾರೆ.

ಗುಜರಾತ್ ಟೈಟಾನ್ಸ್ ಎದುರಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮತ್ತು ವಿಲ್ ಜಾಕ್ಸ್ ನಡುವಿನ 133 ರನ್‌ಗಳ ಜೊತೆಯಾಟ ಸಹ ಇದೀಗ ಇತಿಹಾಸದ ಪುಟ ಸೇರಿದೆ. ಇದು ಐಪಿಎಲ್ ಇತಿಹಾಸದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ದಾಖಲಾದ ಗರಿಷ್ಠ ಜೊತೆಯಾಟವಾಗಿದೆ. ಈಮಧ್ಯೆ, ರಾಜಸ್ಥಾನ್ ರಾಯಲ್ಸ್‌ ನಾಯಕ ಸಂಜು ಸ್ಯಾಮ್ಸನ್ ಮತ್ತು ರಿಯಾನ್ ಪರಾಗ್ ಅವರ 130 ರನ್ ಜೊತೆಯಾಟವು ಜಿಟಿ ವಿರುದ್ಧ ಗಳಿಸಿದ ಅತ್ಯಧಿಕ ಜೊತೆಯಾಟದಲ್ಲಿ ಎರಡನೇ ಸ್ಥಾನ ಪಡೆದಿದೆ.

IPL 2024: ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ 'ಚೇಸ್ ಮಾಸ್ಟರ್' ವಿರಾಟ್ ಕೊಹ್ಲಿ!
'ನಾನು ಕೋಪಗೊಂಡಿದ್ದೆ'; ವಿಲ್ ಜಾಕ್ಸ್ ಜೊತೆ ಡ್ರೆಸ್ಸಿಂಗ್ ರೂಂನಲ್ಲಿ ವಿರಾಟ್ ಕೊಹ್ಲಿ ಹೇಳಿದ್ದೇನು?

ಕೊಹ್ಲಿ ಮತ್ತೊಂದು ದಾಖಲೆ

ಐಪಿಎಲ್ ಆವೃತ್ತಿಗಳಲ್ಲಿ ಅತಿ ಹೆಚ್ಚು 500 ಪ್ಲಸ್ ರನ್ ಗಳಿಸಿದ ಡೇವಿಡ್ ವಾರ್ನರ್ ಅವರ ದಾಖಲೆಯನ್ನು ಸಹ ಕೊಹ್ಲಿ ಸರಿಗಟ್ಟಿದ್ದಾರೆ. ಕೊಹ್ಲಿ ಮತ್ತು ವಾರ್ನರ್ ಇಬ್ಬರೂ ಈವರೆಗಿನ ಐಪಿಎಲ್ ಆವೃತ್ತಿಗಳಲ್ಲಿ ಏಳು ಬಾರಿ 500 ರನ್ ಗಡಿ ದಾಟಿದ್ದಾರೆ.

ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ

ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ 20 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 200 ರನ್ ಗಳಿಸಿತು. ಈ ಸವಾಲಿನ ಮೊತ್ತವನ್ನು ಬೆನ್ನತ್ತಿದ ಆರ್‌ಸಿಬಿ ಒಂದು ವಿಕೆಟ್ ನಷ್ಟಕ್ಕೆ ಇನ್ನೂ 24 ಎಸೆತಗಳು ಬಾಕಿ ಇರುವಾಗಲೇ ಅಮೋಘ 9 ವಿಕೆಟ್‌ಗಳ ಗೆಲುವು ಸಾಧಿಸಿತು.

ರನ್ ಚೇಸಿಂಗ್ ಸಮಯದಲ್ಲಿ ವಿರಾಟ್ ಕೊಹ್ಲಿ (70*) ಮತ್ತು ವಿಲ್ ಜಾಕ್ಸ್ (100*) ಅವರ ಆಕರ್ಷಕ ಜೊತೆಯಾಟವು ತಂಡವನ್ನು ಗೆಲುವಿನ ದಡ ಸೇರಿಸಲು ನೆರವಾಯಿತು.

IPL 2024: ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ 'ಚೇಸ್ ಮಾಸ್ಟರ್' ವಿರಾಟ್ ಕೊಹ್ಲಿ!
IPL 2024: ಜಿಟಿ ವಿರುದ್ಧ ಭರ್ಜರಿ ಗೆಲುವು; ಆರ್‌ಸಿಬಿ ಪ್ಲೇಆಫ್ ಕನಸು ಇನ್ನೂ ಜೀವಂತ!

ಈ ಗೆಲುವಿನ ನಂತರ, ಆರ್‌ಸಿಬಿ ಆರು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿಯೇ ಇದೆ. ಈಮಧ್ಯೆ, ಜಿಟಿ ಆಡಿರುವ 10 ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆಲುವು ಸಾಧಿಸಿದ್ದು, ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com